ನ. 5ಕ್ಕೆ ಪ್ರಧಾನಿ ಉತ್ತರಾಖಂಡ ಭೇಟಿ : ಕಾರ್ಯಕ್ರಮ ರಂಗು ಹೆಚ್ಚಿಸಲಿರುವ ಸಾಧು-ಸಂತರು
ಪ್ರಧಾನಿ ಮೋದಿಯವರಿಂದ ಶಂಕರಾಚಾರ್ಯರ ಸಮಾಧಿ, ಪ್ರತಿ ಮೆ ಅನಾವರಣ
Team Udayavani, Oct 31, 2021, 10:30 PM IST
ನವದೆಹಲಿ: ಇದೇ ತಿಂಗಳ 5ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಕೆಲವು ಪ್ರಮುಖವಾದ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭಕ್ಕೆ ಮತ್ತಷ್ಟು ಧಾರ್ಮಿಕ ಸ್ಪರ್ಶ ನೀಡಲು ನಿರ್ಧರಿಸಿರುವ ಬಿಜೆಪಿ, ದೇಶಾ ದ್ಯಂತ ಪ್ರಮುಖ ಪುಣ್ಯಸ್ಥಳಗಳಿಗೆ ಸಾಧುಗಳು, ಸನ್ಯಾಸಿಗಳನ್ನು ಕರೆಸಿಕೊಂಡು ಸಮಾವೇಶ ಆಯೋಜಿಸಲು ಸಿದ್ಧತೆ ನಡೆಸಿದೆ.
ಆದಿ ಶಂಕರಾಚಾರ್ಯ ಪ್ರತಿಮೆ ಲೋಕಾರ್ಪಣೆ :
ಪ್ರಧಾನಿ ಮೋದಿ ಕೇದಾರನಾಥ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಆದಿ ಶಂಕರಾಚಾರ್ಯರ ಪುನರುತ್ಥಾನಗೊಂಡ ಸಮಾಧಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಜೊತೆಗೆ, ಕೇದಾರನಾಥದಲ್ಲಿ ಸ್ಥಾಪಿಸಲಾಗಿರುವ ಶಂಕರಾಚಾರ್ಯರ ಪ್ರತಿ ಮೆಯನ್ನೂ ಅನಾವರಣಗೊಳಿಸಲಿದ್ದಾರೆ.
ಐತಿಹಾಸಿಕ ಕಾರ್ಯಕ್ರಮ : ಬಿಜೆಪಿ
ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಮಹಾನ್ ದಾರ್ಶನಿಕರಾದ ಶ್ರೀಮದ್ ಶಂಕರಾಚಾರ್ಯರ ಸಮಾಧಿಯು 2013ರಲ್ಲಿ ಕೇದಾರನಾಥದಲ್ಲಿ ಸಂಭವಿಸಿದ್ದ ಪ್ರವಾಹದಿಂದ ಧ್ವಂಸಗೊಂಡಿತ್ತು. ಈಗ ಅದ ನ್ನು ಪುನರುತ್ಥಾನಗೊಳಿಸಲಾಗಿದೆ. ಆ ಸಮಾಧಿಯನ್ನು ಹಾಗೂ ಅವರ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಐತಿಹಾಸಿಕ ಕಾರ್ಯಕ್ರಮಗಳಾಗಿವೆ. ದೇಶಾದ್ಯಂತ ಈ ಇದರ ರಂಗು ಪಸರಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಬಿಜೆಪಿ ಹೇಳಿದೆ.
ಇದನ್ನೂ ಓದಿ : 60ರ ವಯಸ್ಸಿನಲ್ಲಿ ಸರಕಾರ ನಮ್ಮನ್ನು ಗುರುತಿಸಿತಲ್ಲ: ಪ್ರಾಣೇಶ್ ಸಂತಸ
ಹಲವೆಡೆ ಪೂಜೆ, ಉತ್ಸವ
ಶಂಕರಾಚಾರ್ಯರ ನವೀಕೃತ ಸಮಾಧಿ ಹಾಗೂ ಪುತ್ಥಳಿ ಲೋಕಾರ್ಪಣೆ ಹಿನ್ನೆಲೆಯಲ್ಲಿ, ಅವರು ಧರ್ಮಪ್ರಚಾರ ಹಾಗೂ ಧರ್ಮಪುನರುತ್ಥಾನಕ್ಕಾಗಿ ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ ಸಾಗಿ ಹೋಗುವಾಗ ಸಂದರ್ಶಸಿದ್ದರೆನ್ನಲಾದ 87 ಪ್ರಮುಖ ದೇಗುಲಗಳು, 12 ಜ್ಯೋತಿರ್ಲಿಂಗಗಳು, ಹಿಮಾಲಯದ ಸನ್ನಿಧಿಗಳಲ್ಲಿ ಹಾಗೂ ಹಿಮಾಲಯದ ವ್ಯಾಪ್ತಿಯಲ್ಲಿ ಬರುವ ಚಾರ್ ಧಾಮ್‌ಗಳಲ್ಲಿಯೂ ಧಾರ್ಮಿಕ ಪೂಜೆ ಹಾಗೂ ಸಂಭ್ರಮಾಚರಣೆ ಮಾಡಲಾಗುತ್ತದೆ. ಈ ಎಲ್ಲಾ ಸಮಾರಂಭಗಳಲ್ಲಿ ಮುಕ್ತವಾಗಿ ಭಾಗವಹಿಸಲು ಸಾಧುಗಳು, ಸನ್ಯಾಸಿಗಳಿಗೆ ಆಹ್ವಾನ ನೀಡಲಾಗುತ್ತದೆ. ಈ ಎಲ್ಲಾ ಕಾರ್ಯಕ್ರಮಗಳ ವೇಳೆ, ಕೇದಾರನಾಥದಲ್ಲಿ ನಡೆಯುವ ಮೋದಿಯವರ ಕಾರ್ಯಕ್ರಮಗಳನ್ನು ವಿಶಾಲವಾದ ಎಲ್‌ಇಡಿ ಪರದೆಗಳ ಮೂಲಕ ನೇರಪ್ರಸಾರ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.