ಅಂಗನವಾಡಿ, ಎಲ್‌ಕೆಜಿ, ಯುಕೆಜಿ ಆರಂಭ

Team Udayavani, Nov 9, 2021, 5:45 AM IST

ಅಂಗನವಾಡಿ, ಎಲ್‌ಕೆಜಿ, ಯುಕೆಜಿ ಆರಂಭ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಎಲ್‌ಕೆಜಿ ಹಾಗೂ ಯುಕೆಜಿ ಸೇರಿದಂತೆ ಪೂರ್ವ ಪ್ರಾಥಮಿಕ ತರಗತಿಗಳು ಸೋಮವಾರದಿಂದ ಆರಂಭವಾಗಿವೆ.

ಒಂದೂವರೆ ವರ್ಷದಿಂದ ಮನೆಯಲ್ಲಿದ್ದ ಚಿಣ್ಣರು ನಗುಮುಖದಿಂದಲೇ ತರಗತಿಗೆ ಹಾಜರಾಗಿದ್ದು, ಮೂರೂ ಕೇಂದ್ರದಲ್ಲಿ ಮೊದಲ ದಿನ ಶೇ. 60ರಷ್ಟು ಹಾಜರಾತಿ ದಾಖಲಾಗಿದೆ. ದ.ಕ. ಜಿಲ್ಲೆಯ 2,108 ಅಂಗನವಾಡಿಗಳ ಪೈಕಿ ಬೆರಳೆಣಿಕೆಯ ಕೆಲವು ಅಂಗನವಾಡಿ ಹೊರತುಪಡಿಸಿ ಬಹುತೇಕ ಕೇಂದ್ರಗಳು ಆರಂಭವಾಗಿದ್ದರೆ, ಎಲ್‌ಕೆಜಿ, ಯುಕೆಜಿ ತರಗತಿಗಳು ಜಿಲ್ಲೆಯ ಬಹುತೇಕ ಎಲ್ಲ ಕಡೆ ಆರಂಭವಾಗಿದೆ.

ಚಿಣ್ಣರಿಗೆ ಆರತಿ ಬೆಳಗಿ ಸ್ವಾಗತ
ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕೇಂದ್ರಗಳನ್ನು ವಿಶೇಷವಾಗಿ ಸಿಂಗರಿಸಿದ್ದರು. ಬಲೂನ್‌, ಹೂವು, ತೋರಣಗಳ ಅಲಂಕಾರ ಮಾಡಲಾ ಗಿತ್ತು. ಚಿಣ್ಣರಿಗೆ ಆರತಿ ಬೆಳಗಿ, ಹೂವು, ಸಿಹಿ-ತಿಂಡಿ ನೀಡಿ ಬರಮಾಡಿಕೊಂಡರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದ.ಕ. ಉಪನಿರ್ದೇಶಕ ಪಾಪಾ ಬೋವಿ ಅವರು ಮಾತನಾಡಿ, ದ.ಕ. ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರ ತೆರೆಯಲಾಗಿದ್ದು, ಪುಟಾಣಿಗಳು ಹೆತ್ತವರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಮಕ್ಕಳು ಕೇಂದ್ರಗಳಿಗೆ ಆಗಮಿಸಿದ್ದಾರೆ. ಕೇಂದ್ರದಲ್ಲಿ ಗರಿಷ್ಠ ಮುಂಜಾಗ್ರತೆ ವಹಿಸಲಾಗಿದೆ ಎಂದರು.

ಉಡುಪಿ ಡಿಸಿ ಕೂರ್ಮಾರಾವ್‌ ಭಾಗಿ
ಉಡುಪಿ: ಜಿಲ್ಲೆಯಾದ್ಯಂತ ಸೋಮವಾರದಿಂದ ಪೂರ್ವಪ್ರಾಥಮಿಕ ಮತ್ತು ಅಂಗನ ವಾಡಿ ಕೇಂದ್ರಗಳು ಆರಂಭಗೊಂಡಿದ್ದು ಬಲೂನು, ತಳಿರು-ತೋರಣಗಳಿಂದ ಸಿದ್ಧಪಡಿಸಿದ್ದ ಕಡಿಯಾಳಿ ಅಂಗನವಾಡಿ ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಭಾಗವಹಿಸಿದರು. ಮಕ್ಕಳಿಗೆ ಚಾಕೊಲೆಟ್‌, ಬಲೂನ್‌, ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು.

ಜಿಲ್ಲೆಯ ಎಲ್ಲ 1191 ಅಂಗನವಾಡಿಗಳು ಆರಂಭಗೊಂಡವು. ಎಲ್ಲ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಗರಿಷ್ಠ ಸುರûಾ ಕ್ರಮಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದಕೈಗೊಳ್ಳಲಾಗಿತ್ತು.

ಮಂಗಳೂರು ವಿ.ವಿ.: ಕಾಲೇಜು ಆರಂಭ
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಒಳಪಡುವ ಪದವಿ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಸೋಮವಾರದಿಂದ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ಹೊಸ ಶಿಕ್ಷಣ ನೀತಿಯ ಕುರಿತಂತೆಯೂ ವಿದ್ಯಾರ್ಥಿಗಳಿಗೆ ಶಿಕ್ಷಕರು, ಆಯಾ ಕಾಲೇಜಿನ ಪ್ರಮುಖರು, ತಜ್ಞರು ಮಾಹಿತಿ ನೀಡಿದರು. ಮೊದಲ ದಿನ ಶೇ. 80ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳಿಗೂ ಭೌತಿಕ ತರಗತಿಗಳು ಆರಂಭವಾಗಿವೆ.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.