ಅಂಗನವಾಡಿ ಕೇಂದ್ರ ಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಿ
Team Udayavani, Nov 9, 2021, 3:25 PM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಯಶಸ್ವಿಯಾಗಿ ಆರಂಭಿಸಿದ್ದು, ಕೊರೊನಾ ಸೋಂಕು ಮಕ್ಕಳಿಗೆ ಹರಡದಂತೆ ಹೆಚ್ಚಿನ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.
ನಗರದ ಎಚ್.ಎಸ್.ಗಾರ್ಡನ್‌ನ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕೇಕ್ ಕತ್ತರಿಸಿ ಮಕ್ಕಳಿಗೆ ತಿನಿಸುವುದರ ಮೂಲಕ ಅಂಗನವಾಡಿ ಕೇಂದ್ರ ಆರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರದ ನಿರ್ದೇಶನದಂತೆ ಅಂಗನವಾಡಿ ಕೇಂದ್ರ ಆರಂಭಿಸಲಾಗಿದೆ. ಮಕ್ಕಳ ಸುರಕ್ಷತೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಕೊರೊನಾ ಹರಡದಂತೆ ನೋಡಿಕೊಳ್ಳಿ: ಅಂಗನವಾಡಿ ಕೇಂದ್ರಗಳ ಸ್ವತ್ಛತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸ ಬೇಕು, ಮಕ್ಕಳು ಬಹಳ ಚಿಕ್ಕವರಾಗಿದ್ದು, ಮುಗ್ಧರಾಗಿದ್ದಾರೆ. ಎಲ್ಲಾ ಕೇಂದ್ರಗಳಲ್ಲೂ ಸರ್ಕಾರದ ಕೋವಿಡ್ ಮಾರ್ಗಸೂಚಿ ಕ್ರಮ ಕಟ್ಟುನಿಟ್ಟಾಗಿ ಪಾಲಿಸಬೇಕು. ಸೋಂಕು ಹೆಚ್ಚಿದ್ದ ವೇಳೆ ಅಂಗನವಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರು ಹೆಚ್ಚು ಶ್ರಮವಹಿಸಿದ್ದೀರಿ, ನಿಮಗೆಲ್ಲ ಧನ್ಯವಾದಗಳು. ಮುಂದೆಯೂ ಮಕ್ಕಳಿ ಗೆ ಕೊರೊನಾ ಹರಡದಂತೆ ನಿಗಾವಹಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು.
ಶಾಲಾ ಮಕ್ಕಳಿಗೆ ಸೋಂಕು ಬಂದಿಲ್ಲ: ಜಿಲ್ಲೆಯಲ್ಲಿ ಈಗಾಗಲೇ 1ನೇ, ಅದಕ್ಕೂ ಮೇಲ್ಪಟ್ಟ ಎಲ್ಲಾ ತರಗತಿ ಆರಂಭಗೊಂಡು ಯಶಸ್ವಿಯಾಗಿ ನಡೆಯುತ್ತಿವೆ. ನಮ್ಮ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವ ಮಕ್ಕಳಿಗೂ ಕೊರೊನಾ ಸೋಂಕು ಬಂದಿಲ್ಲ. ಅದೇ ರೀತಿ ಅಂಗನವಾಡಿ ಕೇಂದ್ರಗಳಲ್ಲೂ ಸರ್ಕಾರದ ಕೋವಿಡ್ ಮಾರ್ಗಸೂಚಿ ಪಾಲಿಸುವುದರ ಜೊತೆಗೆ ಪ್ರತಿ ಮಗುವಿನ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಅಂಗನವಾಡಿ ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಹೇಳಿದರು.
ನಿರ್ಲಕ್ಷ್ಯ ಸಲ್ಲದು: ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿಯಂತಹ ಸಾಮಾನ್ಯ ರೋಗ ಲಕ್ಷಣಗಳು ಕಂಡು ಬಂದಾಗ ಅಂಗನವಾಡಿಗೆ ಕಳುಹಿಸುವುದು ಬೇಡ. ತಕ್ಷಣವೇ ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಕೊಡಿಸಬೇಕು. ಮಕ್ಕಳು ಆರೋಗ್ಯವಾಗಿದ್ದಾಗ ಮಾತ್ರವೇ ಅಂಗನವಾಡಿಗೆ ಕಳುಹಿಸಿ ಎಂದು ಅವರು ಪೋಷಕರಿಗೆ ಸಲಹೆ ನೀಡಿದರು.
ಪುಟಾಣಿಗಳಿಗೆ ಶುಭ ಕೋರಿಕೆ: ಪುಟಾಣಿ ಮಕ್ಕಳೊಂದಿಗೆ ಅಕ್ಕರೆಯ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಬಹುದಿನಗಳ ನಂತರ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿರುವ ಬಗ್ಗೆ ಮಕ್ಕಳಲ್ಲಿ ಉಂಟಾದ ಅನುಭವ ಹಾಗೂ ಮಕ್ಕಳ ಯೋಗಕ್ಷೇಮವನ್ನು ವಿಚಾರಿಸಿದರು. ಅಂಗನವಾಡಿ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಎಚ್.ಎಸ್.ಗಾರ್ಡನ್‌ನ ಅಂಗನವಾಡಿ ಕೇಂದ್ರವನ್ನು ಬಲೂನ್, ತಳಿರು-ತೋರಣಗಳಿಂದ ಆಕರ್ಷಣೀಯವಾಗಿ ಅಲಂಕರಿಸಲಾಗಿತ್ತು. ಚಿಣ್ಣರು ಬರುತ್ತಿದ್ದಂತೆ ಅಂಗನವಾಡಿ ಕಾರ್ಯಕರ್ತೆಯರು ಹೂವು, ಬಿಸ್ಕೆಟ್ ಅನ್ನು ನೀಡಿ ಸ್ವಾಗತಿಸಿದರು.
ಜಿಪಂ ಸಿಇಒ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷ ಆನಂದ್‌ರೆಡ್ಡಿ, ನಗರಸಭೆ ಪೌರಾಯುಕ್ತ ಡಾ.ಮಹಂತೇಶ್, ನಗರಸಭೆ ಸದಸ್ಯರಾದ ಸ್ವಾತಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಶ್ವತ್ಥಮ್ಮ, ಶಿಶು ಅಭಿವೃದ್ಧಿ ಅಧಿ ಕಾರಿ ಗಂಗಾಧರ್, ಅಂಗನವಾಡಿಯ ಚಿಣ್ಣರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.