ಸರಸ್ವತಿಗೆ ಕಸಾಪ ಸಾರಥ್ಯ ಕೊಡಿ: ಲಲಿತಾ ನಾಯಕ

Team Udayavani, Nov 8, 2021, 10:06 AM IST

4kasapa

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯಲ್ಲಿ ಈ ಬಾರಿ ಹಿರಿಯ ಸಾಹಿತಿ ಡಾ| ಸರಸ್ವತಿ ಚಿಮ್ಮಲಗಿ ಅವರನ್ನು ಗೆಲ್ಲಿಸುವ ಮೂಲಕ ಅವರಿಗೆ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯ ಸಾರಥ್ಯ ವಹಿಸಬೇಕೆಂದು ಮಾಜಿ ಸಚಿವೆ, ಲೇಖಕಿ ಬಿ.ಟಿ. ಲಲಿತಾ ನಾಯಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯದಲ್ಲಿ ಸಾಕಷ್ಟು ಮಹಿಳೆಯರು ಇದ್ದಾರೆ. ಪ್ರಬುದ್ಧತೆಯನ್ನು ಹೊಂದಿದ್ದಾರೆ. ಆದರೂ, ಕನ್ನಡ ಸಾಹಿತ್ಯ ಪರಿಷತ್‌ನ 106 ವರ್ಷಗಳ ಇತಿಹಾಸದಲ್ಲಿ ಒಬ್ಬ ಮಹಿಳೆಯೂ ರಾಜ್ಯಾಧ್ಯಕ್ಷ ಸ್ಥಾನಕ್ಕೇರಲು ಸಾಧ್ಯವಾಗಿಲ್ಲ. ಆದ್ದರಿಂದ ಡಾ| ಸರಸ್ವತಿ ಚಿಮ್ಮಲಗಿ ಅವರಿಗೆ ಮತದಾರರು ಅವಕಾಶ ಕೊಡಬೇಕೆಂದು ಕರೆ ನೀಡಿದರು.

ಮಹಿಳೆಯಿಂದ ಏನೂ ಮಾಡಲು ಆಗೋದಿಲ್ಲ ಎಂಬಂತ ಮೌಡ್ಯ ತೊಲಗಬೇಕು. ಮಹಿಳೆಯರಲ್ಲಿ ಸತ್ವ ಇರುತ್ತದೆ. ಅದನ್ನು ನಿರೂಪಿಸಲು ಅವಕಾಶ ಒದಗಿಸಬೇಕು. ಪುರುಷರಿಗೂ ಮೀರಿ ಸಾಧನೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಮತದಾರರು ಅವಕಾಶ ಕಲ್ಪಿಸಿದ್ದೇ ಆದಲ್ಲಿ ತಮ್ಮ ಸಾಧನೆಯನ್ನು ಸರಸ್ವತಿ ಚಿಮ್ಮಲಗಿ ಮಾಡಿ ತೋರಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೊಡ್ಡ-ದೊಡ್ಡ ಮಹಿಳಾ ಸಾಹಿತಿಗಳು ಆಗಿ ಹೋಗಿದ್ದಾರೆ. ಆದರೆ, ಯಾವರ್ಯಾರು ಕೇಂದ್ರ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವ ಧೈರ್ಯ ಮಾಡಿರಲಿಲ್ಲ. ಈಗ ಸರಸ್ವತಿ ಚಿಮ್ಮಲಗಿ ಧೈರ್ಯ ಮಾಡಿ, ಕಣಕ್ಕಿಳಿದಿದ್ದಾರೆ. ಅವರು ಸಾಹಿತ್ಯ ಮಾತ್ರವಲ್ಲದೇ ರಂಗಭೂಮಿ, ಸಮಾಜ ಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಹೊಸಬರು ಅವರಿಗೆ ಅವಕಾಶ ನೀಡುವ ಮೂಲಕ ಹೊಸ ಆಲೋಚನೆಗಳಿಗೆ ಮುನ್ನುಡಿ ಬರೆಯುವ ಕೆಲಸ ಆಗಬೇಕಿದೆ ಎಂದರು.

ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಸರಸ್ವತಿ ಚಿಮ್ಮಲಗಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ನ 106 ವರ್ಷಗಳ ಇತಿಹಾಸದಲ್ಲಿ ಪುರುಷರಿಗೆ ಅವಕಾಶ ನೀಡುತ್ತಾ ಬರಲಾಗಿದೆ. ಪ್ರಸ್ತುತ ಕಸಾಪ ಚುನಾವಣೆಯಲ್ಲಿ 21 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವರಲ್ಲಿ ಏಕೈಕ ಮಹಿಳಾ ಅಭ್ಯರ್ಥಿ ನಾನಾಗಿರುವೆ. ಈ ಬಾರಿಯ ಚುನಾವಣೆಯಲ್ಲಿ ಮತದಾರರು ನನ್ನನ್ನು ಬೆಂಬಲಿಸಿ ಮಹಿಳೆಗೆ ಅವಕಾಶ ನೀಡಿ ದಾಖಲೆ ಬರೆಯಬೇಕೆಂದು ಮನವಿ ಮಾಡಿದರು.

ನನ್ನನ್ನು ಆಯ್ಕೆ ಮಾಡಿದರೆ ಕನ್ನಡ ನಾಡು-ನುಡಿ, ಜಲ-ನೆಲ, ಗಡಿ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಕಾಳಜಿ ವಹಿಸಲು ಶ್ರಮಿಸುತ್ತೇನೆ. ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವಂತೆ ಆಗಲು ಕ್ರಮ ವಹಿಸುತ್ತೇನೆ. ಪರಿಷತ್‌ನ ಬೈಲಾದಲ್ಲಿ ಕೆಲ ತಿದ್ದುಪಡಿಗಳನ್ನು ಮಾಡಲಾವುದು ಸೇರಿ ನನ್ನದೇ ಆದ ಯೋಜನೆಗಳನ್ನು ಹಾಕಿಕೊಂಡಿರುವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಾಹಿತಿಗಳಾದ ಸಂಧ್ಯಾ ಹೊನಗುಂಟಿಕರ್‌, ಜ್ಯೋತಿ ಬದಾಮಿ, ಚಂದ್ರಕಲಾ, ವೈಷ್ಣವಿ ದೇಶಮುಖ, ಬೆಳಗಾವಿ ಚುಟುಕು ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಅಶೋಕ ಮಳಲಗಿ ಇದ್ದರು.

ಟಾಪ್ ನ್ಯೂಸ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.