ವಿದ್ಯುತ್‌ ಲೈನ್‌ ನಿರ್ಮಾಣ


Team Udayavani, Nov 8, 2021, 1:29 PM IST

ವಿದ್ಯುತ್‌ ಲೈನ್‌ ನಿರ್ಮಾಣ

ದೊಡ್ಡಬಳ್ಳಾಪುರ: ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಕ್ಕೆ ಹಾಗೂ ತೊಂಡೆಬಾವಿಯಿಂದ ದೊಡ್ಡಬಳ್ಳಾಪುರಕ್ಕೆ ಸಂಪರ್ಕಿಸಲು ಬೃಹತ್‌ ಪ್ರಮಾಣದ ವಿದ್ಯುತ್‌ ಕಾರಿಡಾರ್‌ ನಿರ್ಮಿಸಲಾಗುತ್ತಿದೆ. ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ನೀಡದಿರುವುದನ್ನು ಖಂಡಿಸಿ ಹಾಗೂ ರೈತರ ಭೂಮಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ, ತಾಲೂಕು ಆಡಳಿತದ ಗಮನ ಸೆಳೆಯಲು ನ.10ರಂದು ತಾಲೂಕು ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಜಿಂಕೆಬಚ್ಚಹಳ್ಳಿ ಸತೀಶ್‌ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕಿನ ತಳಗವಾರ, ಕೋಳೂರು, ಕಂಟನಕುಂಟೆ, ಅರಳುಮಲ್ಲಿಗೆ, ಅಣಗಲಪುರ ಸೇರಿ 20 ಗ್ರಾಮಗಳ ಮೂಲಕ ಹಾದು ಹೋಗಿದ್ದ ಅಲ್ಪ ಪ್ರಮಾಣದ ವಿದ್ಯುತ್‌ ಲೈನ್‌ಗೆ ಬದಲಾಗಿ ಬೃಹತ್‌ ಕಂಬಗಳು, ಬಹು ಮಾರ್ಗದ ಲೈನ್‌ ಅಳವಡಿಸಲು ವಿದ್ಯುತ್‌ ಇಲಾಖೆ ಮುಂದಾಗಿದೆ ಎಂದು ದೂರಿದರು.

ಕೃಷಿ ಮಾಡಲು ಕಷ್ಟ: ಹಲವಾರು ಕಾರಣಗಳಿಂದಾಗಿ ರೈತರಿಗೆ ಈಗ ಉಳಿದಿರುವುದೇ ತುಂಡು ಭೂಮಿ. ಅಲ್ಪಸ್ವಲ್ಪ ಕೃಷಿ ಭೂಮಿಯಲ್ಲಿ ಬೃಹತ್‌ ಗಾತ್ರದ ವಿದ್ಯುತ್‌ ಕಂಬಗಳನ್ನು ಅಳವಡಿಸಿದರೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಈ ಕಾಮಗಾರಿ ಕೆಪಿಟಿಸಿಎಲ್‌ ಮಾಡುತ್ತಿದೆಯೋ, ಗ್ರೀಡ್‌ ಮಾಡುತ್ತಿದೆಯೋ ಮಾಹಿತಿಯೇ ಇಲ್ಲವಾಗಿದೆ. ರೈತರಿಗೆ ಯಾವುದೇ ಮಾಹಿತಿ ನೀಡದೆ ಕಂಬಗಳನ್ನು ಅಳವಡಿಸಲು ಗುಂಡಿಗಳನ್ನು ತೋಡಲು ಮುಂದಾಗಿರುವುದು ಖಂಡನಿಯ ಎಂದು ದೂರಿದರು.

ಜಿಲ್ಲಾಡಳಿತವೇ ಹೊಣೆ: ಭೂಮಿ ಕಳೆದುಕೊಳ್ಳುವ ರೈತರಿಗೆ ನಿಯಮದ ಪ್ರಕಾರ ಸೂಕ್ತ ಪರಿಹಾರ ನೀಡದೆ ಹಾಗೂ ರೈತರ ಅನುಮತಿ ಇಲ್ಲದೆ ಜಮೀನಿಗೆ ಪ್ರವೇಶಿಸಿ ಗುರುತು ಮಾಡುತ್ತಿರುವುದು ಖಂಡನೀಯ. ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ ಸರ್ವೆ ನಡೆಸಿ ಪರಿಹಾರ ನಿಗದಿ ಮಾಡಬೇಕಿದೆ, ಇದನ್ನು ಹೊರತು ಪಡಿಸಿ ಬಲವಂತದಿಂದ ಕಾಮಗಾರಿ ನಡೆಸಲು ಮುಂದಾದರೆ ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಮಾಹಿತಿ ನೀಡದೇ ಗುರುತು: ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಬಚ್ಚಹಳ್ಳಿ ಸತೀಶ್‌ ಮಾತನಾಡಿ, ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶ ಮತ್ತು ತೊಂಡೆಬಾವಿಯಿಂದ ದೊಡ್ಡಬಳ್ಳಾಪುರಕ್ಕೆ 220 ರಿಂದ 400 ಕೆ.ವಿ. ವಿದ್ಯುತ್‌ ಕಾರಿಡಾರ್‌ ಮಾರ್ಗಗಳನ್ನು ಮಾಡಲಾಗುತ್ತಿದೆ. ಇದರ ಕುರಿತು ರೈತರಿಗೆ ಮಾಹಿತಿಯೇ ನೀಡದೆ, ಜಮೀನುಗಳಿಗೆ ಅತಿಕ್ರಮ ಪ್ರವೇಶಮಾಡಿ ಗುರುತು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಮುಂಚೆ ಅಳವಡಿಸಿದ ಕಂಬಗಳಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿಲ್ಲ. ನಿಯಮಗಳ ಅನ್ವಯ ಪರಿಹಾರ ನೀಡದೆ ಕಂಬಗಳ ಅಳವಡಿಕೆಗೆ ಮುಂದಾಗಿರುವುದು ಸರಿಯಲ್ಲ, ಕಂಬಗಳನ್ನು ಹಾಕುವ ಜಾಗದಲ್ಲಿ ತೆಂಗು, ಅಡಕೆ ಮೊದಲಾದ ಬೆಳೆ ಬೆಳೆಯಲು ಆಗುವುದಿಲ್ಲ. ಕೊಳವೆಬಾವಿ ಸಹ ಕೊರೆಸಲು ಆಗುವುದಿಲ್ಲ. ಇದಲ್ಲದೇ, ವಿದ್ಯುತ್‌ ಶಾಖ್‌ಗಳು ಆಗುವ ಸಂಭವಗಳು ಇವೆ. ಇವೆಲ್ಲವೂ ಸರ್ಕಾರದ ಗಮನಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ, ತಹಶೀಲ್ದಾರ್‌ ಗಮನ ಸೆಳೆಯಲು ರೈತರೊಂದಿಗೆ ತಾಲೂಕು ಕಚೇರಿ ಮುತ್ತಿಗೆ ಹಾಕಲಾಗುತ್ತಿದೆ ಎಂದರು.

ಈ ವೇಳೆ ರೈತರಾದ ವಿಶ್ವೇಶ್ವರಯ್ಯ, ಮೋಹನ್‌ ಮೂರ್ತಿ, ಗೀತಾ ವಸಂತ್‌ಗೌಡ, ಮುನಿಯಪ್ಪ, ಕೆಂಪರಾಜು, ಅಶ್ವತ್ಥಪ್ಪ, ಮುನಿಯಪ್ಪ, ಕೆಂಪರಾಜ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.