ಭಗವಂತ ಬದುಕು ಕೊಟ್ಟಿರುವುದು ಸಾಯಲು ಅಲ್ಲ ಬದುಕಲು: ಗಣೇಶ್ ಪಂಜಿಮಾರು


Team Udayavani, Oct 31, 2021, 4:03 PM IST

17ganesh

ಉಡುಪಿ: “ಸಾವನ್ನು ನಾವು ಹುಡುಕಿಕೊಂಡು ಹೋಗಬಾರದು. ನಮ್ಮನ್ನು ಸಾವು ಹುಡುಕಿಕೊಂಡು ಬರಬೇಕು. ಆ ದಿನದ ವರೆಗೆ ಬಾಳಬೇಕು.”

ಮರಣವೆಂಬುದು ಮಹಾ ನವಮಿಯಾಗಬೇಕೇ ಹೊರತು ಸ್ವಯಂ ವಧಾಮಿಯಾಗಬಾರದು. ಮರಣ ನಮ್ಮ ವಿಳಾಸ ಹಿಡಿದುಕೊಂಡು ಪರದಾಡಬೇಕು. ನಾವು ಯಾಕೆ ಬಾರದೆ ಇರುವ ಮರಣವನ್ನು ಬಲವಂತದಿಂದ ಬರಮಾಡಿಸಿಕೊಂಡು ಒದ್ದಾಡಿ ಸಾಯಬೇಕು? ಭಗವಂತ ನಮಗೆ ಬದುಕು ಕೊಟ್ಟಿರುವುದು ಬದುಕಲು. ಸಾವು ಬರುವ ತನಕ ನಾವು ಬದುಕಿ ತೋರಿಸಬೇಕು. ಈ ಬದುಕಿ ತೋರಿಸುವ ಕಲೆಯೇ ಜೀವನ. ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಮಾಡುವವರು ಒಮ್ಮೆ ನಮ್ಮಂತವರನ್ನು ನೋಡಬೇಕು. ಅಥವಾ ನಮ್ಮಂತವರ ಬಗ್ಗೆ ತಿಳಿದುಕೊಳ್ಳಬೇಕು. ತಂದೆ ಗದರಿದರು ತಾಯಿ ಬೈದರು, ಶಿಕ್ಷಕರು ಜೋರು ಮಾಡಿದರೂ, ಎಂದು ಒಂದು ಕ್ಷಣದಲ್ಲಿ ಬದುಕೇ ಬೇಡ ಎಂದು ನಿರ್ಧರಿಸಿ ಆತ್ಮಹತ್ಯೆ ಮಾಡಿಕೊಂಡವರ ಬಗ್ಗೆ ಬೇಸರಿಸುತ್ತಾರೆ ಭಾವಚಿತ್ರ ಕಲಾವಿದ ಗಣೇಶ್ ಪಂಜಿಮಾರು.

ತಾನು ಸ್ವತಃ Osteogenesis imperfecta (ಮೂಳೆಗಳ ತೀವ್ರ ದುರ್ಬಲತೆಯಿಂದ ಬರುವ ಅನುವಂಶಿಕ ರೋಗ) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಅಪರೂಪದ ಕಾಯಿಲೆಯ ಪರಿಣಾಮದಿಂದಾಗಿ ಮೂವತ್ತೊಂದರ ಹರೆಯದ ಗಣೇಶ್ ಅವರ ಎತ್ತರ ಮೂರುವರೆ ಅಡಿ. ಭಾರ ಇಪ್ಪತ್ಮೂರು ಕಿ.ಗ್ರಾಂ. ಆರು ಮಂದಿ ಒಡಹುಟ್ಟಿದವರಲ್ಲಿ ನಾಲ್ಕು ಮಂದಿಗೆ ಈ ಭೀಕರ ಕಾಯಿಲೆ ಇದೆ. ಅಣ್ಣ ಒಬ್ಬ ಇದೇ ಮಾರಕ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ.

