ಶಿರ್ವ: ಮಹಿಳೆಯರ ಸಂಜೀವಿನಿ ಸಂತೆಗೆ ಚಾಲನೆ


Team Udayavani, Nov 1, 2021, 3:45 PM IST

ಶಿರ್ವ: ಮಹಿಳೆಯರ ಸಂಜೀವಿನಿ ಸಂತೆಗೆ ಚಾಲನೆ

ಶಿರ್ವ: ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿಯವರ ಆದೇಶದಂತೆ ಸಂಜೀವಿನಿ ಒಕ್ಕೂಟಗಳ 2ನೇ ಸಂಜೀವಿನಿ ಸಂತೆಯು ನ. 1 ರಂದು ಶಿರ್ವ ಸಾರ್ವಜನಿಕ ಗಣೇಶೋತ್ಸವ ವೇದಿಕೆ ಬಳಿಯ ಶಿರ್ವ ಮಹಿಳಾ ಮಂಡಲದ ಮಹಿಳಾ ಸೌಧದಲ್ಲಿ ನಡೆಯಿತು.

ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರಕಾರದ ಆದೇಶದಂತೆ ಮಹಿಳೆಯರು ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡುವ ನಿಟ್ಟಿನಲ್ಲಿ ಗಾಂಧೀ ಜಯಂತಿಯಂದು ನಡೆದ ಸಂಜೀವಿನಿ ಸಂತೆ ಯಶಸ್ವಿಯಾಗಿದ್ದು, ಇದೀಗ 2ನೇ ಸಂಜೀವಿನಿ ಸಂತೆಗೆ ಚಾಲನೆ ನೀಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗ್ರಾಮಸ್ಥರು,ಸಾರ್ವಜನಿಕರು ಮಹಿಳೆಯರ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಪ್ರೋತ್ಸಾಹ ನೀಡಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಆರ್‌ಎಲ್‌ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ಯ,ಕುತ್ಯಾರು ಗ್ರಾ.ಪಂ. ಅಧ್ಯಕ್ಷೆ ಲತಾ ಎಸ್‌.ಆಚಾರ್ಯ, ಶಿರ್ವ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾರ್ಡೋಜಾ, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಶಿರ್ವ ಒಕ್ಕೂಟದ ಅಧ್ಯಕ್ಷೆ ಗೀತಾ ವಾಗ್ಲೆ, ಕುತ್ಯಾರು-ಕಳತ್ತೂರು ಒಕ್ಕೂಟದ ಅಧ್ಯಕ್ಷೆ ಶಾರದೇಶ್ವರೀ ಗುರ್ಮೆ, ಶಿರ್ವ, ಮುದರಂಗಡಿ, ಮತು ಕುತ್ಯಾರು ಗ್ರಾ.ಪಂಚಾಯತ್‌ಗಳ ಸದಸ್ಯರು, ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿರ್ವ,ಮುದರಂಗಡಿ ಮತ್ತು ಕುತ್ಯಾರು ಗ್ರಾ.ಪಂಚಾಯತ್‌ಗಳ ಸಂಜೀವಿನಿ ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯೆಯರು ಮನೆಯಲ್ಲಿಯೇ ತಯಾರಿಸಿದ ದಿನಬಳಕೆಯ ವಸ್ತುಗಳು, ತರಕಾರಿ,ಮಾಸ್ಕ್,ಬಟ್ಟೆ ,ಸಿಹಿ ತಿಂಡಿಗಳು, ಸಾಂಬಾರ್‌ ಪುಡಿ,ಮೂಡೆ ಎಲೆ,ಅರಸಿನದ ಎಲೆ ಮೊದಲಾದ 50ಕ್ಕೂ ಹೆಚ್ಚಿನ ಉತ್ಪನ್ನಗಳ ಮಾರಾಟ ನಡೆಯಿತು.

ಶಿರ್ವ ಗ್ರಾ.ಪಂ. ಪಿಡಿಒ ಅನಂತ ಪದ್ಮನಾಭ ನಾಯಕ್‌ ಸ್ವಾಗತಿಸಿ,ವಂದಿಸಿದರು.

ಟಾಪ್ ನ್ಯೂಸ್

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.