ಬಂಟ್ವಾಳ: ಅತ್ಯಾಚಾರ ಎಸಗಿ, ಜೀವ ಬೆದರಿಕೆ; ಆರೋಪಿಗಳ ಬಂಧನ
Team Udayavani, Nov 6, 2021, 6:42 PM IST
ಬಂಟ್ವಾಳ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ಶೋಷಣೆ, ಅತ್ಯಾಚಾರ ನಡೆಸಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನವೆಂಬರ್ 4 ರಂದು ಬಂಟ್ವಾಳ ತಾಲೂಕಿನ ಮಹಿಳೆಯೋರ್ವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದು ಅಪ್ರಾಪ್ತ ವಯಸ್ಕ ಬಾಲಕಿಯಾದ ತನ್ನ ಮಗಳಿಗೆ ಫರಂಗಿಪೇಟೆಯ ರಿಕ್ಷಾ ಚಾಲಕನು ಮೈ ಕೈ ಮುಟ್ಟಿ ಲೈಂಗಿಕ ಶೋಷಣೆ ಮಾಡಿದ್ದಾನೆಂದು ದೂರು ದಾಖಲಿಸಿದ್ದರು.
ಪೋಕ್ಸೋ ಆಕ್ಟ್ ರಂತೆ ಪ್ರಕರಣ ದಾಖಲಿಸಿ ಆರೋಪಿ ರಿಕ್ಷಾ ಚಾಲಕ ರಿಜ್ವಾನ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.
ಇದಾದ ಬಳಿಕ ಕಿರುಕುಳಕ್ಕೊಳಗಾದ ಅದೇ ಸಂತ್ರಸ್ತೆ ನವೆಂಬರ್ 5 ರಂದು ತನ್ನ ತಾಯಿಯೊಂದಿಗೆ ಹಾಜರಾಗಿ ಸುಮಾರು 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ತನ್ನನ್ನು ತಾವಿದ್ದಲ್ಲಿಗೆ ಕರೆಸಿಕೊಂಡು ತನ್ನ ಮೇಲೆ ಒಬ್ಬರಾದ ಮೇಲೇ ಒಬ್ಬರು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ನೀಡಿದ್ದಾರೆ.
ಪೊಲೀಸರು ಕೇಸ್ ದಾಖಲಿಸಿ, ಆರೋಪಿಗಳಾದ ಅರ್ಕುಳದ ಮಹಮ್ಮದ್ ಖಾಸೀಂ, ಮತ್ತು ಅಜ್ಮಲ್ ಹುಸೈನ್ ಎಂಬವರುಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.