ವೃತ್ತಿಯಾಚೆಗಿನ ಚಟುವಟಿಕೆಗಳು ಮುಖ್ಯ: ನಿಖೀಲ್
Team Udayavani, Nov 7, 2021, 5:03 PM IST
ರಾಯಚೂರು: ಜೀವನದಲ್ಲಿ ಕೇವಲ ವೃತ್ತಿಯನ್ನೆ ನೆಚ್ಚಿಕೊಂಡಿರದೆ ಅದರಾಚೆಗಿನ ಚಟುವಟಿಗೆಗಳನ್ನು ನಡೆಸುವುದು ಬಹಳ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖೀಲ್ ಬಿ. ಹೇಳಿದರು.
ನಗರದ ಕೃಷಿ ವಿಜ್ಞಾನಗಳ ವಿವಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ 2021ರ ಅಂಗವಾಗಿ ರಾಯಚೂರು ರಿಪೋರ್ಟ್‌ರ್ಸ್ ಗಿಲ್ಡ್ ಮಾಧ್ಯಮದವರಿಗಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಎಲ್ಲಾ ಕಾರ್ಯಕ್ರಮಗಳಲ್ಲಿ ನಮಗೆ ಎದುರಿಗೆ ಕುಳಿತಿರು ವರದಿ ಮಾಡುವ ಪತ್ರಕರ್ತರು ಇಂದು ತಾವೇ ಕ್ರೀಡಾ ತಂಡಗಳಾಗಿ ಎದುರು ಬದಿರು ನಿಂತಿದ್ದಾರೆ. ಕ್ರಿಕೆಟ್ ಆಡುವ ಮೂಲಕ ಕ್ರೀಡಾ ಸ್ಫೂರ್ತಿ ಮೆರೆಯುತ್ತಿದ್ದಾರೆ. ಕ್ರೀಡೆ ಮನೋರಂಜನೆ ಹಾಗೂ ಆರೋಗ್ಯಕ್ಕೆ ಅಗತ್ಯವಾಗಿದೆ ಎಂದರು.
ಮೂರು ತಂಡಗಳಾಗಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಮಾಧ್ಯಮದವರಿಗೆ ಶುಭ ಕೋರಿದರು. ಕೃಷಿ ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ| ರಾಜಣ್ಣ ಮಾತನಾಡಿ, ಆರೋಗ್ಯ ಮತ್ತು ಆಟಗಳ ಕುರಿತು ಕೆಲ ಘೋಷವಾಕ್ಯಗಳನ್ನ ತಿಳಿಸಿದರು. ನಂತರ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚನ್ನಬಸವಣ್ಣ ನೇತೃತ್ವದ ತಂಡ ಪ್ರಥಮ ಸ್ಥಾನ ಪಡೆಯಿತು. ಬಸವರಾಜ ನಾಗಡದಿನ್ನಿ ನೇತೃತ್ವದ ತಂಡ ರನ್ನರ್ ಅಪ್ ಗಳಿಸಿದರೆ, ಬಿ.ವೆಂಕಟಸಿಂಗ್ ನೇತೃತ್ವದ ತಂಡ 3ನೇ ಸ್ಥಾನ ಗಳಿಸಿತು. ಉತ್ತಮ ಆಲ್ ರೌಂಡರ್ ಆಟ ಪ್ರದರ್ಶಿಸಿದ ಶ್ರೀಕಾಂತ್ ಸಾವೂರ್ 57 ರನ್ ಬಾರಿಸಿ 3 ವಿಕೆಟ್ ಪಡೆದರೆ, ಶ್ರೀನಿವಾಸ ಕೆ. 43 ರನ್ ಬಾರಿಸಿ 4 ವಿಕೆಟ್ ಪಡೆದು ಇಬ್ಬರೂ ಮ್ಯಾನ್ ಆಫ್ ದಿ ಸೀರೀಸ್‌ಗೆ ಭಾಜನರಾದರು.
ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ, ರಾಯಚೂರು ರಿಪೋರ್ಟ್‌ರ್ಸ್ ಗಿಲ್ಡ್‌ನ ಪ್ರಧಾನ ಕಾರ್ಯದರ್ಶಿ ವಿಜಯ್ ಜಾಗಟಗಲ್ ಸೇರಿ 40ಕ್ಕೂ ಹೆಚ್ಚು ಪತ್ರಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.