ಪಾರ್ಕಿಂಗ್ ಶುಲ್ಕ ವಿರೋಧಿಸಿ ನಗರಸಭೆಗೆ ಮುತ್ತಿಗೆ
Team Udayavani, Oct 30, 2021, 3:05 PM IST
ಚಿಕ್ಕಮಗಳೂರು: ಎಂ.ಜಿ. ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸಲು ಮುಂದಾಗಿರುವ ಕ್ರಮ ವಿರೋಧಿಸಿ ಕಾಂಗ್ರೆಸ್‌ನ ಕಿಸಾನ್‌ಸೆಲ್ ಮತ್ತು ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದಕಾರ್ಯಕರ್ತರು ನಗರಸಭೆ ಮತ್ತು ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪಾರ್ಕಿಂಗ್ ಶುಲ್ಕ ವಿಧಿಸುವುದನ್ನು ಕೈಬಿಡುವಂತೆ ಆಗ್ರಹಿಸಿದರು.
ಇದೇ ವೇಳೆ ನಗರಸಭೆ ಕಚೇರಿ ಒಳಗೆ ನುಗ್ಗಲು ಮುಂದಾದ ಮುಖಂಡರು ಮತ್ತು ಕಾರ್ಯಕರ್ತರನ್ನು ತಡೆದ ಪೊಲೀಸರೊಂದಿಗೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು.
ಪೌರಾಯುಕ್ತ ಬಿ.ಸಿ. ಬಸವರಾಜ್ ಸ್ಥಳಕ್ಕಾಗಮಿಸಿದರು. ಈ ವೇಳೆ ಪ್ರತಿಭಟನಾಕಾರರು ನಗರದ ಎಲ್ಲಾ ರಸ್ತೆಗಳೂ ಗುಂಡಿ-ಗೊಟರಿನಿಂದ ಕೂಡಿದ್ದರೂ ಅತ್ತ ತಿರುಗಿ ನೋಡದ ನಗರಸಭೆ ಕಂದಾಯ ಹೆಚ್ಚಳ, ಕಸದ ಗಾಡಿಯ ಶುಲ್ಕ ಹೆಚ್ಚಳ ಸೇರಿದಂತೆ ಅನೇಕ ಜನವಿರೋ ಧಿ ನೀತಿಗಳ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಕೋವಿಡ್ ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ವರ್ಷಗಳಿಂದ ನಗರದ ವರ್ತಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇದೀಗ ಎಂ.ಜಿ. ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ವಿ ಧಿಸಿದರೆ ಮೊದಲೇ ವ್ಯಾಪಾರವಿಲ್ಲದೆ ಕಂಗೆಟ್ಟಿರುವ ವ್ಯಾಪಾರಸ್ಥರು ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ ಬೀದಿಗೆ ಬೀಳಬೇಕಾಗುತ್ತದೆ ಎಂದರು.
ಆಡಳಿತ ಮಂಡಳಿ ಇಲ್ಲದಿದ್ದರೂ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಏಕಾಏಕಿ ನಿರ್ಧಾರ ಮಾಡುವ ಮೂಲಕ ನಗರಸಭೆ ಗೂಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿದಮುಖಂಡರು ನಗರದ ಅನೇಕ ರಸ್ತೆಗಳಲ್ಲಿ ಇಲ್ಲದಿರುವ ಬೀದಿದೀಪಗಳನ್ನು ಹಾಕಲು ಇನ್ನೂ ಎಷ್ಟು ವರ್ಷಬೇಕು ಎಂದು ಆಯುಕ್ತರನ್ನು ಪ್ರಶ್ನಿಸಿದರು.
ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ನಗರದಲ್ಲಿ ಇದೀಗ ನಡೆಯುತ್ತಿರುವ ಯುಜಿಡಿ ಕಾಮಗಾರಿ ಮುಗಿದ ನಂತರ ರಸ್ತೆ ಸರಿಪಡಿಸುವುದು ಸೇರಿದಂತೆ ಉಳಿದಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಬೀದಿದೀಪಗಳಿಗೆ ಎಲ್‌ಇಡಿ ಲೈಟ್‌ಗಳನ್ನು ಅಳವಡಿಸಲಾಗುವುದು ಎಂದರು.
ನ.1ರಿಂದ ಪಾರ್ಕಿಂಗ್ ಶುಲ್ಕ ವಿಧಿಸುವುದನ್ನು ಶಾಸಕರ ಸೂಚನೆ ಮೇರೆಗೆ ಮುಂದೂಡಲಾಗಿದ್ದು ವ್ಯಾಪಕ ಚರ್ಚೆ ನಂತರ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರೇನಳ್ಳಿ ಪ್ರಕಾಶ್, ಉಪಾಧ್ಯಕ್ಷರಾದ ಬಲರಾಮ್, ದಿನೇಶ್‌ಮತ್ತಾವರ, ಕಾರ್ಯದರ್ಶಿ ಸೋಮಶೇಖರ್,ಕಾಂಗ್ರೆಸ್ ಕಿಸಾನ್ ಸೆಲ್‌ನ ರಾಜ್ಯ ಸಂಚಾಲಕಸಿ.ಎನ್.ಅಕ್ಮಲ್, ರಾಜ್ಯಕಾರ್ಯದರ್ಶಿ ಆದಿತ್ಯಗೌಡ, ರಿಜ್ವಾನ್, ಜಬ್ಬಿ, ಜಮೀರ್, ನೂರ್‌ಅಹ್ಮದ್, ಸಾದಿಕ್, ಎನ್.ಎಸ್.ಯು.ಐ. ಅಧ್ಯಕ್ಷ ಆದಿಲ್, ಪ್ರಶಾಂತ್ ಪ್ರತಿಭಟನೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.