ಅಪ್ಪು ಅಗಲಿಕೆಗೆ ಅಭಿಮಾನಿಗಳ ಭಾವಪೂರ್ಣ ಶ್ರದ್ದಾಂಜಲಿ
Team Udayavani, Oct 30, 2021, 2:08 PM IST
ವಿಜಯಪುರ: ಕನ್ನಡ ಚಲನಚಿತ್ರ ರಂಗದ ಖ್ಯಾತ ನಾಯಕ ನಟ ಪುನೀತ್ ರಾಜಕುಮಾರ ನಿಧನಕ್ಕೆ ನಗರದಲ್ಲಿ ಅವರ ಅಭಿಮಾನಿಗಳು ಶ್ರದ್ಧಾಂಜಲಿ ಕಾರ್ಯಕ್ರಮಗಳ ಮೂಲಕ ಕಂಬನಿ ಮಿಡಿದಿದ್ದಾರೆ.
ಅಪ್ಪು ನಿಧನದ ಸುದ್ದಿ ತಿಳಿಯುತ್ತಲೇ ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಶ್ರದ್ದಾಂಜಲಿ ಸಭೆ ಆಯೋಜಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದ್ದಾರೆ.
ಈ ವೇಳೆ ಯುವ ಭಾರತ ಸಮಿತಿ ಸಂಸ್ಥಾಪಕ ಉಮೇಶ ಕಾರಜೋಳ ಮಾತನಾಡಿ, ಯುವಕರ ನೆಚ್ಚಿನ ನಟನಾದ ಪುನೀತ್ ಅವರ ಅಗಲಿಕೆ ದುಃಖ ತಂದಿದೆ. ಯುವಕರಿಗೆ ವ್ಯಾಯಾಮ ಹಾಗೂ ಯೋಗದಲ್ಲಿ ಆದರ್ಶವಾಗಿದ್ದರು. ಪವರ್ ಸ್ಟಾರ್ ಆಗಿದ್ದರೂ ಯಾವುದೇ ಗರ್ವವಿಲ್ಲದೆ ಎಲ್ಲರೊಂದಿಗೆ ಬೆರೆಯುತ್ತಿದ್ದ ಪುನೀತ್ ರಾಜಕುಮಾರ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದರು.
ಯುವ ಪರಿಷತ್ ಅಧ್ಯಕ್ಷ ಶರಣು ಸಬರದ ಮಾತನಾಡಿ, ತಂದೆ ಹಾದಿಯಲ್ಲಿಯೇ ನಡೆಯುತಿದ್ದಅಪ್ಪು, ರಾಜಕುಮಾರ ಅವರಂತೆ ಸರಳತೆ ಮೈಗೂಡಿಸಿಕೊಂಡಿದ್ದರು. ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ ಕೆಲವೇ ವರ್ಷಗಳಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಅಪ್ಪು ಅಭಿನಯ ಜನಮಾನಸದಲ್ಲಿ ಅಚ್ಚಳಿಯದೇ ನಿಂತಿದೆ. ನಾಯಕ ನಟನಾಗಿ ಅನೇಕ ಚಿತ್ರಗಳಲ್ಲಿ ಅಮೋಘವಾಗಿ ಅಭಿನಯಿಸಿ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದುದ್ದು ಅಲ್ಲದೆ ಅನೇಕ ವೃದ್ಧಾಶ್ರಮಗಳಿಗೆ ಸಹಾಯ ಹಸ್ತವಾಗಿದ್ದರು. ಪುನೀತ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.
ಇದನ್ನೂ ಓದಿ:ಅಭಿಮಾನಿಗಳ ಒತ್ತಾಯದ ಹಿನ್ನಲೆ ನಾಳೆ ಪುನೀತ್ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ
ವಿನೋದಕುಮಾರ ಮಣೂರ, ಸತೀಶ ಬಾಗಿ, ವೀರೇಶ ಗೋಬ್ಬೂರ, ಬಸವರಾಜ ಕರಿಕಬ್ಬಿ, ಸಂತೋಷ ಝಳಕಿ, ಶೇಶರಾವ್‌ಮಾನೆ, ದಾನೇಶ ಅವಟಿ, ಮಹೇಶ ಹಂಜಿಖಾನೆ ಇತರರು ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.