ಖಾಸಗಿ ಶಿಕ್ಷಕರ ಕೊರತೆ ನಿವಾರಿಸಲು ಆದ್ಯತೆ: ನಾಗೇಶ್
"ಚಿಣ್ಣರ ಚಿಲುಮೆ'ಗೆ ಶಿಕ್ಷಣ ಸಚಿವರಿಂದ ಚಾಲನೆ
Team Udayavani, Nov 3, 2021, 7:00 AM IST
ಬೆಳ್ತಂಗಡಿ: ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿ ಸುವ ವಿಚಾರವಾಗಿ ಆರ್ಥಿಕ ಇಲಾಖೆ ಯೊಂದಿಗೆ ಚರ್ಚಿಸಿ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭರವಸೆ ನೀಡಿದರು.
ಧರ್ಮಸ್ಥಳಕ್ಕೆ ಮಂಗಳವಾರ ಆಗಮಿಸಿದ ಸಚಿವರು 1ರಿಂದ 5ನೇ ತರಗತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಚಿಲುಮೆ’ ಮಾದರಿ ತರಗತಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಬರಮಾಡಿಕೊಂಡು ಶುಭ ಹಾರೈಸಿ ಮಾತನಾಡಿದರು.
ಶಿಕ್ಷಕರು ಪ್ರೀತಿ-ವಿಶ್ವಾದಿಂದ ಮಕ್ಕ ಳನ್ನು ಮಾತನಾಡಿಸಿ ಅವರಲ್ಲಿರುವ ಭಯ, ಆತಂಕ ನಿವಾರಿಸಿ ಲವ ಲವಿಕೆಯಿಂದ ಶಾಲೆಗೆ ಬರುವಂತೆ ಪ್ರೇರೇಪಿಸಬೇಕು ಎಂದು ಸಚಿವರು ಸಲಹೆ ನೀಡಿದರು.
ಸಂಸ್ಕಾರಯುತ ಶಿಕ್ಷಣ ನೀಡಿ ವಿದ್ಯಾರ್ಥಿಗಳನ್ನು ಸಭ್ಯ, ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದ ಅವರು, ಧರ್ಮಸ್ಥಳವು ದೇಶಕ್ಕೆ ಮಾದರಿಯಾಗಿದ್ದು ಧರ್ಮಾಧಿ ಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ವಿವಿಧ ಕ್ಷೇತ್ರಗಳಲ್ಲಿನ ಸೇವೆ ಶ್ಲಾಘನೀಯ ಎಂದು ಹೇಳಿದರು.
20.70 ಕೋಟಿ ರೂ.
ಪೂರಕ ಅನುದಾನ
ಡಾ| ವೀರೇಂದ್ರ ಹೆಗ್ಗಡೆ ಮಾತನಾಡಿ, ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಧರ್ಮಸ್ಥಳದ ಜ್ಞಾನದೀಪ ಕಾರ್ಯಕ್ರಮದಡಿ ಈ ವರ್ಷ 600 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಧಾರವಾಡ ಜಿಲ್ಲೆಯ 10 ಶಾಲೆಗಳ ಸರ್ವತೋಮುಖ ಪ್ರಗತಿಗೆ ನೆರವು ನೀಡಲಾಗಿದೆ. ಶಾಲೆ ಗಳಿಗೆ ಕಟ್ಟಡ, ಶೌಚಾಲಯ, ಕ್ರೀಡಾ ಸಾಮಗ್ರಿ ಮೊದಲಾದ ಮೂಲ ಸೌಕರ್ಯಒದಗಿಸಲು ಈ ವರೆಗೆ 20.70 ಕೋಟಿ ರೂ. ಪೂರಕ ಅನು ದಾನ ನೀಡ ಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಲಖೀಂಪುರ ಕಿಸಾನ್ ಸ್ಮತಿ ದಿವಸ ಆಚರಿಸುವಂತೆ ಸಮಾಜವಾದಿ ಪಕ್ಷ ಕರೆ
311 ಶಾಲೆಗಳಿಗೆ ಬೆಂಚು-ಡೆಸ್ಕ್
ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ 311 ಶಾಲೆಗಳಿಗೆ 2,370 ಬೆಂಚು-ಡೆಸ್ಕ್ಗಳನ್ನು ಮಂಜೂರು ಮಾಡಿದ್ದು ಸಚಿವ ನಾಗೇಶ್ ಪೀಠೊಪಕರಣಗಳನ್ನು ಬಿಡು ಗಡೆಗೊಳಿಸಿ ಶುಭ ಹಾರೈಸಿದರು.
ಶಾಸಕ ಹರೀಶ್ ಪೂಂಜ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್, ಮುಖ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮತ್ತು ಯೋಜನಾಧಿಕಾರಿ ಪುಷ್ಪರಾಜ್, ತಹಶೀಲ್ದಾರ್ ಮಹೇಶ್ ಜೆ. ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ವಿರೂಪಾಕ್ಷಪ್ಪ ಉಪಸ್ಥಿತರಿದ್ದರು.
ನಿವೃತ್ತ ಮುಖ್ಯ ಶಿಕ್ಷಕ ವಸಂತ ಭಟ್ ಪ್ರಸ್ತಾವನೆಗೈದರು. ಮುಖ್ಯೋ ಪಾಧ್ಯಾಯ ಸುಬ್ರಹ್ಮಣ್ಯ ರಾವ್ ಸ್ವಾಗತಿಸಿದರು. ಶಿಕ್ಷಕಿ ಪೂರ್ಣಿಮಾ ಜೋಶಿ ವಂದಿಸಿದರು. ಮನೋರಮಾ ತೋಳ್ಪಾಡಿತ್ತಾಯ ಕಾರ್ಯಕ್ರಮ ನಿರ್ವಹಿಸಿದರು.ಆರಂಭದಲ್ಲಿ ವಿದ್ಯಾರ್ಥಿಗಳು ಸಚಿವರಿಗೆ ಗುಲಾಬಿ ಹೂ ನೀಡಿ ಗೌರವಿಸಿದರು.
ನಲಿ-ಕಲಿ ಪ್ರಾತ್ಯಕ್ಷಿಕೆಗೆ ಸಚಿವರಿಂದ ಶ್ಲಾಘನೆ
ಶಾಲೆಯಲ್ಲಿ ಆರಂಭಿಸಿದ ಚಿಣ್ಣರ ಚಿಲುಮೆಯ ಮಾದರಿ ತರಗತಿಯನ್ನು ವೀಕ್ಷಿಸಿದರು. ಕನ್ನಡ ಅಕ್ಷರ ಮಾಲೆ, ಇಂಗ್ಲಿಷ್ ಅಕ್ಷರಗಳು, ಗ್ರಹಗಳು ಮತ್ತು ನಕ್ಷತ್ರಗಳು, ಗಣಿತದ ಚಿಹ್ನೆಗಳು ಇತ್ಯಾದಿಗಳನ್ನು ಮಕ್ಕಳು ನಲಿ-ಕಲಿ ತಣ್ತೀದಡಿ ಕಲಿಯುವ ಪ್ರಾತ್ಯಕ್ಷಿಕೆಗಳನ್ನು ನೋಡಿ ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.