ನಾನು ಎಲ್ಲಿರಬೇಕೆಂದು ಜನರು ತೀರ್ಮಾನ ಮಾಡುತ್ತಾರೆ: ಜಿ.ಟಿ.ದೇವೇಗೌಡ
Team Udayavani, Nov 7, 2021, 2:36 PM IST
ಮೈಸೂರು: ನಾನು ಜೆಡಿಎಸ್ ನಲ್ಲಿ ಇರಬೇಕೆ- ಬೇಡವೇ ಎನ್ನುವುದನ್ನು ಜನರು ತೀರ್ಮಾನ ಮಾಡುತ್ತಾರೆ. ಕ್ಷೇತ್ರದ ಮತದಾರರು ಹೇಳಿದ ಮಾತನ್ನು ಕೇಳುತ್ತೇನೆ. ಕುಮಾರಸ್ವಾಮಿ ಅವರ ಯಾವುದೇ ಅಭಿಪ್ರಾಯವಿದ್ದರು ನನ್ನ ನಿರ್ಧಾರ ಬದಲಾಗುವುದಿಲ್ಲ. ನಾನು ಎಲ್ಲಿರಬೇಕೆಂದು ಜನರು ತೀರ್ಮಾನ ಮಾಡುತ್ತಾರೆ ಎಂದು ಶಾಸಕ ಜಿ.ಟಿ.ದೇವೇಗೌಡಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಾಗ ನನಗೆ ಆಹ್ವಾನ ಇರಲಿಲ್ಲ. ಬೆಳವಾಡಿ ದೇವಾಲಯಕ್ಕೆ ಹಣವನ್ನು ನೀಡಿದ್ದೆ. ಆದರೂ ಆಹ್ವಾನ ಮಾಡಲಿಲ್ಲ. ಅದೇ ರೀತಿ ರಮ್ಮನಹಳ್ಳಿಗೂ ಆಹ್ವಾನ ಮಾಡಲಿಲ್ಲ. ಇದೀಗ ಕ್ಷೇತ್ರದಲ್ಲಿ ಕೆಲವು ಕಾಮಗಾರಿ ಉದ್ಘಾಟನೆ ನಡೆಯುತ್ತಿದೆ. ಅದಕ್ಕೆ ಸಿದ್ದರಾಮಯ್ಯ ಬರುತ್ತಿದ್ದಾರೆ. ಸ್ಥಳಿಯ ಶಾಸಕನಾಗಿ ನಾನು ಭಾಗಿಯಾಗುತ್ತಿದ್ದೇನೆ. ಕ್ಷೇತ್ರದ ಜನರು ಕರೆದಾಗ ನಾನು ಹೋಗಲೇ ಬೇಕು ಎಂದರು.
ಇದನ್ನೂ ಓದಿ:ನಾನು ಹೆಸರಿಗಷ್ಟೇ ಸ್ಪೀಕರ್, ಆದರೆ ಮಾತನಾಡುವವರು ಬೇರೆ! ಕಾಗೇರಿ
ಈ ಹಿಂದೆ ಕೂಡ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಬೊಮ್ಮಾಯಿ ಅವರು ಬಂದಾಗಲು ಅವರ ಜೊತೆ ವೇದಿಕೆ ಹಂಚಿಕೊಂಡಿದ್ದೆ. ಆದರೆ ನಾನು ಪಕ್ಷ ಸೇರುವುದು ಬಿಡುವುದು ಎಲ್ಲವೂ ಜನರಿಗೆ ಬಿಟ್ಟಿದ್ದು. ನಾನು ಈ ಬಗ್ಗೆ ಕ್ಷೇತ್ರದ ಜನರ ಬಳಿ ಅಭಿಪ್ರಾಯ ಕೇಳಿಲ್ಲ. ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದೆ. ಎಲ್ಲವೂ ಮತದಾರ ತೀರ್ಮಾನದಂತೆ ನಡೆಯುತ್ತದೆ ಎಂದು ಜಿಟಿಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!
MUST WATCH
ಹೊಸ ಸೇರ್ಪಡೆ
WI vs ENG: ಕಿಂಗ್, ಕಾರ್ಟಿ ಶತಕ ವಿಂಡೀಸ್‌ಗೆ ಏಕದಿನ ಸರಣಿ
WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ
Udupi: ಮುನಿಯಾಲ್ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್
ಜೀವನ ಪರ್ಯಂತ ವೀಲ್ ಚೇರ್‌ನಲ್ಲೇ ಇರುವ ಪುತ್ರನಿಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ ಖ್ಯಾತ ನಟ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.