ಮಾತೃಭಾಷೆಗೆ ಮೊದಲಾದ್ಯತೆ: ಬೆಲ್ಲದ

ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಲಾಗುವುದು ಎಂದರು.

Team Udayavani, Nov 2, 2021, 4:20 PM IST

Udayavani Kannada Newspaper

ಹುಬ್ಬಳ್ಳಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯಿಂದ ಆಯಾ ರಾಜ್ಯದ ಮಾತೃಭಾಷೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಹು-ಧಾ ಮಹಾನಗರ ಪಾಲಿಕೆಯಿಂದ ಶೀಘ್ರ ಸಿದ್ಧಾರೂಢ ಮಠದ ಆವರಣದಲ್ಲಿಂದು ಶ್ರೀ ಭುವನೇಶ್ವರಿ ಮಾತೆಗೆ ಪೂಜೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು. ಹಿಂದಿನ ಸರ್ಕಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಮಾಡುವಂತೆ ನಿರ್ಣಯ ತಗೆದುಕೊಂಡಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿತು. ಆದರೆ ನೂತನವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಅದರಡಿ ಪ್ರತಿಯೊಂದು ರಾಜ್ಯದಲ್ಲಿ ಆಯಾ ಪ್ರಾಥಮಿಕ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಂತೆ ನಮ್ಮ ರಾಜ್ಯದಲ್ಲಿ ಪ್ರಾಥಮಿಕ ಭಾಷೆಯಾಗಿ ಕನ್ನಡಕ್ಕೆ ಆದ್ಯತೆ ನೀಡಲಾಗಿದೆ ಎಂದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾಥಮಿಕ ಶಿಕ್ಷಣ ಸಂಪೂರ್ಣ ಕನ್ನಡದ ಭಾಷೆ ಹಾಗೂ ಆಯಾ ರಾಜ್ಯದ ಭಾಷೆಯಲ್ಲಿಯೇ ಆಗುವುದು. ಇದರಿಂದ ನಮ್ಮ ದೇಶದ ಸಂಸ್ಕೃತಿ ಗಟ್ಟಿಯಾಗುತ್ತದೆ. ಮೂಲ ಭಾಷೆಗೆ ಗೌರವ ನೀಡಿದಂತಾಗುತ್ತದೆ. ಕರ್ನಾಟಕ ಹಾಗೂ ಕನ್ನಡ ಭಾಷೆ ಉದಯವಾಗಲು ಹುಬ್ಬಳ್ಳಿ-ಧಾರವಾಡದ ಪಾತ್ರ ಬಹು ದೊಡ್ಡದಿದೆ. ಕನ್ನಡ ಏಕೀಕರಣಕ್ಕಾಗಿ ಕನ್ನಡ ಭಾಷೆಗಾಗಿ ಅದರಗುಂಚಿ ಶಂಕರರಾಯರು ಹೋರಾಟ ಮಾಡಿದ್ದರು. ಎಲ್ಲ ಹೋರಾಟಗಳಿಗೆ ಮುಂಚೂಣಿಯಲ್ಲಿ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘವಿತ್ತು ಎಂದರು.

ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ ಮಾತನಾಡಿ, ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ದೊಡ್ಡದು. ಅದರಲ್ಲೂ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಹಾಗೂ ಸಂಘಟನೆಗಾರರ ಪಾತ್ರ ಹೆಚ್ಚಿದೆ. ನಗರದಲ್ಲಿ ನಾಮಫಲಕ ಬದಲಿಸುವ ಕೆಲಸ ಕಾರ್ಯೋನ್ಮುಖವಾಗಿದ್ದು, ಈಗಾಗಲೇ 324 ನಾಮಫಲಕ ಬದಲಾವಣೆ ಮಾಡಲಾಗಿದೆ. ಇನ್ನುಳಿದ 800ಕ್ಕೂ ಹೆಚ್ಚು ಫಲಕಗಳನ್ನು ಶೀಘ್ರ ಬದಲಾವಣೆ ಮಾಡಲಾಗುವುದು. ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಲಾಗುವುದು ಎಂದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಮಾತನಾಡಿ, ಇಂದು ರಾಜ್ಯಾದ್ಯಂತ ಎಲ್ಲ ಕಡೆ ಕನ್ನಡ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರಿಗೂ ಕನ್ನಡದ ಬಗ್ಗೆ ಅಭಿಮಾನ ಇರಬೇಕು. ಕನ್ನಡಕ್ಕೆ ಧಕ್ಕೆಯಾದಾಗ ಹೋರಾಟ ನಡೆಸಿ ತಪ್ಪು ತಿದ್ದುವ ಮೂಲಕ ಕನ್ನಡಪರ ಸಂಘಟನೆಕಾರರು ಅಭಿಮಾನ ತೋರುತ್ತ ಬಂದಿದ್ದಾರೆ ಎಂದರು.

2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡ ಭಾಷೆಯಲ್ಲಿ 125 ಕ್ಕೆ 125 ಅಂಕ ಪಡೆದ 36 ವಿದ್ಯಾರ್ಥಿಗಳಿಗೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಆಯ್ಕೆಯಾದ 6 ವಿಜೇತರನ್ನು ಸನ್ಮಾನಿಸಲಾಯಿತು. ದಕ್ಷಿಣ ವೈಷ್ಣೋದೇವಿ ಮಂದಿರದ ಧರ್ಮಾಧಿಕಾರಿ ಶ್ರೀ ದೇವಪ್ಪಜ್ಜನವರ ಸಾನಿಧ್ಯ ವಹಿಸಿದ್ದರು. ನೂತನ ಪಾಲಿಕೆ ಸದಸ್ಯರಾದ ಶಿವು ಮೆಣಸಿನಕಾಯಿ, ರಾಜಣ್ಣಾ ಕೊರವಿ, ಉಮೇಶಗೌಡ ಕೌಜಗೇರಿ, ನಿರಂಜನ ಹಿರೇಮಠ, ರೂಪಾ ಶೆಟ್ಟಿ, ಚೇತನ ಹಿರೇಕೆರೂರ, ಕನ್ನಡಪರ ಸಂಘಟನೆಗಳ ಅಮೃತ ಇಜಾರಿ, ಗುರುನಾಥ ಉಳ್ಳಿಕಾಶಿ, ಶೇಖರಯ್ಯ ಮಠಪತಿ, ಪಾಲಿಕೆ ಹೆಚ್ಚುವರಿ ಆಯುಕ್ತ ಎ.ಆರ್‌.ದೇಸಾಯಿ, ಪಾಲಿಕೆ ವಿಶೇಷಾಧಿಕಾರಿ ಎಸ್‌.ಸಿ. ಬೇವೂರ ಇನ್ನಿತರರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.