ಇಂದೇ ಪುನೀತ್ ಅಂತ್ಯಕ್ರಿಯೆ ಸಾಧ್ಯತೆ : ಸಚಿವರಿಂದ ಸ್ಥಳ ಪರಿಶೀಲನೆ
Puneetrajkumar funeral ceremony
Team Udayavani, Oct 30, 2021, 10:49 AM IST
ಅಂತ್ಯಕ್ರಿಯೆಗಾಗಿ ಸಿದ್ಧತೆಯನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಬೆಳಿಗ್ಗೆ ವೀಕ್ಷಣೆ ಮಾಡಿದರು
ಬೆಂಗಳೂರು:ಶುಕ್ರವಾರ ನಿಧನ ಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಗಾಗಿ ಕಂಠೀರವ ಸ್ಟುಡಿಯೋದಲ್ಲಿ ಶನಿವಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವರದಿಗಳ ಪ್ರಕಾರ ಇಂದು ರಾತ್ರಿಯೊಳಗೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆಗಳಿವೆ.
ವರನಟ ಡಾ.ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲೆ ನಡೆಯುತ್ತಿರುವ ಸಿದ್ಧತೆಯನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ಬೆಳಿಗ್ಗೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ವಿಶ್ವನಾಥ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಬಿಬಿಎಂಪಿ ಅಧಿಕಾರಿಗಳು, ಇಂಜಿನಿಯರ್ ಗಳು ಉಪಸ್ಥಿತರಿದ್ದರು.
ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
ತೆಲುಗು ಚಿತ್ರರಂಗದ ಪ್ರಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಪುನೀತ್ ಅವರ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ.
ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರು ಪುನೀತ್ ಅವರ ಅಂತಿಮ ದರ್ಶನ ಪಡೆದರು.
ಧೃತಿ ದೆಹಲಿಗೆ
ಅಮೆರಿಕಾದಿಂದ ಆಗಮಿಸುತ್ತಿರುವ ಮಧ್ಯಾಹ್ನದ ವೇಳೆ ಪುನೀತ್ ಅವರ ಪುತ್ರಿ ಧೃತಿ ದೆಹಲಿಗೆ ತಲುಪಲಿದ್ದು, ಸಂಜೆ ವೇಳೆಗೆ ಬೆಂಗಳೂರು ತಲುಪಲಿದ್ದಾರೆ. ಅವರು ಅಂತಿಮ ದರ್ಶನ ಪಡೆದ ಬಳಿಕ ಸಕಲ ಸರಕಾರಿ ಗೌರವ ಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಪಾರ್ಥಿವ ಶರೀರದ ಮೆರವಣಿಗೆ
ಪುನೀತ್ ಅವರ ಪಾರ್ಥಿವ ಶರೀರದ ಮೆರವಣಿಗೆ ಕಂಠೀರವ ಸ್ಟೇಡಿಯಂನಿಂದ , ಕಂಠೀರವ ಸ್ಟುಡಿಯೋವರೆಗೆ ನಡೆಸಲಾಗುತ್ತಿದ್ದು, ಸಂಜೆ ಗಂಟೆಯಿಂದ ನಡೆಸಲು ಸಕಲ ಸಿದ್ಧತೆಗಳನ್ನು, ಭದ್ರತೆಯನ್ನು ಕೈಗೊಳ್ಳಲಾಗಿದೆ.
ಅಂತ್ಯಕ್ರಿಯೆ ಸ್ಥಳಕ್ಕೆ ಅಭಿಮಾನಿಗಳಿಗಿಲ್ಲ ಪ್ರವೇಶ
ಪುನೀತ್ ಅಂತ್ಯಕ್ರಿಯೆ ವೇಳೆ ಕಂಠೀರವ ಸ್ಟುಡಿಯೋ ಒಳಗೆ ಗಣ್ಯರು ಮತ್ತು ಕುಟುಂಬ ಸದಸ್ಯರಿಗಷ್ಟೇ ಪ್ರವೇಶವಿದ್ದು, ಅಭಿಮಾನಿಗಳಿಗೆ ಪ್ರವೇಶ ನೀಡಲಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.