ಶಿಖರದಿಂದ ಸಾಗರದವರೆಗೆ ಯುವತಿಯರ ಸಾಹಸ ಯಾತ್ರೆ: ಮಲ್ಪೆಗೆ ಆಗಮಿಸಿದ ಕಯಾಕಿಂಗ್‌  ತಂಡ


Team Udayavani, Oct 29, 2021, 7:12 AM IST

ಶಿಖರದಿಂದ ಸಾಗರದವರೆಗೆ ಯುವತಿಯರ ಸಾಹಸ ಯಾತ್ರೆ: ಮಲ್ಪೆಗೆ ಆಗಮಿಸಿದ ಕಯಾಕಿಂಗ್‌  ತಂಡ

ಮಲ್ಪೆ: ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರದಿಂದ ಸಾಗರ’ ಐತಿಹಾಸಿಕ ಯಾನದಲ್ಲಿ ಭಾಗಿಯಾಗಿರುವ ರಾಜ್ಯದ 5 ಯುವತಿಯರು ಕಾಶ್ಮೀರದಲ್ಲಿ ಕೋಲ್‌ಹೈ (5,425 ಮೀ.) ಶಿಖರವನ್ನು ಯಸ್ವಿಯಾಗಿ ಏರಿ, ಅನಂತರ ಲಡಾಖ್‌ನಿಂದ 3,000 ಕಿ.ಮೀ. ಸೈಕಲ್‌ ಯಾನ ಮಾಡುತ್ತಾ ಕಾರವಾರ ತಲುಪಿದ್ದು, ಕಾರವಾರದಿಂದ ಕರ್ನಾಟಕದ ಕರಾವಳಿಯ 300 ಕಿ.ಮೀ. ಸಮುದ್ರದಲ್ಲಿ ಕಯಾಕಿಂಗ್‌ ಯಾನ ಮಾಡುತ್ತ ಗುರುವಾರ ಮಲ್ಪೆ ಸಮುದ್ರ ತೀರಕ್ಕೆ ಆಗಮಿಸಿದ್ದಾರೆ. ಯಾತ್ರೆಯು ಮಂಗಳೂರಿನಲ್ಲಿ  ಮುಕ್ತಾಯಗೊಳ್ಳಲಿದೆ.

ಮಲ್ಪೆ ಸಮದ್ರ ತೀರದಲ್ಲಿ ಜಿಲ್ಲಾಡಳಿತದ ಪರವಾಗಿ ಪ್ರಭಾರ ಜಿಲ್ಲಾಧಿ ಕಾರಿಯಾಗಿರುವ ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ಸ್ವಾಗತಿಸಿದರು. ಯುವತಿಯರು ಸಾಹಸ ಕ್ರೀಡೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸುವ ಜತೆಗೆ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತು ¤ಒಲಿಂಪಿಕ್‌ನಲ್ಲಿ ಉತ್ತಮ ಸಾಧನೆ ಮಾಡುವ ದಿಟ್ಟ ನಿರ್ಧಾರ ಮಾಡಬೇಕು ಎಂದು ತಿಳಿಸಿದರು.

ಅನುಭವ ಹಂಚಿಕೊಂಡ ಯುವತಿಯರು:

ಶಿಖರವೇರುವ ಸಂದರ್ಭ 25 ಕೆ.ಜಿ.ಗೂ ಅಧಿಕ ಭಾರದ ಬ್ಯಾಗ್‌ಗಳನ್ನು ಹೊತ್ತುಕೊಂಡು, ಜೀವವನ್ನು ಪಣಕ್ಕಿಟ್ಟು ಸಾಹಸ ಮಾಡಿದ್ದೇವೆ. ಯಾನದ ವೇಳೆ ಟೆಂಟ್‌ ಹಾಕುವುದು, ಅಡುಗೆ ಸೇರಿದಂತೆ ನಮ್ಮ ಎಲ್ಲ ಅಗತ್ಯಗಳನ್ನು ಯಾರನ್ನೂ ಅವಲಂಬಿಸದೇ ಶಿಖರವನ್ನು ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಏರಿ ಸಾಧನೆ ಮಾಡಿದ್ದೇವೆ. ಸೈಕ್ಲಿಂಗ್‌ ವೇಳೆ ವಿವಿಧ ಪ್ರದೇಶಗಳಲ್ಲಿನ ಯುವತಿಯರು ಮತ್ತು ಮಹಿಳೆಯರ ಸಮಸ್ಯೆಗಳನ್ನು ಕಂಡಿದ್ದು, ಮಹಿಳೆ ಯರು ಮನೆಯಿಂದ ಹೊರಬಂದು ಸಾಹಸಿಗಳಾಗಬೇಕು ಎನ್ನುವ ಉದ್ದೇಶ ದಿಂದ ಮುಂದಿನ ದಿನದಲ್ಲಿ ಅರಿವು ಕಾರ್ಯಕ್ರಮಗಳನ್ನು  ಮಾಡುವ ಉದ್ದೇಶ ಇದೆ ಎಂದು ಐತಿಹಾಸಿಕ ಯಾನದ ತಂಡದಲ್ಲಿರುವ ಶಿವಮೊಗ್ಗದ ಐಶ್ವರ್ಯಾ ಮತ್ತು ಧನಲಕ್ಷ್ಮೀ, ಬೆಂಗಳೂರಿನ ಆಶಾ, ಮಡಿಕೇರಿಯ ಪುಷ್ಪಾ ಮತ್ತು ಮೈಸೂರಿನ ಬಿಂದು ಅವರು ಯಾತ್ರೆಯ ಅನುಭವ ಹಂಚಿಕೊಂಡರು.

ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್‌ ಲೋಬೋ ಮತ್ತು ಸಾಹಸ ಯಾತ್ರೆಯ ಮಾರ್ಗದರ್ಶಕರಾಗಿ ಕೆಲಸ ಮಾಡಿದ ಶಬ್ಬೀರ್‌ ಉಪಸ್ಥಿತರಿದ್ದರು. ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಅವರು ಸ್ವಾಗತಿಸಿ, ವಂದಿಸಿದರು.

ಪಡುಕರೆಯಲ್ಲಿ  ಸಾಹಸ ತರಬೇತಿ ಕೇಂದ್ರ:

ಉಡುಪಿ ಜಿಲ್ಲೆಯಲ್ಲಿಯೂ ಸಾಹಸ ಕಾರ್ಯ ಕ್ರಮಗಳ ತರಬೇತಿಗೆ ಈಗಾಗಲೇ ಪಡುಕರೆಯಲ್ಲಿ ಸ್ಥಳ ಗುರು ತಿಸ ಲಾಗಿದ್ದು, ಜನರಲ್‌ ತಿಮ್ಮಯ್ಯ ಸಾಹಸ ಅಕಾಡೆಮಿಯ ಮೂಲಕ ಇಲ್ಲೂ ಸಹ ಸಾಹಸ ಕ್ರೀಡೆಗಳ ತರಬೇತಿ ಕೇಂದ್ರ ಆರಂಭವಾಗಲಿದ್ದು, ಜಿಲ್ಲೆಯ ಯುವ ಜನತೆಯ ಈ ಕೇಂದ್ರದ ಪ್ರಯೋಜನ ಪಡೆಯಬೇಕು ಎಂದು ನವೀನ್‌ ಭಟ್‌ ಹೇಳಿದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.