ಭಾರತ: ಕಳೆದ 24ಗಂಟೆಗಳಲ್ಲಿ 10,423 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.21ಕ್ಕೆ ಏರಿಕೆ
Team Udayavani, Nov 2, 2021, 11:15 AM IST
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 10,423 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು ಕಳೆದ 259 ದಿನಗಳ ನಂತರದ ಕನಿಷ್ಠ ಪ್ರಮಾಣದ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ನವೆಂಬರ್ 02) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಉಪಚುನಾವಣೆ: ಬಿಜೆಪಿಗೆ ನಾಯಕತ್ವ ಪ್ರಶ್ನೆ, ಕೈಗೆ ಪ್ರತಿಷ್ಠೆ, ಜೆಡಿಎಸ್ ಗೆ ದಿಕ್ಸೂಚಿ
ಭಾರತದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ ಇದೀಗ 3,42,96, 237ಕ್ಕೆ ಏರಿಕೆಯಾಗಿದ್ದು, ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,58,880ಕ್ಕೆ ತಲುಪಿರುವುದಾಗಿ ಅಂಕಿಅಂಶದಲ್ಲಿ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ 15,021 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ 3,36,83,581 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.21ಕ್ಕೆ ಏರಿಕೆಯಾಗಿದ್ದು, ಇದು ಕಳೆದ 2020ರ ಮಾರ್ಚ್ ನಂತರದ ಗರಿಷ್ಠ ಪ್ರಮಾಣದ್ದಾಗಿದೆ.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 443 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ಏತನ್ಮಧ್ಯೆ ಚೀನಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಕಠಿಣ ನಿರ್ಬಂಧ ವಿಧಿಸುತ್ತಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.