ಕನ್ನಡ ಭಾಷೆ ಉದ್ಯೋಗ ಮಾಧ್ಯಮವೂ ಆಗಲಿ
Team Udayavani, Nov 2, 2021, 12:19 PM IST
ಚನ್ನಗಿರಿ: ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಕಣ್ಮರೆಯಾಗುತ್ತಿದೆ ಎಂಬ ಆತಂಕವಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಭಾಷೆಯಬೆಳವಣಿಗೆ ಆಶಾದಾಯಕವಾಗಿದೆ. ಇದರ ಜೊತೆಗೆ ಮುಚ್ಚುತ್ತಿರುವ ಸರ್ಕಾರಿ ಶಾಲೆಗಳರಕ್ಷಣೆ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಶಿಕ್ಷಣದ ಜೊತೆಗೆ ಉದ್ಯೋಗದ ಮಾಧ್ಯಮವಾಗಿ ಕನ್ನಡವನ್ನು ರೂಪಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಹೇಳಿದರು.
ಕನದನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಬ್ರಾಹ್ಮಿ ಲಿಪಿಯಿಂದರೂಪುಗೊಂಡ ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಸ್ವತಂತ್ರ ಭಾರತದಲ್ಲಿ ಕನ್ನಡ ಭಾಷೆ ಸಾಹಿತ್ಯ ಚಳವಳಿಯಾಗಿ ರೂಪುಗೊಂಡಿತು. ಅದಕ್ಕೆ ಸಾಹಿತಿಗಳು ಹಾಗೂ ಕನ್ನಡ ಪುರೋಹಿತರ ಕೊಡುಗೆ ಸ್ಮರಣೀಯ ಎಂದರು.
ಕನ್ನಡ ಶಕ್ತಿಯುತ ಭಾಷೆಯಾಗಿದ್ದು, ಭಾಷೆ ಬೆಳೆಯಲು ಕನ್ನಡದಲ್ಲಿ ಹೊಸ ಚಿಂತನೆಗಳನ್ನು ಹುಟ್ಟು ಹಾಕಬೇಕಿದೆ. ತತ್ವಶಾಸ್ತ್ರ, ವಿಜ್ಞಾನ, ಭೌತಶಾಸ್ತ್ರ ಸೇರಿದಂತೆ ಯಾವುದೇ ವಿಚಾರವಾಗಿ ಹೊಸ ಚಿಂತನೆಗಳನ್ನು ಕನ್ನಡದಲ್ಲಿ ಹುಟ್ಟು ಹಾಕಿದರೆ ವಿಶ್ವ ನಮ್ಮ ಭಾಷೆ ಕಲಿಯಲು ಒಲವು ತೋರುತ್ತದೆ. ಈ ನಿಟ್ಟಿನಲ್ಲಿ ಸಾಹಿತಿಗಳು, ವಿಜ್ಞಾನಿಗಳು, ಲೇಖಕರು ಚಿಂತನೆ ನಡೆಸಬೇಕೆಂದು ಸಲಹೆ ನೀಡಿದರು.
ತಹಶೀಲ್ದಾರ್ ಪಟ್ಟರಾಜ ಗೌಡ ಮಾತನಾಡಿ,ದ್ರಾವಿಡ ಭಾಷೆಗಳಲ್ಲಿ ಕನ್ನಡ ಭಾಷೆ ಮಹತ್ವದ ಸ್ಥಾನಹೊಂದಿದೆ. ಅಲ್ಲದೆ ಜಗತ್ತಿನ ಅತ್ಯಂತ ಶ್ರೀಮಂತ ಭಾಷೆಯಾಗಿದೆ. ಜಗತ್ತಿನ ಯಾವ ಭಾಷೆಯಲ್ಲಿಯೂಇಷ್ಟೊಂದು ವಿಪುಲವಾದ ಸಾಹಿತ್ಯಿಕ ಕೃಷಿ ಆಗಿಲ್ಲ ಎಂದರು.
ಪುರಸಭೆ ಸದಸ್ಯ ಚಿಕ್ಕಣ್ಣ, ಮುಖ್ಯಾಧಿಕಾರಿ ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ತಾಪಂ ಇಒ ಎಂ.ಆರ್. ಪ್ರಕಾಶ್ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.