ಉತ್ತರಾಖಂಡ ಮಾಜಿ ಸಿಎಂಗೆ ಶಾ ಸವಾಲು
Team Udayavani, Oct 31, 2021, 6:20 AM IST
ಡೆಹ್ರಾಡೂನ್: ಕಾಂಗ್ರೆಸ್ ಬರೀ ಆಶ್ವಾಸನೆ ಕೊಡುವ ಪಕ್ಷ. ಜನರು ಸಂಕಷ್ಟದಲ್ಲಿರುವಾಗ ಆ ಪಕ್ಷದ ನಾಯಕರು ಕಾಣಿಸುವುದೇ ಇಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಗುಡುಗಿದ್ದಾರೆ.
ಉತ್ತರಾಖಂಡದಲ್ಲಿ ನಡೆದ ಚುನಾವಣ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಈ ಮೇಲಿನ ಮಾತುಗಳನ್ನಾಡಿದ್ದಾರೆ. “ಪ್ರವಾಹ, ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಕಾಣಿಸಲೇ ಇಲ್ಲ. ಆದರೆ ಚುನಾವಣೆ ಹತ್ತಿರ ಬಂದಾಕ್ಷಣ ಅವರು ಕಾಣಿಸಿಕೊಂಡು, ಸುದ್ದಿ ಗೋಷ್ಠಿಗಳನ್ನು ಮಾಡಲಾರಂಭಿಸುತ್ತಾರೆ. ನಾನು ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಹರೀಶ್ ಅವರಿಗೆ ಸವಾಲು ಹಾಕುತ್ತೇನೆ. ಅವರು ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಆಶ್ವಾಸನೆಯಲ್ಲಿ ಎಷ್ಟು ಪೂರೈಸಿದ್ದಾರೆ ಮತ್ತು ನಾವು ಎಷ್ಟು ಪೂರೈಸಿದ್ದೇವೆ ಎನ್ನುವುದರ ಬಗ್ಗೆ ಬಹಿರಂಗ ಚರ್ಚೆಯಾಗಲಿ’ ಎಂದು ಅಮಿತ್ ಶಾ ಹೇಳಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿಯ ಪುಷ್ಕರ್ ಸಿಂಗ್ ಧಮಿ ನೇತೃತ್ವದಲ್ಲಿ ರಾಜ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿವೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಆಶ್ವಾಸನೆಯಲ್ಲಿ ಶೇ.85ನ್ನು ಸಂಪೂರ್ಣಗೊಳಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಟಿ20 ವಿಶ್ವಕಪ್: ಬಟ್ಲರ್ ಬ್ಯಾಟಿಂಗಿಗೆ ನಡುಗಿದ ಆಸೀಸ್
ಇದೇ ವೇಳೆ, ನ.5ರಂದು ಕೇದಾರನಾಥಕ್ಕೆ ಭೇಟಿ ನೀಡಲಿ ರುವ ಪ್ರಧಾನಿ ನರೇಂದ್ರ ಮೋದಿ ಅವರು ಆದಿಶಂಕರಾ ಚಾರ್ಯ ಅವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿ ದ್ದಾರೆ ಎಂದೂ ಶಾ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.