ನಾಟಕ, ಸಿನಿಮಾ ನೋಡುತಾ ಕನ್ನಡ ಬೆಳೆಸೋಣ

ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮದಲ್ಲಿ ಸಚಿವ ವಿ.ಸುನಿಲ್‌ಕುಮಾರ್‌

Team Udayavani, Oct 29, 2021, 11:03 AM IST

ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮದಲ್ಲಿ ಸಚಿವ ವಿ.ಸುನಿಲ್‌ಕುಮಾರ್‌

ಬೆಂಗಳೂರು: ಕನ್ನಡ ಪತ್ರಿಕೆಗಳನ್ನು ಓದುವು ದರ ಜತೆಗೆ ಕನ್ನಡ ನಾಟಕ, ಕನ್ನಡದ ಸಿನಿಮಾಗಳನ್ನು ನೋಡುತ್ತಾ ಕನ್ನಡ ಭಾಷೆ ಮತ್ತು ಸಂಸ್ಕೃತಿ ಯನ್ನು ಮತ್ತಷ್ಟು ಬೆಳೆಸೋಣ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್‌ ಹೇಳಿದರು. “ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗ ವಾಗಿ ಜಯನಗರದ ಚಂದ್ರಗುಪ್ತ ಮೌರ್ಯ (ಶಾಲಿನಿ)ಆಟದ ಮೈದಾನದಲ್ಲಿ ಗುರುವಾರ ನಡೆಯದ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡ ಭಾಷೆ ಕನ್ನಡದ ಸಂಸ್ಕೃತಿ ಹಾಗೂ ಕನ್ನಡ ನಡವಳಿಕೆ ಈ ಮೂರು ಕೂಡ ಕನ್ನಡದ ವ್ಯಕ್ತಿತ್ವವನ್ನು ನಿರ್ಮಾಣ ಮಾಡುತ್ತದೆ ಎಂದರು. ಒಂದು ಲಕ್ಷ ಕಂಠದ ಗಾಯನದ ಕಾರ್ಯ ಕ್ರಮದಲ್ಲಿ ಸುಮಾರು 5 ಲಕ್ಷ ಜನರು ಭಾಗವಹಿಸುತ್ತಾರೆ ಎಂಬ ನಿರೀಕ್ಷೆಯಿತ್ತು.

ಆದರೆ ನಿರೀಕ್ಷೆಗೂ ಮೀರಿ ಸುಮಾರು 10 ಲಕ್ಷಕ್ಕೂ ಅಧಿಕ ಮಂದಿ ಕನ್ನಡ ಸಾಮೂಹಿಕ ಗೀತೆಗಳ ಗಾಯನ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದಾರೆ ಈ ಮೂಲಕ ಕನ್ನಡದ ಪ್ರೇಮವನ್ನು ಬಹು ದೊಡ್ಡ ಪ್ರಮಾಣದಲ್ಲಿ ನಿರ್ಮಾಣ ಮಾಡಿ ದ್ದಾರೆ ಇದು ಸಂತಸ ಪಡುವ ಸಂಗತಿಯಾಗಿದೆ ಎಂದು ತಿಳಿಸಿದರು. ನಮ್ಮ ಮನೆಗಳಲ್ಲಿ ಕನ್ನಡ ಮಾತನಾಡೋಣ, ಸ್ನೇಹಿತರ ಜತೆಗೆ ಕನ್ನಡ ಮಾತ ನಾಡೋಣ ಹಾಗೆಯೇ ಕನ್ನಡದ ಹಾಡುಗಳನ್ನು ಉಳಿದವರಿಗೆ ಕಲಿಸೋಣ ಆ ಮೂಲಕ ಕನ್ನಡ ಸಂಸ್ಕೃತಿ, ಕನ್ನಡದ ನಡವಳಿಕೆ ಮತ್ತು ಕನ್ನಡದ ಭಾಷೆಯನ್ನು ಬೆಳೆಸೋಣ ಎಂದು ಹೇಳಿದರು.

ಇದನ್ನೂ ಓದಿ;- ರೌಡಿಕೊಲೆ: 11 ಮಂದಿ ಬಂಧನ

ಕನ್ನಡ ರಾಜ್ಯೋತ್ಸವ ಒಂದು ಕಾರ್ಯಕ್ರಮ ಅಲ್ಲ ರಾಜ್ಯೋತ್ಸವ ಎಂಬುವುದು ನಮ್ಮ ನಡವಳಿಕೆಯಲ್ಲಿ ನಿರ್ಮಾಣವಾಗ ಬೇಕು.ನಮ್ಮ ಮನೆಗಳಲ್ಲಿ ಮೂಡಿಬರಬೇಕು ಆ ರೀತಿಯ ಪ್ರಯತ್ನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವತ್ತು ಆರಂಭ ಮಾಡಿದೆ.ಇದನ್ನು ಹೀಗೆ ಮುಂದುವರಿಸಿಕೊಂಡು ಹೋಗೋಣ ಎಂದು ತಿಳಿಸಿದರು. ಕನ್ನಡದ ಹಾಡು ಅಂದಾಗ ಕುಣಿದು ಕುಪ್ಪಳಿಸಿದ್ದೀರಿ ವಿಧಾನ ಸೌಧದ ಮೆಟ್ಟಿಲಿನಿಂದ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಅಸಂಖ್ಯಾತ ಸಂಖ್ಯೆಯಲ್ಲಿ ಜನರು ಕನ್ನಡ ಸಾಮೂಹಿ ಗೀತಗಾಯನ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದಾರೆ. ಅದಕ್ಕಾಗಿ ಧನ್ಯವಾದ ಕನ್ನಡದ ಜತೆಗೆ ಸಲ್ಲಿಸುತ್ತಿರುವುದಾಗಿ ಹೇಳಿದರು.

ಕನ್ನಡ ಪ್ರೀತಿ ಅಕ್ಟೋಬರ್‌ನಿಂದಲೆ ಹಬ್ಬಿದೆ: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಪ್ರತಿ ಸಲ ಕನ್ನಡ ರಾಜ್ಯೋತ್ಸವ ನವೆಂಬರ್‌ ತಿಂಗಳಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರ ಪ್ರಯತ್ನದಿಂದಾಗಿ ಈ ವರ್ಷ ಅಕ್ಟೋಬರ್ ನಿಂದಲೇ ಕನ್ನಡದ ಜ್ವರ,ಕನ್ನಡದ ಪ್ರೀತಿ ಈಗಾಗಲೇ ಹಬ್ಬಿದೆ ಎಂದರು.

ಟಾಪ್ ನ್ಯೂಸ್

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.