ದಿವ್ಯಾಂಗತೆ ಇರುವುದು ನನ್ನ ದೇಹಕ್ಕೆ ಅನ್ಯತಾ ಮನಸ್ಸಿಗಲ್ಲ. ಅದು ಅದರ ಕಾರ್ಯ ಮಾಡಲಿ. ನಾನು ನನ್ನ ಕಾರ್ಯ ಮಾಡುತ್ತೇನೆ ಎಂದು ಪಣತೊಟ್ಟವರು ಗಣೇಶ್ ಪಂಜಿಮಾರು. ವಿಧಿಯನ್ನು ಹಳಿಯುತ್ತ ಬದುಕುವುದಕ್ಕಿಂತ ಬಂದದೆಲ್ಲ ಬರಲಿ. ದಾಸರು ಹೇಳುವ ಹಾಗೆ “ಈಸ ಬೇಕು. ಇದ್ದು ಜೈಸಬೇಕು.” ಇವರೊಂದಿಗೆ ಮನೆಯವರೆಲ್ಲ ಈ ತತ್ವವನ್ನು ಪರಿಪಾಲಿಸಿಕೊಂಡು ಬದುಕುತ್ತಿದ್ದಾರೆ.

ಬಿ. ಕಾಂ ಪದವೀಧರರಾದ ಗಣೇಶ್ ಸದ್ಯ ನಿರುದ್ಯೋಗಿ. ಹಲವು ಬಾರಿ ಬ್ಯಾಂಕಿಂಗ್ ಪರೀಕ್ಷೆ ಕಟ್ಟಿದರೂ ಉತ್ತೀರ್ಣರಾಗದೇ ಮರಳಿ ಯತ್ನವ ಮಾಡುತ್ತಲ್ಲಿದ್ದಾರೆ. ಪದವಿ ಪಡೆದ ನಂತರ ಮನೆಯಲ್ಲಿರುತ್ತ ಏನಾದರೊಂದು ಮಾಡಬೇಕು. ನನ್ನ ಸಂಸಾರದ ನೇಗಿಲಿಗೆ ಹೆಗಲು ಕೊಡಬೇಕೆಂದು ಹಪಹಪಿಸುತ್ತಿದ್ದರು. ಒಂದು ಗುರುವಾರ ತನ್ನ ತಾಯಿ ಶಿರ್ವದ ಸಂತೆಗೆ ಹೋಗಿರುವ ಸಮಯದಲ್ಲಿ ತದೇಕ ಚಿತ್ತದಿಂದ ತಾಯಿಯನ್ನು ನೆನೆಸುತ್ತ ಹಾಳೆಯ ಮೇಲೆ ತಾಯಿಯ ಭಾವಚಿತ್ರವನ್ನು ಬಿಡಿಸಿದರು. ನೂರಕ್ಕೆ ನೂರರಷ್ಟು ಅಲ್ಲದಿದ್ರೂ ತೊಂಬತ್ತೇಳು ಪ್ರತಿಶತ ಚೆನ್ನಾಗಿಯೇ ಬಿಡಿಸಿದರು. ತಾಯಿ ಮರಳಿ ಬಂದು ನೋಡಿದಾಗ ಆನಂದ ಭಾಷ್ಪಿತರಾದರಂತೆ. ಅಂದೇ ಭಾವಚಿತ್ರ ಬಿಡಿಸುವ ಕಲೆಗೆ ಗಣಪತಿ ಮಂತ್ರ ಹಾಡಿದ ಗಣೇಶ್ ಮತ್ತೆ ಹೊರಳಿ ನೋಡಲಿಲ್ಲ.

