ಬಿಜೆಪಿ ನಾಯಕರ ಟೀಕೆಗಳಿಗೆ ಉಪ ಚುನಾವಣೆ ಫ‌ಲಿತಾಂಶ ಉತ್ತರ ಕೊಟ್ಟಿದೆ: ಡಿಕೆಶಿ


Team Udayavani, Nov 3, 2021, 10:30 PM IST

ಬಿಜೆಪಿ ನಾಯಕರ ಟೀಕೆಗಳಿಗೆ ಉಪ ಚುನಾವಣೆ ಫ‌ಲಿತಾಂಶ ಉತ್ತರ ಕೊಟ್ಟಿದೆ: ಡಿಕೆಶಿ

ಬೆಂಗಳೂರು:ಕಾಂಗ್ರೆಸ್‌ ಮುಳುಗಿದ ಹಡಗು, ಇಬ್ಟಾಗ, ಮೂರು ಭಾಗ ಆಗಿದೆ ಎಂದು ವ್ಯಾಖ್ಯಾನ ಮಾಡಿದ್ದ ಬಿಜೆಪಿ ಸ್ನೇಹಿತರಿಗೆ ಉಪ ಚುನಾವಣೆ ಫ‌ಲಿತಾಂಶ ಸೂಕ್ತ ಉತ್ತರ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ನಡೆದಿರುವ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಕ್ಕೂ ನಷ್ಟವಾಗಿದೆ. ದೇಶದ ಹಲವೆಡೆ ಕಾಂಗ್ರೆಸ್‌ ಗೆ ಜನ ಆಶೀರ್ವಾದ ಮಾಡಿದ್ದು, ಬಿಜೆಪಿ ಕೆಲವೆಡೆ ಸ್ಥಾನ ಉಳಿಸಿಕೊಂಡಿದ್ದರೂ ಮುಖಭಂಗ ಅನುಭವಿಸಿದೆ ಎಂದು ತಿಳಿಸಿದರು.

ಸಿಂದಗಿಯಲ್ಲಿ ನಾವು 3ನೇ ಸ್ಥಾನದಲ್ಲಿದ್ದೆವು. ಈಗ 30 ಸಾವಿರ ಅಂತರದಲ್ಲಿ ಸೋತರೂ ಮತಗಳ ಏರಿಕೆಯಿಂದ ನಾವು ಬೆಳವಣಿಗೆ ಕಂಡಿದ್ದೇವೆ. ಜೆಡಿಎಸ್‌ ಕ್ಷೇತ್ರ ವಶಪಡಿಸಿಕೊಳ್ಳಲು ಪ್ರಯತ್ನಿಸಿದ್ದೆವು, ವಿಫಲವಾಗಿದ್ದೇವೆ. ಬಿಜೆಪಿ ಅದನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿಯ ಹಿರಿಯ ನಾಯಕರು, ಸಂಸತ್‌ ಸದಸ್ಯರಿದ್ದು, ಮುಖ್ಯಮಂತ್ರಿಗಳ ಪಕ್ಕದ ಕ್ಷೇತ್ರ. ಮುಖ್ಯಂಮತ್ರಿ ಈ ಕ್ಷೇತ್ರದ ಅಳಿಯಂದಿರು. ಇಡೀ ಸರ್ಕಾರ ಎರಡೂ ಕ್ಷೇತ್ರಗಳಲ್ಲಿ ಕೂತಿತ್ತು. ಚುನಾವಣೆ ಸಂದರ್ಭದಲ್ಲಿ ಯಾವೆಲ್ಲ ಪ್ರಯೋಗ ಮಾಡಬಹುದೋ ಎಲ್ಲವನ್ನು ಮಾಡಿದ್ದರು. ಆದರೂ ಆ ಕ್ಷೇತ್ರದ ಮತದಾರರು ದಿಟ್ಟ ತೀರ್ಮಾನ ತೆಗೆದುಕೊಂಡರು ಎಂದು ತಿಳಿಸಿದರು.

