ಜಗಜೀವನರಾಂಗೆ ಅಪಮಾನ: ಪ್ರತಿಭಟನೆ
Team Udayavani, Nov 7, 2021, 10:02 AM IST
ಕಲಬುರಗಿ: ನಗರದ ಟೌನ್ ಹಾಲ್ ಮುಂಭಾಗದ ಮುಖ್ಯ ರಸ್ತೆ ಪಕ್ಕದಲ್ಲಿ ಸ್ಥಾಪಿಸಲಾಗಿದ್ದ ನಾಮಫಲಕದಲ್ಲಿನ ಡಾ| ಬಾಬು ಜಗಜೀವನರಾಂ ಭಾವಚಿತ್ರ ಹರಿದು ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಡಾ| ಬಾಬು ಜಗಜೀವನರಾಂ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಟೌನ್‌ಹಾಲ್ ಆವರಣದಲ್ಲಿರುವ ಡಾ| ಬಾಬು ಜಗಜೀವನರಾಂ ಪುತ್ಥಳಿ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದುಹಾಕಿ ಅವಮಾನಗೊಳಿಸಿದ್ದಾರೆ. ತಕ್ಷಣವೇ ಕಿಡಿಗೇಡಿಗಳನ್ನು ಪತ್ತೆ ಮಾಡಬೇಕೆಂದು ಮುಖಂಡರು ಮತ್ತು ಕಾರ್ಯಕರ್ತರು ಕೆಲ ಕಾಲ ರಸ್ತೆ ತಡೆ ನಡೆಸಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾಧ್ಯಕ್ಷ ರಾಜು ಕಟ್ಟಿಮನಿ, ಮುಖಂಡರಾದ ರಾಹುಲ್ ಮೇತ್ರೆ, ಸಚಿನ್ ಕಟ್ಟಿಮನಿ, ಪ್ರದೀಪ ಭವೆ, ದಶರಥ ಕಲಗುರ್ತಿ, ವಿಠ್ಠಲ ವಾಲೀಕಾರ, ಮಲ್ಲಿಕಾರ್ಜುನ ಸರಡಗಿ, ಪ್ರಕಾಶ ಮಾಳಗೆ, ಹನಮಂತ ರತ್ನಡಗಿ, ಬಂಡೇಶ ರತ್ನಡಗಿ, ಮರಲಿಂಗ ಅಣಗಿ, ಅಶ್ವತ್ಥ್ ತಾರಫೈಲ್, ಸುರೇಶ ಇಟಗಿ, ಸಚಿನ್ ತಾರಫೈಲ್, ಹರೀಶ್ಚಂದ್ರ ದೊಡ್ಡಮನಿ, ಲೋಹಿತ ರಾಜಾಪುರ, ಪ್ರಶಾಂತ ಬಾಪು ಹಾಗೂ ಇನ್ನಿತರ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.