ಸಾಧುಕೋಕಿಲ ನಿರ್ದೇಶನದಲ್ಲಿ ‘ಮಹಾಯೋಗಿ ಸಿದ್ದರೂಢ’


Team Udayavani, Oct 29, 2021, 11:38 AM IST

ಸಾಧುಕೋಕಿಲ ನಿರ್ದೇಶನದಲ್ಲಿ ‘ಮಹಾಯೋಗಿ ಸಿದ್ದರೂಢ’

ನಟನೆಯಲ್ಲಿ ಬಿಝಿಯಾಗಿರುವ ಸಾಧುಕೋಕಿಲ ಸದ್ದಿಲ್ಲದೇ ಸಿನಿಮಾವೊಂದನ್ನು ನಿರ್ದೇಶಿಸಿದ್ದಾರೆ. ಅದು “ಮಹಾಯೋಗಿ ಸಿದ್ದರೂಢ’. ಬಾಗಲಕೋಟೆಯ ಮುಧೋಳದ ಮಂಟೂರಿನ ಶ್ರೀ ಸದಾನಂದ ಮಹಾಸ್ವಾಮಿಗಳು ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಬಿಡುಗಡೆ ಬಳಿಕ ಮಾತನಾಡಿದ ಪುನೀತ್‌, “ನಮ್ಮ ಮನೆಗೂ, ಸಿದ್ದರೂಢ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಅಪ್ಪಾಜಿ ಅವರಾಗಲಿ, ನಮ್ಮ ಕುಟುಂಬದ ಯಾರೇ ಆಗಲಿ, ಹುಬ್ಬಳ್ಳಿಗೆ ಹೋದಾಗ ಸಿದ್ದರೂಢರ ಮಠಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ನಮ್ಮ ಅಜ್ಜಿ ಅವರು ಕೆಲವು ದಿನಗಳ ಕಾಲ ಈ ಮಠದÇÉೇ ಇದ್ದರು ಎಂದು ಅಪ್ಪಾಜಿ ಹೇಳುತ್ತಿದ್ದರು. ಈ ಚಿತ್ರದ ಟ್ರೇಲರ್‌ ಬಿಡುಗಡೆಗೆ ಬರಬೇಕೆಂದು ಸಾಧುಕೋಕಿಲ ಅವರು ಕರೆದಾಗ ಸಂತೋಷವಾಯಿತು’ ಎಂದರು.

ಇದನ್ನೂ ಓದಿ:ಧನ್ವೀರ್‌-ಶ್ರೀಲೀಲಾ ಮಸ್ತ್ ಸ್ಟೆಪ್ಸ್‌: ‘ಬೈ ಟು ಲವ್‌’ ಚಿತ್ರದ ಹಾಡು ಇಂದು ರಿಲೀಸ್‌