ಇದನ್ನೂ ಓದಿ:ಉಡುಪಿ ಜಿಲ್ಲಾದ್ಯಂತ ಭಾರೀ ಗುಡುಗು, ಸಿಡಿಲು ಸಹಿತ ಮಳೆ :ವಿವಿಧೆಡೆಯಲ್ಲಿ ವಿದ್ಯುತ್‌ ವ್ಯತ್ಯಯ

ಮತದಾರರು ಅನುಭವಿಸಿದ ನೋವು, ಸಮಸ್ಯೆಯಿಂದ ಸರ್ಕಾರ ಎಷ್ಟೇ ಒತ್ತಡ, ಆಮೀಷ ಒಡ್ಡಿದ್ದರೂ ಕ್ಷೇತ್ರದ ಮತದಾರರು ಕಾಂಗ್ರೆಸ್‌ ಕೈ ಹಿಡಿದು ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದಾರೆ. ಕ್ಷೇತ್ರದ ಮತದಾರರು, ಕಾರ್ಯಕರ್ತರು, ಜಿಲ್ಲಾ ಮಟ್ಟದ ನಾಯಕರು, ಅಲ್ಲಿ ಕಾರ್ಯಕರ್ತರಂತೆ ಕೆಲಸ ಮಾಡಿದರಾಜ್ಯ ನಾಯಕರಿಗೆ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಇದು ನನ್ನ ಗೆಲುವಲ್ಲ. ಮತದಾರರು ಹಾಗೂ ಕಾರ್ಯಕರ್ತರ ಗೆಲುವು. ಬಿಜೆಪಿ ಆಡಳಿತ ವಿರುದ್ಧ ಕೊಟ್ಟ ತೀರ್ಪು. ಯಾರು ಜನರ ಮಧ್ಯೆ ಇರುತ್ತಾರೋ, ಸ್ಪಂದಿಸುತ್ತಾರೋ, ಕಷ್ಟಕಾಲದಲ್ಲಿ ಭಾಗಿಯಾಗುವವರಿಗೆ ಮತದಾರ ಆಶೀರ್ವಾದ ನೀಡುತ್ತಾನೆ ಎಂದರು.

ಹಾನಗಲ್‌ ನಲ್ಲಿ ನಾಮಪತ್ರ ಸಲ್ಲಿಸುವಾಗ ಅಲ್ಲಿನ ಗ್ರಾಮದೇವತೆ ದೇವಾಲಯ ಹಾಗೂ ದರ್ಗಾಕ್ಕೆ ಹೋಗಿದ್ದೆ. ಆಗ ನನಗೆ ಸಮಾಧಾನ ಆಗಿರಲಿಲ್ಲ. ನಂತರ ಆ ದೇವಾಲಯಕ್ಕೆ ಹೋಗಿ ಹರಕೆ ಮಾಡಿಕೊಂಡು ನನ್ನ ಪ್ರಚಾರ ಆರಂಭಿಸಿದ್ದೆ. ಈಗ ನನ್ನ ಹರಕೆಯಂತೆ ಇದೇ 5ರಂದು ಅಲ್ಲಿಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಸಿಂದಗಿ ಚುನಾವಣೆಯಲ್ಲಿ ಹಲವು ನಾಯಕರು ಒಟ್ಟಾಗಿ ಕೆಲಸ ಮಾಡಿದ್ದು, ಅಲ್ಲಿ ಕೆಲವು ಲೆಕ್ಕಾಚಾರ ಬದಲಾಗಿದ್ದರೂ ಸಮಾಧಾನ ತಂದಿದೆ. ಅಲ್ಲಿನ ಕಾರ್ಯಕರ್ತರು ನಾಯಕರನ್ನು ಕೈ ಬಿಡುವುದಿಲ್ಲ. ನಮ್ಮ ತಪ್ಪು ತಿದ್ದುಕೊಂಡು 2023ರ ಚುನಾವಣೆಗೆ ಸಿದ್ಧರಾಗಲು ಮಾರ್ಗದರ್ಶನ ನೀಡುತ್ತೇವೆ ಎಂದು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಮಾಧ್ಯಮ ವಿಭಾಗದ ಅಧ್ಯಕ್ಷ ಬಿ.ಎಲ್‌. ಶಂಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.