ಬೀದರನಲ್ಲಿ ಕೋವಿಡ್‌ ಲಸಿಕಾ ಪ್ರಕ್ರಿಯೆಗೆ ವೇಗ


Team Udayavani, Nov 2, 2021, 10:32 AM IST

5vaccine

ಬೀದರ: ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರ ನಿರ್ದೇಶನದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದರಿಂದ ಜಿಲ್ಲೆಯಲ್ಲಿ ಕೋವಿಡ್‌ ಲಸಿಕಾಕರಣ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಹಲವಾರು ಸುತ್ತಿನ ಸಭೆ ನಡೆಸಿ ತಿಳಿಸಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಲಸಿಕಾ ಪ್ರಕ್ರಿಯೆ ಚುರುಕುಗೊಂಡಿದೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿಸೋಜ್‌ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದರಿಂದ, ಜಿಲ್ಲೆಯ ವಿವಿಧೆಡೆ ರಾತ್ರಿ ವೇಳೆಯಲ್ಲೂ ಲಸಿಕಾಕರಣ ನಡೆಯುತ್ತಿದೆ. ಬಗದಲ್‌ ಗ್ರಾಮದಲ್ಲಿ 17 ಜನರಿಗೆ ರಾತ್ರಿ ವೇಳೆಯಲ್ಲಿ ಲಸಿಕೆ ನೀಡಲಾಗಿದೆ.

ಮನವೊಲಿಸಿ ಲಸಿಕೆ

ತಪ್ಪು ತಿಳಿವಳಿಕೆಯ ಕಾರಣಕ್ಕೆ ಕೋವಿಡ್‌ ಲಸಿಕೆ ಪಡೆಯಲು ಹಿಂದೇಟು ಹಾಕುವವರಿಗೆ ಒತ್ತಡ ಹಾಕದೇ ಅವರ ಮನವೊಲಿಸಿ ಅಧಿಕಾರಿಗಳು ಲಸಿಕೆ ನೀಡುತ್ತಿದ್ದಾರೆ. ಜಿಪಂ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್‌. ಮತ್ತು ಡಿಎಚ್‌ಒ ಡಾ| ವಿ.ಜಿ.ರೆಡ್ಡಿ ಅವರು ಈಚೆಗೆ ಲಸಿಕಾ ಪರಿಶೀಲನೆಗಾಗಿ ವಡಗಾಂವ್‌ಗೆ ಭೇಟಿ ನೀಡಿದಾಗ ಮನವೊಲಿಸಿ ಮೂವರಿಗೆ ಲಸಿಕೆ ಕೊಡಿಸಿದರು. ನೌಬಾದ್‌ ಪಿಎಚ್‌ಸಿ ಲಸಿಕಾ ತಂಡವು ನಗರದ ಮೋಹನ್‌ ಮಾರ್ಕೆಟ್‌ ಸೇರಿದಂತೆ ವಿವಿಧೆಡೆ ನಾನಾ ಅಂಗಡಿಗಳಿಗೆ ತೆರಳಿ ಅಂದಾಜು 119 ಜನರಿಗೆ ಕೋವಿಡ್‌ ಲಸಿಕೆ ನೀಡಿದ್ದು ವಿಶೇಷವಾಗಿತ್ತು. ಇಂದಿರಾ ಕ್ಯಾಂಟನ್‌ಗೆ ಬರುವವರಿಗೂ ಲಸಿಕೆ ನೀಡಲಾಯಿತು.

ಎನ್ಸಿಸಿ, ಎನ್ನೆಸ್ಸೆಸ್‌ ತಂಡ ಗ್ರಾಮಗಳಿಗೆ

ಆಯಾ ಗ್ರಾಮಗಳಲ್ಲಿನ ಲಸಿಕಾಕರಣ ಉಸ್ತುವಾರಿಯನ್ನು ಗ್ರಾಮ ಪಡೆಗಳಿಗೆ ವಹಿಸಲಾಗಿದೆ. ಲಸಿಕಾ ಪ್ರಗತಿ ಕಡಿಮೆ ಇರುವ ಕಡೆಗೆ ಹೆಚ್ಚಿನ ಗಮನ ನೀಡಲಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕಾಲೇಜಿನ ಎನ್ನೆಸ್ಸೆಸ್‌, ಎನ್ಸಿಸಿ ಸ್ವಯಂ ಸೇವಕರು ಬೀದರ್‌ ತಾಲೂಕಿನ 5 ಗ್ರಾಮಗಳಿಗೆ ರವಿವಾರ ಲಸಿಕಾಕರಣದ ಜನಜಾಗೃತಿಗೆ ತೆರಳಿದರು.

ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿಗಳ ಮನವಿ

ಜಿಲ್ಲೆಗೆ ನಿಗದಿಪಡಿಸಿದ ಕೋವಿಡ್‌-19 ಲಸಿಕಾಕರಣ ಗುರಿ ತಲುಪಲು ಲಸಿಕಾಕರಣದ ಪ್ರಕ್ರಿಯೆಯನ್ನು ಈಗ ಮತ್ತಷ್ಟು ವೇಗಗೊಳಿಸಲಾಗಿದೆ. ಜಿಲ್ಲಾಡಳಿತದ ಸೂಚನೆಯಂತೆ ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಲಸಿಕಾ ನೀಡಿಕೆ ಕಾರ್ಯದಲ್ಲಿ ಸಕ್ರಿಯ ಭಾಗಿಯಾಗಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.