ಹಾನಗಲ್‌, ಸಿಂದಗಿ: ಶಾಂತಿಯುತ ಮತದಾನ


Team Udayavani, Oct 31, 2021, 5:50 AM IST

ಹಾನಗಲ್‌, ಸಿಂದಗಿ: ಶಾಂತಿಯುತ ಮತದಾನ

ಮೂರೂ ಪಕ್ಷಗಳಿಗೆ ಪ್ರತಿಷ್ಠೆಯಾಗಿರುವ ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶನಿವಾರ ಶಾಂತಿಯುತವಾಗಿ ನಡೆಯಿತು. ಕೆಲವು ಕಡೆಗಳ ಮತಯಂತ್ರಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಲಾಗಿತ್ತು. ಆರಂಭದಲ್ಲಿ ನಿಧಾನವಾಗಿ ಸಾಗಿದ್ದ ಮತದಾನ, ಮಧ್ಯಾಹ್ನ ಕಳೆದು ಬಿರುಸು ಪಡೆಯಿತು. ಇನ್ನು ಫ‌ಲಿತಾಂಶದ್ದೇ ಕುತೂಹಲ.

ಹಾನಗಲ್‌: ಶೇ.83.44 ಮತದಾನ
ಹಾವೇರಿ: ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಶೇ.83.44 ರಷ್ಟು ಮತದಾನವಾಗಿದೆ.ಬೆಳಗ್ಗೆ ಏಳು ಗಂಟೆಗೆ ನೀರಸವಾಗಿ ಆರಂಭಗೊಂಡ ಮತದಾನ ಪ್ರಕ್ರಿಯೆ 11 ಗಂಟೆ ಬಳಿಕ ಬಿರುಸು ಪಡೆದುಕೊಂಡಿತು.

ಮತದಾನ ಆರಂಭಗೊಳ್ಳುತ್ತಿದ್ದಂತೆ ಮತಗಟ್ಟೆ ಸಂಖ್ಯೆ 8, 211 ಹಾಗೂ ಹನುಮಸಾಗರ ಮತಗಟ್ಟೆಯ ಮತಯಂತ್ರದಲ್ಲಿ ದೋಷ ಕಂಡು ಬಂದು ಸ್ವಲ್ಪ ಹೊತ್ತು ಸಮಸ್ಯೆಯಾಯಿತು. ಬಳಿಕ ಬದಲಿ ಮತಯಂತ್ರ ಅಳವಡಿಸಲಾಯಿತು. ಅಕ್ಕಿಆಲೂರಿನ ಸಖಿ ಮತಗಟ್ಟೆಯಲ್ಲೂ ಸಮಸ್ಯೆಯಾಗಿ ಅರ್ಧಗಂಟೆ ಮತದಾನ ಸ್ಥಗಿತಗೊಳಿಸ ಲಾಗಿತ್ತು.

ಎಷ್ಟೆಷ್ಟು ಮತದಾನ?
ಹಾನಗಲ್‌ ಕ್ಷೇತ್ರದಲ್ಲಿ 239 ಮೂಲ ಹಾಗೂ 24 ಹೆಚ್ಚುವರಿ ಸೇರಿ ಒಟ್ಟು 263 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಈ ಪೈಕಿ ಸೂಕ್ಷ ¾ ಮತಗಟ್ಟೆಗಳೆಂದು ಗುರುತಿಸಲಾಗಿದ್ದ 33 ಕಡೆ ವಿಶೇಷ ಭದ್ರತೆ ಒದಗಿಸಲಾಗಿತ್ತು.

ಕ್ಷೇತ್ರದಲ್ಲಿ ಒಂದು ಅಂಗವಿಕಲಸ್ನೇಹಿ ಮತಗಟ್ಟೆ ಹಾಗೂ ಎರಡು ಸಖೀ ಮತಗಟ್ಟೆಗಳನ್ನು ಸ್ಥಾಪಿಸಿ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿತ್ತು. ಯುವ ಮತದಾರರು ಮತಗಟ್ಟೆ ಹೊರಗೆ ಸೆಲ್ಫಿ  ತೆಗೆದುಕೊಳ್ಳುತ್ತಿದ್ದ ದೃಶ್ಯ ಕಂಡುಬಂತು. 2018ರಲ್ಲಿ ಶೇ.83.98ರಷ್ಟು ಮತದಾನವಾಗಿತ್ತು.

