ಚಾಲಕನ ನಿಯಂತ್ರಣ ಕಳೆದು 300 ಅಡಿ ಪ್ರಪಾತಕ್ಕೆ ಉರುಳಿದ ಬಸ್ : 14 ಮಂದಿ ಸಾವು, 4 ಮಂದಿ ಗಂಭೀರ
Team Udayavani, Oct 31, 2021, 3:03 PM IST
ಡೆಹ್ರಾಡೂನ್ : ಪ್ರಯಾಣಿಕರನ್ನು ತುಂಬಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಅಡಿ ಪ್ರಪಾತಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ ಹದಿನಾಲ್ಕು ಮಂದಿ ಸಾವನ್ನಪ್ಪಿ ನಾಲ್ಕು ಮಂದಿ ಗಂಭೀರ ಗಾಯಗೊಂಡ ಘಟನೆ ಡೆಹ್ರಾಡೂನ್ ಪ್ರದೇಶದ ಚಕ್ರತಾ ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ಡೆಹ್ರಾಡೂನ್ ಜಿಲ್ಲೆಯ ಚಕ್ರತಾದ ಬುಲ್ಹಾದ್- ಬೈಲಾ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ಸೂಚಿಸಿದ್ದು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
चकराता क्षेत्र के अंतर्गत बुल्हाड़-बायला मार्ग पर हुए हृदय विदारक सड़क हादसे पर शोक व्यक्त करता हूँ। ईश्वर मृतकों की आत्मा को शांति और परिजनों को दुःख सहने की शक्ति प्रदान करे।
— Pushkar Singh Dhami (@pushkardhami) October 31, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.