ಮೃತ್ಯುಕೂಪವಾದ ಮಾವಿನಹಳ್ಳಿ ಬ್ರಿಡ್ಜ್!

Team Udayavani, Nov 8, 2021, 1:17 PM IST

15road

ಭಾಲ್ಕಿ: ತಾಲೂಕು ಕೇಂದ್ರದಿಂದ ಸುಮಾರು 15 ಕಿ.ಮೀ ಅಂತರದಲ್ಲಿರುವ ಮಾವಿನಹಳ್ಳಿ ಗ್ರಾಮದ ಹಳ್ಳದ ಮೇಲೆ ನಿರ್ಮಿಸಲಾದ ಬ್ರಿಡ್ಜ್ ಅಕ್ಷರಶಃ ಮೃತ್ಯುಕೂಪವಾಗಿ ಮಾರ್ಪಟ್ಟಿದೆ.

ಭಾಲ್ಕಿಯಿಂದ ಘೊರವಾಡಿ ಮಾರ್ಗವಾಗಿ ಹುಮನಾಬಾದಗೆ ತೆರಳುವ ಮುಖ್ಯ ರಸ್ತೆ ಇದಾಗಿದೆ. ಈ ರಸ್ತೆ ಮೇಲೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಾಹನಗಳು, ಗೂಡ್ಸ್‌ ವಾಹನಗಳು, ಬೈಕ್‌, ಕಾರುಗಳು ಸೇರಿದಂತೆ ಸಾಕಷ್ಟು ವಾಹನಗಳಿಗೆ ಈ ರಸ್ತೆಯೇ ಮುಖ್ಯವಾಗಿದೆ.

ವಾಹನಗಳು ಮೇಲಿನಿಂದ ಸಂಚರಿಸುತ್ತಲಿದ್ದರೂ, ಸುಮಾರು ಮೂರು ತಿಂಗಳಿನಿಂದ ರಸ್ತೆಯ ಮೇಲಿನ ಬ್ರಿಡ್ಜ್ ಮಾತ್ರ ದುರಸ್ತಿ ಕಾಣದಿರುವುದು ವಿಪರ್ಯಾಸದ ಸಂಗತಿ. ಈ ರಸ್ತೆಯಿಂದ ಪ್ರತಿ ರವಿವಾರ ಮತ್ತು ಗುರುವಾರ ಹುಮನಾಬಾದ ತಾಲೂಕಿನ ಘೊರವಾಡಿ ಗ್ರಾಮದಲ್ಲಿಯ ಮುಸ್ಲಿಂ ದೇವರಿಗೆ ಪೂಜೆ ಸಲ್ಲಿಸಲು ಸಾವಿರಾರು ಭಕ್ತರು ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಿಂದ ಆಗಮಿಸುತ್ತಾರೆ. ಎಚ್ಚರ ತಪ್ಪಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದು ಈ ರಸ್ತೆ ಮೂಲಕ ಓಡಾಡುವ ಎಲ್ಲರಿಗೂ ತಿಳಿದ ವಿಷಯ.

ಆದರೆ ತುಂಬ ದಿನಗಳಿಂದ ರಸ್ತೆ ಮಾತ್ರ ದುರಸ್ತಿ ಕಾಣದಾಗಿದ್ದು, ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಬ್ರಿಡ್ಜ್ ಹತ್ತಿರದ ಅರ್ಧ ರಸ್ತೆಯಲ್ಲಿಯೇ ವಾಹನಗಳು ಸಂಚರಿಸುತ್ತಿದ್ದು, ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತದೆ. ಅಪರಿಚಿತ ವಾಹನಗಳು ಈ ರಸ್ತೆ ಮೇಲಿನಿಂದ ಓಡಾಡಿದರೆ ಹಳ್ಳಕ್ಕೆ ಬೀಳುವುದದಂತು ಗ್ಯಾರೆಂಟಿ ಎನ್ನುವಂತಾಗಿದೆ.

ಇದನ್ನೂ ಓದಿ: ಕುಂಜೂರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

ಕಳೆದ ತಿಂಗಳಲ್ಲಿ ಶಾಸಕ ಈಶ್ವರ ಖಂಡ್ರೆ ಈ ರಸ್ತೆ ಮಾರ್ಗವಾಗಿ ಓಡಾಡುವಾಗ ಅವಸ್ಥೆ ಕಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ, ಸಂಬಂಧ ಪಟ್ಟವರು ರಸ್ತೆ ಮೇಲೆ ಮಣ್ಣು ಸುರಿದು ತೇಪೆ ಹಾಕಿದರು. ಆದರೆ ಕೆಲವೇ ದಿನಗಳಲ್ಲಿ ಆ ಮಣ್ಣೆಲ್ಲ ಕೊಚ್ಚಿ ಹೋಗಿ ಮತ್ತೆ ಅದೇ ಅವಸ್ಥೆ ಈ ರಸ್ತೆಗಾಗಿದೆ ಎನ್ನುತ್ತಾರೆ ಸ್ಥಳೀಯರು.

ರ‌ಸ್ತೆ ದುರಸ್ತಿಗಾಗಿ ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಆದರೆ ಯಾರೊಬ್ಬರು ಇತ್ತ ನೋಡುತ್ತಿಲ್ಲ. ಯಾವುದಾದರೂ ಅನಾಹುತವಾದರೆ ಮಾತ್ರ ಅಧಿಕಾರಿಗಳು ಇತ್ತ ಗಮನ ಹರಿಸುವರೇ ನೋಡಬೇಕು. ಅಲ್ಲಿಯವರೆಗೆ ಇದರ ಅವಸ್ಥೆ ಇಷ್ಟೇ. -ಸುಭಾಷ ಹುಲಸೂರೆ, ಸ್ಥಳೀಯರು

ಪ್ರತಿವರ್ಷ ಮಳೆಯಾದರೆ ಹಳ್ಳ ತುಂಬಿ ಹರಿಯುತ್ತದೆ. ರಸ್ತೆ ಸಂಪರ್ಕ ಸಂಪೂರ್ಣ ಬಂದ್‌ ಆಗುತ್ತದೆ. ಈ ಕುರಿತು ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಬ್ರಿಡ್ಜ್ ಎತ್ತರ ಹೆಚ್ಚಿಸುವುದು ಸೇರಿದಂತೆ ಇದರ ದುರಸ್ತಿಗಾಗಿ ಸಾಕಷ್ಟು ಬಾರಿ ಒತ್ತಾಯಿಸಿದ್ದರೂ ಪ್ರಯೋಜನವಾಗಿಲ್ಲ. -ಗೋವಿಂದರಾವ್‌ ಬಿರಾದಾರ ಮಾವಿನಹಳ್ಳಿ, ಜೆಡಿಎಸ್‌ ಮಾಜಿ ತಾಲೂಕು ಅಧ್ಯಕ್ಷ, ಭಾಲ್ಕಿ

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.