ಮಣಿಪಾಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು
Team Udayavani, Oct 31, 2021, 12:33 PM IST
ಮಣಿಪಾಲ: ಶುಕ್ರವಾರ ಸಂಜೆ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಂಚಿಕೆರೆಯ ನಿವಾಸಿ ಉಮೇಶ್ ಮಡಿವಾಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಉಮೇಶ್ ಶುಕ್ರವಾರ ಸಂಜೆ ಬೈಕ್ ನಲ್ಲಿ ಮಣಿಪಾಲದ ಕಡೆಗೆ ಹೋಗುತ್ತಿದ್ದರು. ಈ ವೇಳೆ ರಾಂಗ್ ಸೈಡ್ ನಲ್ಲಿ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಉಮೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಅವರು ಮೃತಪಟ್ಟಿದ್ದಾರೆ.
ಅಮಾಯಕನ ಪ್ರಾಣ ತೆಗೆದ ಕಾರು ಚಾಲಕ:
ಕಾರು ಚಾಲಕನು ವಿಪರೀತ ಮದ್ಯಪಾನ ಮಾಡಿದ್ದನು ಎನ್ನಲಾಗಿದೆ. ಮದ್ಯದ ಅಮಾಲಿನಲ್ಲಿ ಅತೀ ವೇಗವಾಗಿ ಕಾರು ಚಾಲಾಯಿಸಿಕೊಂಡು ರಾಂಗ್ ಸೈಡ್ ಬಂದು ಉಮೇಶ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಆ ಮೂಲಕ ಅಮಾಯಕನ ಜೀವ ಬಲಿಪಡೆದುಕೊಂಡಿದ್ದಾನೆ. ಕಾರು ಕೇರಳ ನೋಂದಣಿ ಸಂಖ್ಯೆಯನ್ನು ಹೊಂದಿತ್ತು ಎನ್ನಲಾಗಿದೆ.
ಪರಾರಿಯಾಗಲು ಯತ್ನಿಸಿದ್ದ ಚಾಲಕ:
ಘಟನೆ ನಡೆದ ಬಳಿಕ ಕಾರು ಚಾಲಕ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಕೂಡಲೇ ಸ್ಥಳೀಯರು ಒಟ್ಟುಗೂಡಿ ಪರಾರಿಯಾಗಲು ಯತ್ನಿಸುತ್ತಿದ್ದ ಚಾಲಕನನ್ನು ಹಿಡಿದಿದ್ದಾರೆ. ಕುಡಿದು ವಾಹನ ಚಾಲಾಯಿಸಿದ್ದಲ್ಲದೆ, ಅಮಾಯಕನ ಪ್ರಾಣ ತೆಗೆದ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಲಕನಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.