ಪುನೀತ್ ಅಂತಿಮ ನಮನ : ಪುತ್ರಿಯ ಕಂಡು ಕಂಠೀರವದಲ್ಲಿ ಕಣ್ಣೀರ ಕೋಡಿ
Team Udayavani, Oct 30, 2021, 6:16 PM IST
ಬೆಂಗಳೂರು : ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಧೃತಿ ಶನಿವಾರ ಅಮೆರಿಕಾದಿಂದ ಆಗಮಿಸಿ ತಂದೆಯ ತಲೆಯನ್ನು ಮುಟ್ಟಿ ಕಣ್ಣೀರಿಟ್ಟಿದ್ದಾರೆ. ಭಾವುಕ ಕ್ಷಣವನ್ನು ಕಂಡು ಸ್ಥಳದಲ್ಲಿದ್ದ ನೂರಾರು ಗಣ್ಯರು, ಕುಟುಂಬ ಸದಸ್ಯರೂ ಕಣ್ಣೀರಿಟ್ಟರು.
ಮಧ್ಯಾಹ್ನ ಅಮೆರಿಕಾದಿಂದ ದೆಹಲಿಗೆ ಬಂದಿಳಿದ ಧೃತಿ ಏರ್ ಇಂಡಿಯಾ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ಭಾರಿ ಭದ್ರತೆಯಲ್ಲಿ ಅವರನ್ನು ಸಂಜೆ ಸದಾಶಿವ ನಗರದ ಮನೆಗೆ ಕರೆದೊಯ್ದು ಬಳಿಕ ಕಂಠೀರವ ಕ್ರೀಡಾಂಗಣಕ್ಕೆ ಕರೆತರಲಾಯಿತು.
ಪುನೀತ್ ಅವರ ಪತ್ನಿ ಅಶ್ವಿನಿ ಅವರು ಮಗಳಿಗೆ ಸಾಂತ್ವನ ಹೇಳಿದರು. ದೊಡ್ಡಪ್ಪ ಶಿವರಾಜ್ ಕುಮಾರ್ ಹಣೆಗೆ ಮುತ್ತಿಟ್ಟು ಸಂತೈಸಿದರು.
ಇನ್ನೋರ್ವ ಪುತ್ರಿ ವಂದಿತಾ ಕೂಡ ಸಹೋದರಿಯೊಂದಿಗೆ, ಮರಳಿಬಾರದ ಊರಿಗೆ ಪಯಣಿಸಿದ ಪ್ರೀತಿಯ ಪಪ್ಪಾ ನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತರು. ರಾಜ್ ಕುಟುಂಬ ಕಣ್ಣೀರ ಪ್ರವಾಹದಲ್ಲಿ ಮುಳುಗಿದೆ.
ನಾಳೆ(ಭಾನುವಾರ) ಸಕಲ ಸರಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಇಂದೂ ಪುನೀತ್ ಅವರ ಅಂತಿಮ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಹರಿದು ಬರುತ್ತಿದೆ ಅಭಿಮಾನ ಸಾಗರ
ಪ್ರವಾಹದೋಪಾದಿಯಲ್ಲಿ ಅಕಾಲಿಕವಾಗಿ ಕಾಲನ ವಶವಾದ ನೆಚ್ಚಿನ ಅಪ್ಪುವನ್ನು ನೋಡಲು ಸಾವಿರಾರು ಗಣ್ಯರು, ಲಕ್ಷಾಂತರ ಅಭಿಮಾನಿಗಳು ಶನಿವಾರ ಸಂಜೆಯವರೆಗೆ ಆಗಮಿಸಿದ್ದು, ಅಭಿಮಾನಿಗಳ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.