ಕರ್ನಾಟಕ ಸೇರಿ ಹಲವು ಕಡೆ ಆ್ಯಕ್ಟ್ಸನ್ ಲಸಿಕೆ ಪ್ರಯೋಗ
ಹೊಸ ಲಸಿಕೆಗೆ ತಾತ್ಕಾಲಿಕವಾಗಿ "ಎಕೆಎಸ್-452' ಎಂಬ ಹೆಸರು
Team Udayavani, Nov 2, 2021, 11:00 PM IST
ನವದೆಹಲಿ : ಅಮೆರಿಕದ ಆ್ಯಕ್ಟ್ಸನ್ ಬಯೋಸೈನ್ಸಸ್ (Akston biosciences)ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆಯ ಪ್ರಯೋಗಾರ್ಥ ಪರೀಕ್ಷೆ ದೇಶದಲ್ಲಿಯೂ ಶೀಘ್ರವೇ ಶುರುವಾಗಲಿದೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ರಾಜಸ್ಥಾನ, ಗುಜರಾತ್‌ನ ಪ್ರಮುಖ ಆಸ್ಪತ್ರೆಗಳಲ್ಲಿ ಅದರ ಪ್ರಯೋಗ ನಡೆಯಲಿದೆ.
ಪ್ರಸ್ತಾವಿತ ಲಸಿಕೆ ಅತ್ಯಂತ ಕಡಿಮೆ ದರದ ಲಸಿಕೆ ಆ್ಯಕ್ಟ್ಸನ್ ನದ್ದು ಎಂದು ಹೇಳಲಾಗುತ್ತಿದೆ. ಸದ್ಯ ಸಿದ್ಧಗೊಳಿಸಲಾಗಿರುವ ಲಸಿಕೆಯ ಮಾದರಿಯನ್ನು ಹಿಮಾಚಲ ಪ್ರದೇಶದ ಕಸೌಲಿಯಲ್ಲಿರುವ ಕೇಂದ್ರೀಯ ಔಷಧ ಪ್ರಯೋಗಶಾಲೆಗೆ ರವಾನಿಸಲಾಗಿದೆ. ಅಲ್ಲಿ ಅದರ ಪರೀಕ್ಷೆ ನಡೆಯಲಿದೆ. ಸದ್ಯ ಲಸಿಕೆಗೆ ಎಕೆಎಸ್-452 ಎಂಬ ಹೆಸರು ನೀಡಲಾಗಿದೆ. ಕನಿಷ್ಠ 6 ತಿಂಗಳ ಕಾಲ ಲಸಿಕೆಯನ್ನು 25 ಡಿಗ್ರಿ ಸೆಲ್ಸಿಯಸ್ ನಲ್ಲಿ, 1 ತಿಂಗಳ ಅವಧಿಗೆ 37 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಿಸಲು ಅವಕಾಶ ಉಂಟು.
259 ದಿನಗಳಿಗೆ ಕನಿಷ್ಠ:
ಇದೇ ವೇಳೆ, ಸೋಮವಾರದಿಂದ ಮಂಗಳವಾರದ ಅವಧಿಯಲ್ಲಿ ದೇಶದಲ್ಲಿ 10,423 ಹೊಸ ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. ಇದು 259 ದಿನಗಳಿಗೆ ಹೋಲಿಕೆ ಮಾಡಿದರೆ ಕನಿಷ್ಠದ್ದಾಗಿದೆ. 24 ಗಂಟೆಗಳಲ್ಲಿ 443 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ. 2020 ಮಾರ್ಚ್ ಬಳಿಕ ದೇಶದಲ್ಲಿ ಸಕ್ರಿಯ ಸೋಂಕು ಪ್ರಕರಣ ಶೇ.0.45 ಆಗಿದೆ. ಚೇತರಿಕೆ ಪ್ರಮಾಣ ಶೇ.98.21 ಆಗಿದೆ.
ಇದನ್ನೂ ಓದಿ : ಕೋವಿಡ್ ಹಿನ್ನೆಲೆ : ಕೊಂಗಳ್ಳಿ ಬೆಟ್ಟಕ್ಕೆ ನ. 4ರಿಂದ 18ರವರೆಗೆ ಪ್ರವೇಶ ನಿರ್ಬಂಧ
ಹೆಚ್ಚುವರಿ ದಾಖಲೆ ಸಲ್ಲಿಕೆ
ನ.3ರಂದು ವಿಶ್ವ ಆರೋಗ್ಯ ಸಂಸ್ಥೆಯ ಪರಿಣತರ ಸಭೆ ನಡೆಯಲಿದೆ. ಅದರಲ್ಲಿ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಅದಕ್ಕಾಗಿ, ಕಂಪನಿ ಅಗತ್ಯವಿರುವ ದಾಖಲೆಗಳನ್ನು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.