ಹೊಸ ಬಗೆಯ ಸಿನಿಮಾವನ್ನು ನಿರ್ದೇಶನ ಮಾಡಿದ ಖುಷಿಯಲ್ಲಿದ್ದ ಸಾಧುಕೋಕಿಲ, “ಶರಣ ಶ್ರೇಷ್ಠರಾದ ಸಿದ್ದರೂಢರ ಜೀವನಾಧಾರಿತ ಚಿತ್ರ ನಿರ್ದೇಶನ ಮಾಡಿದ್ದು ನನ್ನ ಪುಣ್ಯ. ಮಂಟೂರಿನ ಗುರುಗಳು ನನ್ನನ್ನ ಕರೆದು ಈ ರೀತಿಯ ಚಿತ್ರ ಮಾಡಿಕೊಬೇಕೆಂದು ಹೇಳಿದರು. ಈ ಸಲುವಾಗಿ ನನ್ನನ್ನು ದೆಹಲಿಗೆ ಕಳುಹಿಸಿ ಅಲ್ಲಿ ಸ್ವಾಮಿನಾರಾಯಣ ಆಶ್ರಮದಲ್ಲಿ ಗುರುಗಳ ಕುರಿತು ಚಿತ್ರ ಮಾಡಿದ್ದಾರೆ. ನೋಡಿ ಬನ್ನಿ ಎಂದರು. ನೋಡಿ ಬಂದೆ. ಎಲ್ಲರಿಗೂ ಸಾಧುಕೋಕಿಲ, ಇಂತಹ ಚಿತ್ರ ಮಾಡಿದ್ದಾರಾ? ಎಂಬ ಆಶ್ಚರ್ಯ. ನನಗೂ ಮೊದಲು ಹಾಗೆ ಅನಿಸಿತು. ಹೆಚ್ಚಿನ ಜನ ಹುಬ್ಬಳ್ಳಿಯ ಸಿದ್ದರೂಢ ಮಠ ನೋಡಿರುತ್ತೀರಾ. ಆದರೆ ಮಂಟೂರಿನ ಸಿದ್ದರೂಢ ಮಠಕ್ಕೆ ಹೋಗಿ ಬನ್ನಿ. ಒಂದು ರೀತಿ ಸ್ವಾಮಿನಾರಾಯಣ ಮಂದಿರ ಇದ್ದ ಹಾಗೆ ಇದೆ. ನಮ್ಮ ಚಿತ್ರದಲ್ಲಿ ಸಿದ್ದರೂಢರ ಎಂಟು ವರ್ಷದಿಂದ ನಲವತ್ತೆಂಟು ವರ್ಷಗಳ ನಡುವೆ ನಡೆಯುವ ಮಹಿಮೆಗಳನ್ನು ತೋರಿ ಸಲಾಗಿದೆ. ಮಂಟೂರು, ಹೈದರಾಬಾದ್‌, ಕಾಶ್ಮೀರ, ಸಕಲೇಶಪುರ ಹಾಗೂ ಕರ್ನಾಟಕದ ಸುಂದರವಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದರು.

ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ನವೆಂಬರ್‌ 9ರಂದು ಮಂಟೂರಿನ ಚಿತ್ರಮಂದಿರದಲ್ಲಿ 55 ನಿಮಿಷಗಳ ಅವಧಿಯ ಈ ಚಿತ್ರ ಬಿಡುಗಡೆಯಾಗುತ್ತಿದೆ. ಅದೊಂದೆ ಕಡೆ ಮಾತ್ರ ಈ ಚಿತ್ರ ನಿರಂತರವಾಗಿ ಪ್ರದರ್ಶನವಾಗುತ್ತಿರುತ್ತದೆ ಎಂದರು

ಚಿತ್ರದ ಬಗ್ಗೆ ಮಾತನಾಡುವ ಶ್ರೀ ಸದಾನಂದ ಸ್ವಾಮಿಗಳು, “ಮಹಾಶರಣರಾದ ಸಿದ್ದರೂಢರ ಮಹಿಮೆ ಅಪಾರ. ಸುಮಾರು ಏಳುವರೆ ಸಾವಿರಕ್ಕೂ ಅಧಿಕ ಮಾರ್ಗವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿ ದವರು ಅವರು. ಅಂತಹ ಮಹಿಮಾ ಪುರುಷರ ಬಗ್ಗೆ ನಮಗೆ ಚಿತ್ರ ವೊಂ ದನ್ನು ನಿರ್ಮಿಸುವ ಬಯಕೆಯಾಗಿ ಸಾಧುಕೋಕಿಲ ಅವರನ್ನು ಸಂಪರ್ಕಿಸಿದೆವು. ಅವರು ಉತ್ತಮವಾಗಿ ತೆಗೆದು ಕೊಟ್ಟಿದ್ದಾರೆ’ ಎಂದರು. ಚಿತ್ರದಲ್ಲಿ ತೀರ್ಥೇಶ್‌ ಹಾಗೂ ಅರವಿಂದ್‌ ಕುಪ್ಲಿಕರ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.