ಕಲಬುರಗಿ: ಬಸ್ ನಿಲ್ದಾಣದಲ್ಲಿ ಜನರೆದುರೇ ಪೊಲೀಸ್ ಪೇದೆ ಮಗನ ಕೊಚ್ಚಿ ಕೊಲೆ
Team Udayavani, Nov 4, 2021, 9:20 AM IST
ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಪೇದೆಯೊಬ್ಬರ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ವಿದ್ಯಾನಗರ ನಿವಾಸಿ, 27 ವರ್ಷದ ಅಭಿಷೇಕ್ ಎಂಬಾತನೇ ಕೊಲೆಯಾದ ಯುವಕ. ಈತನ ತಂದೆ ಚಂದ್ರಕಾಂತ ಪೊಲೀಸ್ ಪೇದೆಯಾಗಿದ್ದಾರೆ.
ಅಭಿಷೇಕ್ ಎಂದಿನಂತೆ ಗುರುವಾರ ಕೂಡ ಜಿಮ್ ಗೆ ಹೋಗುವುದಾಗಿ ಮನೆಯಿಂದ ಬೈಕ್ ತೆಗೆದುಕೊಂಡು ಬಂದಿದ್ದಾನೆ. ಈ ವೇಳೆ ಏಳೆಂಟು ಜನರ ದುಷ್ಕರ್ಮಿಗಳ ತಂಡ ಆತನನ್ನು ಬೆನ್ನಟ್ಟಿದ್ದಾರೆ. ಮುಖ್ಯರಸ್ತೆಯಿಂದಲೇ ದುಷ್ಕರ್ಮಿಗಳು ಬೆನ್ನಟ್ಟಿದ್ದರಿಂದ ಬಸ್ ನಿಲ್ದಾಣದೊಳಗೆ ಅಭಿಷೇಕ್ ಓಡಿ ಬಂದಿದ್ದಾನೆ.
ಇದನ್ನೂ ಓದಿ:ಶ್ರೀನಗರ-ಶಾರ್ಜಾ ವಿಮಾನ ಹಾರಾಟಕ್ಕೆ ತಗಾದೆ ತೆಗೆದ ಪಾಕ್
ಆದರೂ ಸಹ ಬಿಡದೆ ದುಷ್ಕರ್ಮಿಗಳು ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕ ಎದುರೇ ಮರಕಾಸ್ತ್ರಗಳಿಂದ ಅಭಿಷೇಕ್ ಮೇಲೆ ದಾಳಿ ಮಾಡಿದ್ದಾರೆ. ಮನಸೋ ಇಚ್ಛೆ ಕೊಚ್ಚಿ, ಹತ್ಯೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಈ ಭೀಕರ ದೃಶ್ಯ ಕಂಡ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.
ಸ್ಥಳಕ್ಕೆ ನಗರ ಉಪ ಪೊಲೀಸ್ ಆಯುಕ್ತ ಎ.ಶ್ರೀನಿವಾಸಲು, ಇನ್ ಸ್ಪೆಕ್ಟರ್ ಪಂಡಿತ ಸಗರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.