ಇದನ್ನೂ ಓದಿ:80 ಸಾವಿರ ಫ‌ಲಾನುಭವಿಗಳಿಗೆ ಅನುಗ್ರಹ ಯೋಜನೆ ಲಾಭ: ಪ್ರಭು ಚೌವ್ಹಾಣ್‌

ಸಿಂದಗಿ: ಶೇ. 68.12 ಮತದಾನ
ಸಿಂದಗಿ: ಸಿಂದಗಿಯಲ್ಲಿ ಶೇ.68.12 ಮತದಾನವಾಗಿದೆ. ಕೆಲವೆಡೆ ಮತಯಂತ್ರಗಳ ತಾಂತ್ರಿಕದೋಷ ಕಂಡು ಬಂದ ಹಿನ್ನೆಲೆ ಚುನಾವಣಾಧಿ ಕಾರಿಗಳು ತ್ವರಿತವಾಗಿ ಸಮಸ್ಯೆ ಬಗೆಹರಿಸಿದ್ದಾರೆ.

ಮತದಾನ ಆರಂಭಕ್ಕೆ ಮುನ್ನವೇ ಆಲಮೇಲ ಪಟ್ಟಣದ ಮತಗಟ್ಟೆಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ ಸಂಬಂಧಿ  ಪದ್ಮಾವತಿ ಎಂಬವರು ಮತಗಟ್ಟೆ ಕೇಂದ್ರದ ಬಾಗಿಲು ಹಾಗೂ ಹೊಸ್ತಿಲಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಸ್ಥಳೀಯ ಮುಸ್ಲಿಂ ಮಹಿಳೆಯರು ಸಾಥ್‌ ನೀಡಿದರು.

ಅಭ್ಯರ್ಥಿಗಳ ಮತದಾನ
ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಮನಗೂಳಿ ಅವರು ಪತ್ನಿ ನಾಗರತ್ನಾ ಜತೆ ಮಲಘಾಣ ಗ್ರಾಮದಲ್ಲಿ, ಬಿಜೆಪಿಯ ರಮೇಶ ಭೂಸನೂರ ಅವರು ಆಲಮೇಲದಲ್ಲಿ ಹಾಗೂ ಜೆಡಿಎಸ್‌ನ ನಾಜಿಯಾ ಅಂಗಡಿ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ಗಣಿಹಾರ ಗ್ರಾಮದಲ್ಲಿ ಮತ ಚಲಾಯಿಸಿದರು. ಸಿಂದಗಿ ಕ್ಷೇತ್ರದ ತಾಂಬಾ ಗ್ರಾಮದ ಮತಗಟ್ಟೆಯಲ್ಲಿ ನಾಗಠಾಣ ಶಾಸಕ ದೇವಾನಂದ ಚೌವಾಣ್‌ ಅವರು ಪತ್ನಿ ಅನಿತಾ ಜತೆ ಆಗಮಿಸಿ ಮತದಾನ ಮಾಡಿದರು.

ಕೈಕೊಟ್ಟ ಮತಯಂತ್ರಗಳು
ಸಿಂದಗಿ ಪಟ್ಟಣದ ಬಾಲಕಿಯರ ಶಾಲೆಯ ಮತಗಟ್ಟೆ ಸಂಖ್ಯೆ 172 ಹಾಗೂ ತಾಂಬಾದ ಮತಗಟ್ಟೆ ಸಂಖ್ಯೆ 92ರಲ್ಲಿ ಮತ ಯಂತ್ರದಲ್ಲಿ ಸಮಸ್ಯೆ ಕಂಡು ಬಂದಿತ್ತು.

ಮತದಾನದ ವೀಡಿಯೋ, ಫೋಟೋ ವೈರಲ್‌
ಸಿಂದಗಿ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆಯ ವೀಡಿಯೋ ಹಾಗೂ ಫೋಟೋ ತೆಗೆದು ವೈರಲ್‌ ಮಾಡಿದ ಆರೋಪದಲ್ಲಿ ಓರ್ವನನ್ನು ಬಂಧಿಸಲಾಗಿದೆ. ಓರ್ವ ಜೆಡಿಎಸ್‌ ಅಭ್ಯರ್ಥಿ ಪರ ಮತದಾನ ಮಾಡಿದ್ದ ವೀಡಿಯೋವನ್ನು ಹಾಗೂ ಮತ್ತೂಬ್ಬ ಬಿಜೆಪಿ ಅಭ್ಯರ್ಥಿ ಪರ ಮತದಾನ ಮಾಡಿದ್ದ ಫೋಟೋವನ್ನು ವೈರಲ್‌ ಮಾಡಿದ್ದರು. ವೀಡಿಯೋ ಮಾಡಿರುವ ಪ್ರಕರಣ ಮತಗಟ್ಟೆ ಸಂಖ್ಯೆ 135ರದ್ದೆಂಬುದನ್ನು ಜಿಲ್ಲಾಡಳಿತ ಪತ್ತೆ ಮಾಡಿದ್ದು, ಅದರ ಆರೋಪಿತನನ್ನು ಬಂಧಿ ಸಿರುವುದಾಗಿ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.