ರೈಲ್ವೈಯಿಂದ ವಾಣಿಜ್ಯ-ವ್ಯಾಪಾರ ವೃದ್ದಿ: ಸಂಸದ ಕರಡಿ

Team Udayavani, Nov 10, 2021, 4:36 PM IST

26mp-karadi

ಸಿಂಧನೂರು: ಮೆಹಬೂಬನಗರ- ಗಿಣಿಗೇರಾ ರೈಲ್ವೆ ಮಾರ್ಗದಿಂದ ಭತ್ತದ ಬೀಡು ಖ್ಯಾತಿಯ ತಾಲೂಕುಗಳು ಒಳಗೊಂಡು ಕೊಪ್ಪಳ, ರಾಯಚೂರು ಜಿಲ್ಲೆಯಲ್ಲಿ ವಾಣಿಜ್ಯ, ವ್ಯಾಪಾರ ವೃದ್ಧಿಯಾಗಲಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ಅವರು ಮಂಗಳವಾರ ನಗರದ ತಾಲೂಕು ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 165 ಕಿ.ಮೀ. ಉದ್ದದ ಈ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಈಗಾಗಲೇ ಕಾರಟಗಿವರೆಗೆ ಪೂರ್ಣಗೊಂಡಿದೆ. ಅಲ್ಲಿಂದ ಸಿಂಧನೂರಿನವರಿಗೆ ಪ್ರಗತಿಯಲ್ಲಿದೆ. ಸಿಂಧನೂರಿನಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಸ್ಟೇಷನ್‌ ಕಾಮಗಾರಿಗಳು ನಡೆಯಲಿವೆ ಎಂದರು.

ಗಂಗಾವತಿ, ಕಾರಟಗಿ, ಸಿಂಧನೂರು, ಸಿರುಗುಪ್ಪ, ಮಾನ್ವಿ ಸೇರಿದಂತೆ ಸುತ್ತಲಿನ ನಗರಗಳಿಗೆ ರೈಲ್ವೆ ಮಾರ್ಗದಿಂದ ಅನುಕೂಲವಾಗಲಿದೆ. ಕಡಿಮೆ ವೆಚ್ಚದಲ್ಲಿ ದೂರ ಊರುಗಳಿಗೆ ಪ್ರಯಾಣ ಮಾಡಬಹುದು. ಈಗಾಗಲೇ ಗಂಗಾವತಿಯಿಂದ ರೈಲು ಓಡಿಸಲಾಗಿದ್ದು, ಆಟೋ ದರಕ್ಕಿಂತ ಕಡಿಮೆ ಎಂದು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೂನ್‌ 22ರ ವೇಳೆಗೆ ಸಿಂಧನೂರುವರೆಗೂ ರೈಲು ಓಡಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಅಂದಾಜು 2,565 ಕೋಟಿ ರೂ. ವೆಚ್ಚದ ಯೋಜನೆಯಲ್ಲಿ 1,350 ಕೋಟಿ ರೂ. ಖರ್ಚಾಗಿದೆ. ಬಾಕಿ ಕೆಲಸಗಳು ಕೂಡ ನಡೆಯಲಿವೆ ಎಂದರು.

ಬಿಜೆಪಿ ಸರಕಾರದ ಕೊಡುಗೆ: 2014ಕ್ಕೂ ಮುನ್ನ ಈ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಕುಂಠಿತವಾಗಿತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಮತ್ತು ಹಿಂದಿನ ಸಿಎಂ ಬಿ.ಎಸ್‌. ಯಡಿಯೂರಪ್ಪ, ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಸಹಕಾರದಿಂದ ಯೋಜನೆ ಸಿಂಧನೂರು ತನಕ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ವಂತಿಗೆ ಇರುವುದರಿಂದ ಎರಡು ಸರಕಾರ ಕೈಜೋಡಿಸಿದ್ದರಿಂದ ಪ್ರಗತಿ ಸಾಧ್ಯವಾಗಿದೆ. ನನ್ನ ಅವಧಿ ಪೂರ್ಣಗೊಳ್ಳುವುದರೊಳಗೆ ಕಾಮಗಾರಿ ಸಂಪೂರ್ಣಗೊಳಿಸುವ ಗುರಿಯಿದೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಅಮರೇಗೌಡ ವಿರೂಪಾಪುರ, ಪಿಎಲ್‌ಡಿಬಿ ಬ್ಯಾಂಕ್‌ ಅಧ್ಯಕ್ಷ ಎಂ. ದೊಡ್ಡಬವರಾಜ್‌, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಸಿದ್ದಾಂತಿಮಠ, ಮಲ್ಲಿಕಾರ್ಜುನ ಜಿನೂರು, ಲಿಂಗರಾಜ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.