ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ
Team Udayavani, Nov 10, 2021, 5:38 PM IST
ಸುರಪುರ: ಮತದಾರರ ಪಟ್ಟಿಗೆ 18 ವರ್ಷ ಮೇಲ್ಪಟ್ಟ ನೂತನ ಮತದಾರರನ್ನು ಮತ್ತು ಹೆಸರು ಬಿಟ್ಟು ಹೋಗಿದ್ದರೆ, ಡಿಲಿಟ್ ಆಗಿದ್ದರೆ, ಸಾಕ್ಷಿ ಪಡೆದು ಮತದಾರ ಪಟ್ಟಿಯಲ್ಲಿ ಸೇರಿಸಿ ಮತದಾನ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸುವಂತೆ ಮಾಡುವ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ ಎಂದು ತಹಶೀಲ್ದಾರ್ ಮತ್ತು ಚುನಾವಣಾಧಿಕಾರಿ ಸುಬ್ಬಣ್ಣ ಜಮಖಂಡಿ ಹೇಳಿದರು.
ನಗರದ ತಹಸೀಲ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು ಬೂತ್ ಮಟ್ಟದ ಅಧಿಕಾರಿಗಳ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಆ.9ರಿಂದ ಜನವರಿ 22ರ ವರೆಗೆ ಮತದಾರ ಪಟ್ಟಿಯ ಪರಿಷ್ಕರಣೆ ಹಾಗೂ ನ.26ರಿಂದ 28ರವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮತದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮರಣ ಹೊಂದಿದವರು, ಸ್ಥಳಾಂತರ ಮಾಡಿದವರನ್ನು ಸಾಕ್ಷಿದಾರರನ್ನು ಸಂಪರ್ಕಿಸಿ ಮತದಾರ ಪಟ್ಟಿಯಿಂದ ತೆಗೆದು ಹಾಕಬೇಕು. ದ್ವಿತೀಯ ಪಿಯು ಮುಗಿಸಿದ, ಫೇಲಾದ, ಬೇರೆ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಅಭ್ಯಾಸ ಮಾಡುತ್ತಿರುವವರ ಮಾಹಿತಿಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಂದ ಪಡೆದು ಮತದಾರರ ಪಟ್ಟಿಗೆ ಸೇರ್ಪಡೆ ಗೊಳಿಸಬೇಕು. ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂದು ಸೂಚಿಸಿದರು.
ತಾಲೂಕಿನಲ್ಲಿ ಶತಾಯುಷಿಗಳು, 82ರಿಂದ 99 ವಯೋಮಾನದ 846 ಜನರಿದ್ದು, ವಯಸ್ಸಿನ ದಾಖಲಾತಿಯನ್ನು ಪುನರ್ ಪರಿಶೀಲಿಸಬೇಕು. ದಾಖಲಾತಿಯಲ್ಲಿ ತಪ್ಪಾಗಿದ್ದರೆ ಸರಿಪಡಿಸಿಕೊಡಬೇಕು. ಅವರು ಜೀವಂತವಾಗಿದ್ದಾರೆಯೇ ಇಲ್ಲವೇ ಎಂಬುದುನ್ನು ಖಾತರಿ ಪಡಿಸಿಕೊಳ್ಳಬೇಕು. ವಯಸ್ಸಿನ ಖಚಿತ ಮಾಹಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ ನಿರ್ಧರಿಸಿ ಖಚಿತವಾಗಿಸಿಕೊಳ್ಳಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ರೆಡ್ಡಿ, ತರಬೇತುದಾರ ಹಣಮಂತ ಪೂಜಾರಿ, ಚುನಾವಣೆ ಶಿರಸ್ತೇದಾರ ಸುನೀಲ್ ವಿ.ಪುಲ್ಸೆ, ವಿಷಯ ನಿರ್ವಾಹಕ ಕಾರ್ತಿಕ್, ಇಬ್ರಾಹಿಂ, ಗ್ರಾಮ ಲೆಕ್ಕಿಗರು, ಅಂಗನವಾಡಿ ಕಾರ್ಯಕರ್ತೆಯರು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.