ಸಾಹಿತ್ಯ -ಸಾಂಸ್ಕೃತಿಕವಾಗಿ ಕಲಬುರಗಿ ಶ್ರೀಮಂತ
Team Udayavani, Nov 1, 2021, 11:17 AM IST
ಕಲಬುರಗಿ: ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಶ್ರೀಮಂತವಾಗಿರುವ ಕಲಬುರಗಿ ಈಗ ಮತ್ತೆ ಸಾಹಿತ್ಯ ಚಟುವಟಿಕೆಗಳ ಮೂಲಕವೇ ಗಮನ ಸೆಳೆಯುತ್ತಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ದಯಾನಂದ ಅಗಸರ ಹೇಳಿದರು.
ನಗರದ ಕಲಾ ಮಂಡಳದಲ್ಲಿ ರವಿವಾರ ಮಾತೋಶ್ರೀ ಈರಣ್ಣ ವಡ್ಡನಕೇರಿ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಐದನೇ ವರ್ಷದ ಅವ್ವ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಲಬುರಗಿಯಲ್ಲಿ ಇತ್ತೀಚೆಗೆ ನಿರಂತರವಾಗಿ ಸಾಹಿತ್ಯ ಚಟುವಟಿಕೆಗಳು ನಡೆಯುತ್ತಿವೆ. ಇದರ ಜತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿರುವವರನ್ನು ಗುರುತಿಸುವ ಕೆಲಸ ಸಂಘ-ಸಂಸ್ಥೆಗಳ ಮೂಲಕ ಆಗುತ್ತಿರುವುದು ಸಂತಸದ ಸಂಗತಿ ಎಂದರು.
ನಮ್ಮ ಭಾಗದ ಸಾಧಕರು ಬೆಂಗಳೂರು ಸೇರಿ ಇತರ ನಗರಗಳಲ್ಲಿ ಹೋಗಿ ಪ್ರಶಸ್ತಿಗಳನ್ನು ಸ್ವೀಕರಿಸುವ ಪರಿಸ್ಥಿತಿ ಇತ್ತು. ಆದರೆ, ಈಗ ಅಲ್ಲಿನ ಸಾಧಕರನ್ನು ನಾವೇ ಗುರುತಿಸಿ, ಬೆಂಗಳೂರಿಗರಿಗೂ ಪ್ರಶಸ್ತಿ ನೀಡುವಂತಾಗಿದೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೋಗುವುದನ್ನು ನಾನು ತಪ್ಪಿಸುವುದಿಲ್ಲ. ಏಕೆಂದರೆ ವಿಶ್ವವಿದ್ಯಾಲಯದಲ್ಲಿ ಈ ರೀತಿಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೇರಣೆ ನೀಡಿ ಪ್ರೋತ್ಸಾಹಿಸಬೇಕಿದೆ ಎಂದು ಹೇಳಿದರು.
ಅತ್ತಿವೇರಿ ಬಸವಧಾನದ ಬಸವೇಶ್ವರಿ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ಅಖಲ ಭಾರತ ಶರಣ ಸಾಹಿತ್ಯ ಪರಿಷತ್ ಉಪಾಧ್ಯಕ್ಷ ಅಪ್ಪಾರಾವ್ ಅಕ್ಕೋಣೆ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಡಾ| ಶರಣಬಸಪ್ಪ ವಡ್ಡನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಿದ್ಧಲಿಂಗ ಬುಕ್ ಡಿಪೋ ಪ್ರಕಾಶಕ ಬಸವರಾಜ ಕೊನೆಕ್, ಪ್ರಾಧ್ಯಾಪಕ ಡಾ| ವಿಜಯಕುಮಾರ ಪರುತೆ, ಪ್ರಮುಖರಾದ ರವೀಂದ್ರ ಮಾಲಿಪಾಟೀಲ, ಅಣವೀರಪ್ಪ, ಡಾ| ಸೋಮನಾಥ ಬಿರಾದಾರ, ಅಂಬಾರಾಯ ಬಟ್ಟೆ, ಅರುಣಕುಮಾರ, ಡಾ| ಗಿರೀಶ ಯಡ್ರಾಮಿ, ಶ್ವೇತಾ ವಡ್ಡನಕೇರಿ, ಲಕ್ಷ್ಮೀ ಪ್ರತಾಪ ಅಂಬಾಡೆ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.