ಸರ್ಕಾರದ ಕಾರ್ಯಕ್ಕೆ ಜನರ ಮೆಚ್ಚುಗೆ
ಸ್ವತಃ ಅಪ್ಪು ಅಂತ್ಯ ಸಂಸ್ಕಾರದ ಜವಾಬ್ದಾರಿ ಹೊತ್ತು ಕಾರ್ಯ ನಿರ್ವಹಿಸಿದ್ದ ಸಿಎಂ ಬೊಮ್ಮಾಯಿ
Team Udayavani, Nov 1, 2021, 10:20 AM IST
ಬೆಂಗಳೂರು: ಖ್ಯಾತ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಸಾವಿನ ನಂತರ ಸಾರ್ವಜನಿಕ ದರ್ಶನ ಹಾಗೂ ಅಂತ್ಯ ಸಂಸ್ಕಾರವನ್ನು ವ್ಯವಸ್ಥಿತವಾಗಿ ನಿರ್ವಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸರ್ಕಾರದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ ಕುಮಾರ್ ನಿಧನದ ಸಂದರ್ಭದಲ್ಲಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಹಾಗೂ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ನಡೆದ ಗಲಾಟೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಆ ಘಟನೆಯ ಕೆಟ್ಟ ಅನುಭ ವವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾದ ಸುದ್ದಿ ತಿಳಿದ ತಕ್ಷಣವೇ ಆಸ್ಪತ್ರೆಗೆ ತೆರಳಿ ಅವರ ನಿಧನದ ಸುದ್ದಿ ವೈದ್ಯರಿಂದ ಖಚಿತಪಡಿಸಿಕೊಂಡ ನಂತರ ಸಂಪೂರ್ಣ ತಾವೇ ಎಲ್ಲ ಜವಾಬ್ದಾರಿಯನ್ನು ನೇರವಾಗಿ ನಿಭಾಯಿಸಿದ್ದರು ಎಂದು ತಿಳಿದು ಬಂದಿದೆ.
ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಪೊಲೀಸ್ ಅಧಿಕಾರಿಗಳಿಗೆ ತಕ್ಷಣವೇ ರಾಜ್ಯಾದ್ಯಂತ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸುವಂತೆ ಸೂಚಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳುವಂತೆ ಸ್ವತಃ ಸಿಎಂ ಸೂಚನೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ;- ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ನನ್ನದು: ತಮಿಳು ನಟ ವಿಶಾಲ್
ಅಲ್ಲದೇ, ಪುನೀತ್ ರಾಜಕುಮಾರ್ ಒಬ್ಬ ಸ್ಟಾರ್ ನಟರಾಗಿದ್ದರಿಂದ ಅವರ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನು ಅರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಂಡು, ಅಲ್ಲಿಗೆ ಬರುವ ಅಭಿಮಾನಿಗಳ ದರ್ಶನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಭದ್ರತೆ ಒದಗಿಸುವಂತೆ ನೇರವಾಗಿಯೇ ಸಿಎಂ ಸೂಚನೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕುಟುಂಬದೊಡನೆ ನಿರಂತರ ಚರ್ಚೆ: ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಮಾಡಲು ಎಷ್ಟು ಸಮಯ ನೀಡಬೇಕು. ಅಂತ್ಯ ಸಂಸ್ಕಾರ ಎಲ್ಲಿ ಮಾಡಬೇಕು. ಯಾವ ಸಮಯದಲ್ಲಿ ಮಾಡಬೇಕು ಎನ್ನುವ ಕುರಿತಂತೆ ಪ್ರತಿಯೊಂದು ನಿರ್ಧಾರ ತೆಗೆದುಕೊಳ್ಳುವ ಮುಂಚೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಾ.ರಾಜ್‌ಕುಮಾರ್ ಕುಟುಂಬ ಸದಸ್ಯರ ಜೊತೆಗೆ ಚರ್ಚೆ ನಡೆಸಿಯೇ ತೀರ್ಮಾನ ತೆಗೆದುಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಡಾ. ರಾಜಕುಮಾರ್ ಕುಟುಂಬದವರೂ ಕೂಡ ಸರ್ಕಾರದ ಜೊತೆಗೆ ಪ್ರತಿಯೊಂದು ಹಂತದಲ್ಲಿಯೂ ಸಹಕಾರ ನೀಡಿದ್ದು, ಸರ್ಕಾರದ ನಿರ್ಧಾರಗಳಿಗೆ ಸಹಮತ ವ್ಯಕ್ತಪಡಿಸಿ ಸಹಕರಿಸಿದ್ದು ಕೂಡ ಸುಗಮವಾಗಿ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರ ನೆರವಾಗಲು ಕಾರಣವಾಗಿದೆ ಎಂದ ಮಾಹಿತಿ ಲಭ್ಯವಾಗಿದೆ.
ಮಗಳನ್ನು ಕರೆತರಲು ಕೇಂದ್ರಕ್ಕೆ ಮನವಿ
ಪುನೀತ್ ರಾಜಕುಮಾರ್ ಅವರ ಮಗಳು ಅಮೇರಿಕಾದಿಂದ ಬರಬೇಕಾಗಿದ್ದರಿಂದ ಅವರನ್ನು ಶೀಘ್ರವಾಗಿ ರಾಜ್ಯಕ್ಕೆ ಕರೆತರಲು ಅನುಕೂಲವಾಗುವಂತೆ ಅಗತ್ಯ ಸಹಾಯ ಮಾಡುವಂತೆ ಕೇಂದ್ರ ವಿದೇಶಾಂಗ ಇಲಾಖೆ ಮೂಲಕ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ವಿವಿಧ ರೀತಿಯ ತಪಾಸಣೆಯ ಕಾರಣ ವಿಳಂಬವಾಗದಂತೆ ನೋಡಿಕೊಂಡು ಶೀಘ್ರವಾಗಿ ಬೆಂಗಳೂರಿಗೆ ತಲುಪಲು ಅವಕಾಶ ಕಲ್ಪಿಸುವಂತೆ ಸಿಎಂ ಮನವಿ ಮಾಡಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.