‘ಒಪ್ಪಂದ’ ಮುಗಿಸಿದ ರಾಧಿಕಾ ಕುಮಾರಸ್ವಾಮಿ
Team Udayavani, Nov 9, 2021, 1:30 PM IST
ನಟಿ ರಾಧಿಕಾ ಕುಮಾರಸ್ವಾಮಿ ನಟನೆಯ ಚಿತ್ರವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ಒಪ್ಪಂದ’. ಆರಂಭದಲ್ಲಿ ಈ ಚಿತ್ರದ ಹೆಸರು “ಕಾಂಟ್ರ್ಯಾಕ್ಟ್’ ಎಂದಿತ್ತು. ಈಗ ಈ ಚಿತ್ರದ ಹೆಸರನ್ನು “ಒಪ್ಪಂದ’ ಎಂದಿಡಲಾಗಿದೆ.
ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾವಾಗಿದ್ದು, ಚಿತ್ರದಲ್ಲಿ ರಾಧಿಕಾ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. 2019ರಲ್ಲಿ ರಾಧಿಕಾ ನಟನೆಯ “ದಮಯಂತಿ’ ಬಿಟ್ಟರೆ ಆ ನಂತರ ಯಾವುದೇ ಚಿತ್ರಗಳು ಬಿಡುಗಡೆಯಾಗಿಲ್ಲ. ಈಗ “ಒಪ್ಪಂದ’ ತಯಾರಾಗಿದ್ದು, ಚಿತ್ರ ಇದೇ ತಿಂಗಳು ಬಿಡುಗಡೆಯಾಗಲಿದೆ.
ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಈ ಚಿತ್ರವನ್ನು ಸಮೀರ್ ಎನ್ನುವವರು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ಹಾಗೂ ಜೆ.ಡಿ.ಚಕ್ರವರ್ತಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಸುಭಾಷ್ ಆನಂದ್ ಸಂಗೀತ ನಿರ್ದೇಶನವಿದೆ.
ಇತ್ತೀಚೆಗೆ ನಡೆದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ನಿರ್ಮಾಪಕ ರೆಹಮಾನ್ (ಯಜಮಾನ), ಕೆ.ಮಂಜು ಸೇರಿದಂತೆ ಅನೇಕರು ಭಾಗಿಯಾಗಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.