ಇದನ್ನೂ ಓದಿ: ಸುಮಾರು 20 ಲಕ್ಷ ಜನರಿಂದ ಪುನೀತ್ ಅಂತಿಮ ದರ್ಶನ: ಆರಗ ಜ್ಞಾನೇಂದ್ರ

ಗಣೇಶ್ ಅವರು ಇಂದು ತನ್ನದೇ ಆದ Ganesh Panjimar Arts ಎಂಬ ಯುಟ್ಯೂಬ್’ ಚಾನೆಲ್ ಹೊಂದಿದ್ದಾರೆ. ನೂರಾರು ಭಾವಚಿತ್ರಗಳನ್ನು ಬಿಡಿಸಿ ಯುಟ್ಯೂಬ್ ವಾಹಿನಿಯಲ್ಲಿ ಹರಿಯಬಿಟ್ಟಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಮುಂತಾದ ಭಾಷೆಯ ಚಲನಚಿತ್ರ ರಂಗದ ದಿಗ್ಗಜರ ಭಾವಚಿತ್ರಗಳನ್ನು ರಚಿಸಿದ್ದಾರೆ. ಕ್ರಿಕೆಟ್, ಫುಟ್‌ಬಾಲ್, ಡಬ್ಲ್ಯು ಡಬ್ಲ್ಯು ಎಫ್ ತಾರೆಯರ  ರಾಜಕೀಯ ನೇತಾರರ, ಸಾಮಾಜಿಕ ಗಣ್ಯರ ಭಾವಚಿತ್ರಗಳನ್ನು ರಚಿಸಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರಿಂದ ಸನ್ಮಾನಿತರಾಗಿದ್ದಾರೆ ಬಂಜರಾ ಗ್ರೂಪಿನ ಮಾಲಕರಾದ ಡಾ. ಪ್ರಕಾಶ್ ಶೆಟ್ಟಿಯವರ ಅಭಿನಂದನ ಕಾರ್ಯಕ್ರಮದಲ್ಲಿ ಪುರಸ್ಕೃತರಾಗಿದ್ದಾರೆ. ಪರ್ಯಾಯೋತ್ಸವದಲ್ಲಿ ಸನ್ಮಾನಿತರಾಗಿದ್ದಾರೆ. ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜ್ ಶಿರ್ವ, ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ಜಾಗತಿಕ ಸಮಾವೇಶದಲ್ಲಿ ಸನ್ಮಾನಿತರಾಗಿದ್ದಾರೆ. ಊರಿನ ಹಲವಾರು ಸಂಘ ಸಂಸ್ಥೆಗಳು ಗಣೇಶ್ ಅವರ ಸಾಧನೆಯನ್ನು ಗುರುತಿಸಿವೆ. ಮಾಧ್ಯಮಗಳೂ ಪರಿಚಯಿಸಿವೆ. ಗಣೇಶ್ ಅವರ ಓರ್ವ ಹಿರಿಯ ಸೋದರ ದಿವ್ಯಾಂಗರಾದರೂ ಸಾಫ್ಟ್‌ವೇರ್ ಇಂಜಿನಿಯರಿಂಗ್ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ಉದ್ಯೋಗಿ ಆಗಿದ್ದಾರೆ ಇವರ ತಮ್ಮ ಕೂಡ ಸಾಫ್ಟ್‌ವೇರ್ ಇಂಜಿನಿಯರ್.

ಕುಟುಂಬದ ಪೋಷಣೆಯ ಭಾರ ಆ ಇಬ್ಬರ ಮೇಲಿದೆ. ಇವರ ದಿವ್ಯಾಂಗವುಳ್ಳ ತಂಗಿ ಮನೆಯಲ್ಲಿ ಕಾಗದಗಳ ಪಟ್ಟಿಯಿಂದ (Quill Arts) ಗೊಂಬೆ ತಯಾರಿಸುವ ಸೃಜನಶೀಲತೆಯನ್ನು ಬೆಳೆಸಿಕೊಂಡಿದ್ದಾರೆ.

ಗಣೇಶ್ ಪಂಜಿಮಾರು ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹತ್ತಿರದ ಕೋಡು ದುರ್ಗಾಂಬಿಕಾ ಹಿರಿಯ ಪ್ರಾಥಮಿಕ ಶಾಲೆ, ಹೈಸ್ಕೂಲ್ ವಿದ್ಯಾಭ್ಯಾಸವನ್ನು ಶ್ರೀಗುರು ನಾರಾಯಣ ಹೈಸ್ಕೂಲ್, ಪಡುಬೆಳ್ಳ, ಪದವಿ ಪೂರ್ವ ಶಿಕ್ಷಣವನ್ನು ಹಿಂದೂ ಜೂನಿಯರ್ ಕಾಲೇಜ್ ಹಾಗೂ ಬಿಕಾಂ ಪದವಿಯನ್ನು ಎಂ. ಎಸ್. ಆರ್. ಎಸ್ ಕಾಲೇಜ್ ಇಲ್ಲಿಂದ ಪಡೆದಿರುವರು. ಪದವಿ ಶಿಕ್ಷಣ ಪಡೆಯುತ್ತಿದ್ದಾಗ ಎಂ. ಎಸ್. ಆರ್. ಎಸ್. ಕಾಲೇಜಿನ ಹಳೆ ವಿದ್ಯಾರ್ಥಿ ಮುಂಬೈ ಘಟಕವು ಮೂರು ವರ್ಷ ಧನ ಸಹಾಯ ಮಾಡಿದೆ ಎಂದು ಸದಾ ಸ್ಮರಿಸುತ್ತಾರೆ ಗಣೇಶ್. ಪದವಿ ವ್ಯಾಸಂಗ ಮಾಡುತ್ತಿದ್ದಾಗ ಕಾಲೇಜಿಗೆ ಹೋಗಿ ಬರಲು ವಿಶೇಷವಾಗಿ ತಯಾರಿಸಿದ ತ್ರಿಚಕ್ರ ವಾಹನವನ್ನು ಕೊಡುಗೆಯಾಗಿ ನೀಡಿದ ಉಡುಪಿಯ ಉದ್ಯಮಿ ಶ್ರೀಸುದರ್ಶನ್ ಶೆಟ್ಟಿಯವರನ್ನೂ ಅದಕ್ಕಾಗಿ ಶ್ರಮಿಸಿದ ಹಿಂದಿ ಪ್ರಾಧ್ಯಾಪಕರಾಗಿದ್ದ ಶ್ರೀಮತಿ ಶಾರದ ಎಂ. ಅವರನ್ನೂ ಈಗಲೂ ನೆನೆಯುತ್ತಾರೆ ಗಣೇಶ್.

