ಭತ್ತ ಖರೀದಿ ಕೇಂದ್ರಕ್ಕಾಗಿ ಸಿಎಂ ಜತೆ ಚರ್ಚೆ: ನಾಡಗೌಡ
Team Udayavani, Nov 8, 2021, 4:17 PM IST
ಸಿಂಧನೂರು: ರೈತರ ಬೇಡಿಕೆ ಹಿನ್ನೆಲೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯುವ ಕುರಿತಂತೆ ಸದನದಲ್ಲಿ ಚರ್ಚೆ ಮಾಡಿರುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಈ ಬಗ್ಗೆ ಚರ್ಚೆ ನಡೆಸಲು ಸಿದ್ಧನಾಗಿರುವೆ ಎಂದು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು.
ನಗರದ ಜೆಡಿಎಸ್ ಯುವ ಘಟಕದ ಕಾರ್ಯಾಲಯದಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ದೀಪಾವಳಿ ಹಬ್ಬದ ನಂತರ ಭತ್ತ ಖರೀದಿ ಕೇಂದ್ರ ಬಹುತೇಕ ಆರಂಭವಾಗಲಿದೆ. ಈ ಬಗ್ಗೆ ಆದೇಶ ಹೊರಬೀಳಲಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದು, ಬೇಡಿಕೆ ಈಡೇರುತ್ತದೆ. ಆಂಧ್ರಪ್ರದೇಶ ಮಾದರಿಯಲ್ಲಿ ಭತ್ತ ಖರೀದಿ ಮಾಡಬೇಕು. ಮಿಲ್ ಮಾಲೀಕರ ಜೊತೆಗೆ ಸರಕಾರ ಕೂಡಲೇ ಚರ್ಚಿಸಿ ಖರೀದಿಗೆ ಮುಂದಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು.
ಐಸಿಸಿ ಸಭೆಗೂ ಆಗ್ರಹ
ಮುಂಗಾರು ಹಂಗಾಮಿನ ಭತ್ತ ಕಟಾವಿಗೆ ಬಂದಿರುವ ಹಿನ್ನೆಲೆಯಲ್ಲಿ 2ನೇ ಬೆಳೆಗೆ ನೀರು ಬಿಡುವುದಕ್ಕೆ ಸಂಬಂಧಿ ಸಿ ಐಸಿಸಿ ಸಭೆ ಕರೆಯಲು ಒತ್ತಾಯಿಸುತ್ತೇನೆ. ಈ ಬಗ್ಗೆ ಸೋಮವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಲು ತೀರ್ಮಾನಿಸಿರುವೆ. 2ನೇ ಬೆಳೆಗೆ ನೀರು ಬಿಡುವುದಿಲ್ಲ ಎಂಬ ಬಗ್ಗೆ ಗೊಂದಲಗಳು ರೈತರಲ್ಲಿ ಸೃಷ್ಟಿಯಾಗಿದ್ದು, ಅದನ್ನು ನಿವಾರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಮಹೆಬೂಬನಗರ-ಗಿಣಿಗೇರಾ ರೈಲ್ವೆ ಲೈನ್‌ಗೂ ಕಾಲುವೆ ನೀರಿಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ರೈತರು ಅನಗತ್ಯ ಗೊಂದಲಕ್ಕೆ ಸಿಲುಕಬಾರದು ಎಂದರು.
ಸಾಮೂಹಿಕ ಮದುವೆ
ನನ್ನ ಸುಪುತ್ರ ಅಭಿಷೇಕ ನಾಡಗೌಡರ ಮದುವೆ ಹಿನ್ನೆಲೆಯಲ್ಲಿ ಡಿ.26ರಂದು ಜವಳಗೇರಾದಲ್ಲಿ ಸಾಮೂಹಿಕ ಮದುವೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. 100 ಸಾಮೂಹಿಕ ಮದುವೆ ಮಾಡಿಸುವ ಉದ್ದೇಶವಿದ್ದು, ಅರ್ಹರು ಹೆಸರನ್ನು ನೋಂದಾಯಿಸಬಹುದು ಎಂದರು.
ಜೆಡಿಎಸ್ ಸೇರ್ಪಡೆ
ಇದೇ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಸೋಮಲಾಪುರ ಗ್ರಾಪಂ ಅಧ್ಯಕ್ಷ ಸೀತರಾಮರೆಡ್ಡಿ ಹಾಗೂ ಮಾಜಿ ಅಧ್ಯಕ್ಷ ಶ್ರೀನಿವಾಸ ಶಾಸಕ ವೆಂಕಟರಾವ ನಾಡಗೌಡರ ಸಮ್ಮುಖದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ಹರ್ಷ, ಧರ್ಮನಗೌಡ ಮಲ್ಕಾಪುರ, ನಾಗೇಶ ಹಂಚಿನಾಳಕ್ಯಾಂಪ್, ಜಿ.ಸತ್ಯನಾರಾಯಣ, ಡಿ.ಸತ್ಯನಾರಾಯಣ, ಕೃಷ್ಣಮೂರ್ತಿ, ವೀರರಾಜು, ನದೀಮ್ ಮುಲ್ಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.