ವಿಚಾರ ಶಕ್ತಿ ಹೆಚ್ಚಿಸುತ್ತದೆ ಚಿತ್ರಕಲೆ
Team Udayavani, Oct 31, 2021, 9:42 AM IST
ಕಲಬುರಗಿ: ಚಿತ್ರಕಲೆ ವಿಚಾರ ಶಕ್ತಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮನಸ್ಸಿಗೆ ಸಮಾಧಾನ ಮತ್ತು ನೆಮ್ಮದಿ ನೀಡುತ್ತದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ|ನಿರಂಜನ್ ವಿ. ನಿಷ್ಠಿ ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಸಾತ್ನಕೋತ್ತರ ಚಿತ್ರಕಲಾ ವಿಭಾಗದಲ್ಲಿ ಹಮ್ಮಿಕೊಂಡಿರುವ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅವರಿಗೆ ಚಿತ್ರಕಲೆ, ಸಂಗೀತ ಪ್ರಿಯವಾದ ವಿಷಯಗಳು. ಈ ಕುರಿತು ಆಗಾಗ ಪ್ರಸ್ತಾಪಿಸುತ್ತಿರುತ್ತಾರೆ. ಡಾ| ಅಪ್ಪ, ಮಾತೋಶ್ರೀ ಡಾ| ದಾಕ್ಷಾಯಿಣಿ ಅವ್ವ ಆಶೀರ್ವಾದದಿಂದ ಶರಣಬಸವ ವಿಶ್ವ ವಿದ್ಯಾಲಯದ ಚಿತ್ರಕಲಾ ವಿಭಾಗ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಸಮ ಕುಲಪತಿ ಪ್ರೊ| ವಿ.ಡಿ. ಮೈತ್ರಿ ಮಾತನಾಡಿ, ಚಿತ್ರಕಲೆ ಮತ್ತು ವಾಸ್ತು ಶಿಲ್ಪಕಲೆಗೆ ಅವಿನಾಭಾವ ಸಂಭಂಧವಿದೆ. ವಿದ್ಯಾರ್ಥಿಗಳು ಚಿತ್ರಕಲೆ ವಿಷಯ ಆಯ್ದುಕೊಳ್ಳುವುದರಿಂದ ಅವರಲ್ಲಿ ಸೃಜನಶೀಲತೆ ಬೆಳೆಯುತ್ತದೆ ಎಂದು ಹೇಳಿದರು.
ಸ್ನಾತಕೋತ್ತರ ಚಿತ್ರಕಲಾ ವಿಭಾಗದ ಡೀನ್ ಡಾ| ಶಾಂತಲಾ ನಿಷ್ಠಿ ಅಧ್ಯಕ್ಷೀಯ ಭಾಷಣ ಮಾಡಿ, ಪಠ್ಯಕ್ರಮದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವವಿದೆ. ಚಿತ್ರಕಲೆಗಳ ಜೊತೆಗೆ ಕರಕುಶಲ ವಸ್ತು ತಯಾರಿಸುವ ಜಾಣ್ಮೆ ಹೊಂದಬೇಕು ಎಂದರು.
ಇದನ್ನೂ ಓದಿ: ಸರ್ಕಾರಿ ಯೋಜನೆ ಜನರಿಗೆ ತಲುಪಿಸಿ
ಶರಣಬಸವ ವಿವಿ ಪ್ರಾಧ್ಯಾಪಕರು, ಸಿಬ್ಬಂದಿ ಪಾಲ್ಗೊಂಡಿದ್ದರು. ಚಿತ್ರಕಲಾ ಪ್ರದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿ ಗಳಿಗೆ ಪ್ರಮಾಣಪತ್ರ ನೀಡಲಾಯಿತು. ಸ್ನಾತಕೋತ್ತರ ಚಿತ್ರಕಲಾ ವಿಭಾಗದ ಚೇರ್ ಪರ್ಸನ್ ಡಾ| ಸುಬ್ಬಯ್ಯ ಎಂ. ನೀಲಾ ಮಾತನಾಡಿದರು. ವಿದ್ಯಾರ್ಥಿಗಳಾದ ಮಹಾಲಕ್ಷ್ಮೀ, ಅರ್ಪಿತಾ ನಿರೂಪಿಸಿದರು. ಪ್ರೊ| ಗಾಯಿತ್ರಿ ಕಲ್ಯಾಣಿ ಸ್ವಾಗತಿಸಿದರು, ಪ್ರೊ| ಸರಸ್ವತಿ ರೆಶ್ಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.