ಗಣೇಶ್ ಪಂಜಿಮಾರು ಅವರ ಹಿರಿಯರು ಉಡುಪಿಯವರಾದರೂ ನೆಲೆಸಿದ್ದು ಆಂಧ್ರ ಪ್ರದೇಶದಲ್ಲಿ. ಮೂರು ದಶಕಗಳ ಹಿಂದೆ ಗಣೇಶ್ ಅವರ ಹೆತ್ತವರಾದ ದಿವಗಂತ ರಾಮ ಮೂಲ್ಯರು ಹಾಗೂ ಶ್ರೀಮತಿ ನಾಗಮಣಿ ಅವರು ಪಂಜಿಮಾರಲ್ಲಿ ಬಂದು ನೆಲೆಸಿದವರು. ಆರೋಗ್ಯದಲ್ಲಿ ಸರಿಯಿರುವ ಗಣೇಶ್ ಅವರ ದೊಡ್ಡಣ್ಣ ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಅವರು ಸಂಸಾರಿಕರಾಗಿ ಬೇರೆ ವಾಸವಾಗಿದ್ದಾರೆ. ದುಡಿಯವ ಕೈಗಳಿಗಿಂತ ಉಣ್ಣುವ ಬಾಯಿಗಳ ಸಂಖ್ಯೆ ಹೆಚ್ಚು. ಔಷದಕ್ಕೆ ತಿಂಗಳಿಗೆ ತಲಾ ಒಂದೂವರೆ ಸಾವಿರ ರೂಪಾಯಿಗಳಷ್ಟು ವ್ಯಯವಾಗುತ್ತದೆ. ಆದರೂ ನಗು ನಗುತ್ತ ಬಾಳುವ ಇವರು ಊರಿಗೆಲ್ಲ ಮಾದರಿಯಾಗಿದ್ದಾರೆ.

ತನ್ನ ಅನ್ನವನ್ನು ತಾನು ದುಡಿದು ತಿನ್ನಬೇಕು ಎಂಬ ಅಚಲ ನಿರ್ಧಾರ ಹೊಂದಿದ ಗಣೇಶ್ ಪಂಜಿಮಾರು ಕಾಯಿಲೆಯೊಂದಿಗೆ ನಿರುದ್ಯೋಗ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ. ಬ್ಯಾಂಕಿನ ಪರೀಕ್ಷೆ ಪಾಸು ಮಾಡಿ ಕೆಲಸಕ್ಕೆ ಸೇರಬೇಕೆಂಬ ಗಣೇಶ್ ಅವರ ಕನಸು ನನಸಾಗಲಿ. ಅಥವಾ ಅದಕ್ಕೆ ತತ್ಸಮಾನವಾದ ಕೆಲಸವೊಂದು ಆದಷ್ಟು ಬೇಗ ದೊರೆಯಲಿ ಎಂದು ಹಾರೈಸೋಣ.

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Malpe-Fire

Malpe: ಮೀಟಿಂಗ್‌ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.