12ರ ವರೆಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Team Udayavani, Nov 8, 2021, 10:45 PM IST
ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನ.12ರ ವರೆಗೂ ಮಳೆಯಾಗುವ ಸಾಧ್ಯತೆಗಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಸಮುದ್ರಕ್ಕಿಂತ 5.8 ಕಿಮೀ ಎತ್ತರದಲ್ಲಿ ಮೇಲ್ಮೆ„ ಸುಳಿಗಾಳಿ ಬೀಸುತ್ತಿದೆ. ಮುಂದಿನ 54 ಗಂಟೆಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಡಬಹುದು. ಇದು ನ.11ರಂದು ಬೆಳಗ್ಗೆ ತಮಿಳುನಾಡು ಉತ್ತರ ಕರಾವಳಿ ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕಿ ಗೀತಾ ಅಗ್ನಿಹೋತ್ರಿ ತಿಳಿಸಿದ್ದಾರೆ.
ರಾಜ್ಯದ ಬಳ್ಳಾರಿ ಮತ್ತು ದಾವಣಗೆರೆ ಹೊರತುಪಡಿಸಿ ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.
ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಆದರೆ, ಕರಾವಳಿ ಪ್ರದೇಶವಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಸದ್ಯ ಪೂರ್ವ ಮಧ್ಯ ಅರಬ್ಬೀ ಸಮುದ್ರದಲ್ಲಿನ ಪ್ರಬಲ ವಾಯುಭಾರ ಕುಸಿತ ಪಶ್ಚಿಮ ದಿಕ್ಕಿಗೆ ಸಾಗಿದೆ. ಮುಂಬೈನಿಂದ 840 ಕಿಮೀ ದೂರದಲ್ಲಿದೆ. ಇದೇ ವೇಗದಲ್ಲಿ ಪಶ್ಚಿಮದತ್ತ ಚಲಿಸಿ ಭಾರತದ ಕರಾವಳಿಯಿಂದ ದೂರ ಸರಿಯುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.