ಬಗ್ಗೂರು ಕುಡಿವ ನೀರಿನ ಕೆರೆ ಖಾಲಿ ಖಾಲಿ!

Team Udayavani, Nov 1, 2021, 1:07 PM IST

ಬಗ್ಗೂರು ಕುಡಿವ ನೀರಿನ ಕೆರೆ ಖಾಲಿ ಖಾಲಿ!

ಸಿರುಗುಪ್ಪ: ಬಗ್ಗೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಗ್ಗೂರು, ಚಾಣಕನೂರು, ಕರ್ಚಿಗನೂರು, ಶ್ರೀನಗರ ಕ್ಯಾಂಪ್‌, ವೆಂಕಟೇಶ್ವರ ಕ್ಯಾಂಪ್‌ಗೆ ಶುದ್ಧ ಕುಡಿಯುವ ನೀರೊದಗಿಸುವ ಉದ್ದೇಶದಿಂದ ಬಹುಗ್ರಾಮ ಕುಡಿಯುವ ನೀರಿನಯೋಜನೆಯಡಿ ಕುಡಿಯುವ ನೀರಿನ ಕೆರೆ ನಿರ್ಮಾಣ ಮಾಡಲಾಗಿದೆ.

ಆದರೆ ಜನರಿಗೆ ಕೆರೆಯಿಂದ ಶುದ್ಧ ಕುಡಿಯುವ ನೀರೊದಗಿಸಲು ಪ್ರತಿವರ್ಷ ಲಕ್ಷಾಂತರ ರೂಗಳನ್ನು ಸರ್ಕಾರ ವೆಚ್ಚಮಾಡುತ್ತಿದೆ. ಕಳೆದ 2 ತಿಂಗಳಹಿಂದೆಯೇ ಈ ಕೆರೆಯಲ್ಲಿ ನೀರು ಖಾಲಿಯಾಗಿದ್ದು, ಇಲ್ಲಿವರೆಗೂ ಕೆರೆಗೆ ನೀರು ತುಂಬಿಸುವಕಾರ್ಯಕ್ಕೆ ಅ ಧಿಕಾರಿಗಳು ಮುಂದಾಗಿಲ್ಲ.ಇದರಿಂದಾಗಿ ನಾಲ್ಕು ಕಿ.ಮೀ. ದೂರವಿರುವರಾರಾವಿ ಗ್ರಾಮದಲ್ಲಿ ಬರುವ ಕೆರೆಯ ನೀರನ್ನು ತಂದು ಕುಡಿಯಬೇಕಾದ ಅನಿವಾರ್ಯ ಪರಿಸ್ಥಿತಿ ಗ್ರಾಮಸ್ಥರದ್ದಾಗಿದೆ.

ತಾಲೂಕಿನ ಬಗ್ಗೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ನಿರ್ಮಿಸಲಾದ ಕೆರೆಯಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಿದ್ದು,ಬಗ್ಗೂರು, ಚಾಣಕನೂರು, ಕರ್ಚಿಗನೂರು, ಶ್ರೀನಗರ ಕ್ಯಾಂಪ್‌, ವೆಂಕಟೇಶ್ವರ ಕ್ಯಾಂಪ್‌ನ ಜನರಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದರೂ ಅಧಿಕಾರಿಗಳು ಮಾತ್ರ ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಮುಂದಾಗಿಲ್ಲ. ಮಳೆಗಾಲದಲ್ಲಿಯೇ ಕುಡಿಯುವ ನೀರಿನ ಕೆರೆಯನ್ನು ತುಂಬಿಸುವುದು ವಾಡಿಕೆಯಾಗಿದೆ. ಆದರೆ ಮಳೆಗಾಲದಲ್ಲಿಯೇ ಈ ಕೆರೆಯು ಖಾಲಿ ಖಾಲಿಯಾಗಿದ್ದು, ಬಗ್ಗೂರು ಗ್ರಾಮಸ್ಥರು ತಮ್ಮ ಗ್ರಾಮದಿಂದ 4 ಕಿಮೀ ದೂರವಿರುವ ರಾರಾವಿ ಗ್ರಾಮದಲ್ಲಿ ಬರುವಕೆರೆ ನೀರನ್ನು ತಂದು ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನುಳಿದ ಗ್ರಾಮಗಳ ಜನರಿಗೆ ಹಗರಿ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳೇ ಆಸರೆಯಾಗಿವೆ.

ಬಗ್ಗೂರು, ಚಾಣಕನೂರು, ಕರ್ಚಿಗನೂರು, ಶ್ರೀನಗರ ಕ್ಯಾಂಪ್‌, ವೆಂಕಟೇಶ್ವರ ಕ್ಯಾಂಪ್‌ನ ಜನರಿಗೆ ಶುದ್ಧ ಕುಡಿಯವು ನೀರೊದಗಿಸುವಉದ್ದೇಶದಿಂದ ಕೋಟ್ಯಾಂತರ ರೂ. ವೆಚ್ಚಮಾಡಿ ಕುಡಿಯುವ ನೀರಿನ ಕೆರೆಯನ್ನು ನಿರ್ಮಾಣ ಮಾಡಿದ್ದಾರೆ. ಆದರೆ ಕೆರೆಗೆ ನೀರು ತುಂಬಿಸಲು ಗ್ರಾಪಂ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಪಂ ಆಡಳಿತ ಮಂಡಳಿಯವರು ನಿರ್ಲಕ್ಷ್ಯವಹಿಸಿದ ಕಾರಣ ಮಳೆಗಾಲದಲ್ಲಿಯೇ ಕೆರೆ ಖಾಲಿಯಾಗಿದೆ.

ಬಗ್ಗೂರು ಬಹುಗ್ರಾಮ ಕುಡಿಯುವ ನೀರಿನ ಕೆರೆ ಖಾಲಿಯಾಗಿದ್ದು. ಶೀಘ್ರವೇ ಕಾಲುವೆಯಿಂದ ನೀರು ಹರಿಸಿ ತುಂಬಿಸಲು ಕ್ರಮ ಕೈಗೊಳ್ಳಲಾಗುವುದು. –ರವೀಂದ್ರನಾಯ್ಕ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ

ಕುಡಿಯುವ ನೀರಿನ ಕೆರೆ ಖಾಲಿಯಾಗಿ 2 ತಿಂಗಳಾಗಿದ್ದರೂ ಕೆರೆಗೆ ನೀರು ತುಂಬಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಿಲ್ಲ. ಇದರಿಂದಾಗಿ ನಮ್ಮ ಊರಿನವರು ನೀರಿಗಾಗಿ 8 ಕಿಮೀ ಸವೆಸಿ ರಾರಾವಿ ಗ್ರಾಮದಿಂದ ಕುಡಿಯುವ ನೀರನ್ನು ತರಬೇಕಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ. ವಾ. ಹುಲುಗಯ್ಯ, ಗ್ರಾಮಸ್ಥ

ಜಲ್‌ಜೀವನ್‌ ಮಿಷನ್‌ ಯೋಜನೆಯಡಿ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಕೆರೆಗೆ ನೀರು ತುಂಬಿಸುವಂತೆ ತಿಳಿಸಲಾಗಿದೆ. ಕೆರೆಯಲ್ಲಿ ಹೊಸದಾಗಿ ಬಂಡೆಗಳನ್ನು ಅಳವಡಿಸಿದ ನಂತರ ಕೆರೆಗೆ ನೀರು ಹರಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ.– ಆದೆಪ್ಪ, ಪಿಡಿಒ

-ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.