ಅಪ್ಪು ಆದರ್ಶ : ಚಾಮರಾಜನಗರ ಜಿಲ್ಲಾಡಳಿತದಿಂದ ನೇತ್ರದಾನ ಅಭಿಯಾನ
46,000 ಜನರ ನೇತ್ರದಾನ ನೋಂದಣಿ ಅಭಿಯಾನ
Team Udayavani, Nov 10, 2021, 8:10 PM IST
ಚಾಮರಾಜನಗರ: ಹೆಸರಾಂತ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ತಮ್ಮ ಎರಡು ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ತವರು ಜಿಲ್ಲೆಯ ಈ ಮಹಾನ್ ನಟನ ಆದರ್ಶವನ್ನು ಇನ್ನಷ್ಟು ಸಾರ್ಥಕತೆಗೊಳಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಪುನೀತ್ ರಾಜ್‌ಕುಮಾರ್ ಅವರ ಗೌರವಾರ್ಥ ಮಹತ್ವದ ನೇತ್ರದಾನ ಅಭಿಯಾನ ಆರಂಭಿಸಲಿದೆ.
ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಯಾಗಿದ್ದ ನಟ ಪುನೀತ್ ರಾಜ್‌ಕುಮಾರ್ ಅವರ ಮಾನವೀಯ ಸೇವಾ ಕಾರ್ಯಗಳು ಸದಾ ಸ್ಮರಣೀಯವಾದದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಪುನೀತ್ ರಾಜ್ ಕುಮಾರ್ ಅವರ ನೇತ್ರದಾನದ ಆದರ್ಶವನ್ನಿಟ್ಟುಕೊಂಡು ನವೆಂಬರ್ ಅಂತ್ಯದೊಳಗೆ 10 ಸಾವಿರ ಜನರನ್ನು ನೇತ್ರದಾನಕ್ಕಾಗಿ ನೊಂದಾಯಿಸುವ ಕಾರ್ಯದ ಗುರಿಯನ್ನು ಹೊಂದಿದೆ. ಪುನೀತ್ ರಾಜ್‌ಕುಮಾರ್ ಅವರು 46ನೇ ವಯಸ್ಸಿನಲ್ಲಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ 46 ಸಾವಿರ ಜನರನ್ನು ನೇತ್ರದಾನಕ್ಕಾಗಿ ನೋಂದಾಯಿಸುವ ಮಹತ್ತರ ಉದ್ದೇಶ ಹೊಂದಲಾಗಿದೆ.
ಪುನೀತ್ ರಾಜ್‌ಕುಮಾರ್ ಅವರನ್ನು ಅದರ್ಶವಾಗಿಟ್ಟುಕೊಂಡು ನೇತ್ರದಾನ ಮಾಡುವಂತೆ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿಯೇ ರೆಡ್‌ಕ್ರಾಸ್ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಎಲ್ಲೆಡೆ ನೇತ್ರದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಶಿಬಿರಗಳ ಯಶಸ್ಸಿಗೆ ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳು, ನೆಹರು ಯುವ ಕೇಂದ್ರ ಇನ್ನಿತರ ಸಂಘ ಸಂಸ್ಥೆಗಳ ಸಹಕಾರವನ್ನು ಪಡೆಯಲಿದೆ.
ನೂತನ ಕಣ್ಣಾಸ್ಪತ್ರೆಗೆ ಪುನೀತ್ ಹೆಸರು: ಜಿಲ್ಲೆಯಲ್ಲಿ ನಿರ್ಮಿಸಲಾಗುವ ಕಣ್ಣಿನ ಅಸ್ಪತ್ರೆಗೆ ಪುನೀತ್ ರಾಜ್‌ಕುಮಾರ್ ಅವರ ಗೌರವಾರ್ಥ ಅವರ ಹೆಸರನ್ನೇ ಇಡುವ ಮೂಲಕ ಜಿಲ್ಲೆಯ ಗೌರವ ಸಲ್ಲಿಸುವ ಮಹತ್ವದ ತೀರ್ಮಾನವನ್ನು ಜಿಲ್ಲಾಡಳಿತ ಕೈಗೊಂಡಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರ ಅಧ್ಯಕ್ಷತೆಯಲ್ಲಿ ನೇತ್ರದಾನ ಅಭಿಯಾನ ಕುರಿತು ಆರೋಗ್ಯ ಇಲಾಖೆ, ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಇದನ್ನೂ ಓದಿ : ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿಗೆ ಹೋಗಿದ್ದು ನೂರಕ್ಕೆ ನೂರು ಸತ್ಯ : ತಂಗಡಗಿ
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಯಾಗಿದ್ದ ಹಾಗೂ ತವರೂರಿನ ನಟ ಆಗಿದ್ದ ಪುನೀತ್ ರಾಜ್‌ಕುಮಾರ್ ಅವರಿಗೆ ಜಿಲ್ಲೆಯ ವತಿಯಿಂದ ಗೌರವಪೂರ್ವಕ ಸ್ಮರಣೀಯ ಕಾರ್ಯವನ್ನು ಹಮ್ಮಿಕೊಳ್ಳಬೇಕಿದೆ. ಯಾವುದೇ ವ್ಯಕ್ತಿ ಮರಣ ಹೊಂದಿದ ನಂತರ ಕಣ್ಣುಗಳು ಮಣ್ಣಾಗಬಾರದು. ಆ ಕಣ್ಣುಗಳು ಜೀವಂತವಿದ್ದು ಇತರೆ ಅಂಧರಿಗೆ ದಾರಿದೀಪವಾಗಬೇಕು. ಪುನೀತ್ ರಾಜ್‌ಕುಮಾರ್ ಅವರ ನೇತ್ರದಾನ ಆದರ್ಶ ಎಲ್ಲರಲ್ಲಿಯೂ ಬರಬೇಕು. ಇದಕ್ಕಾಗಿ ಜಿಲ್ಲೆಯಾದ್ಯಂತ ನೇತ್ರದಾನ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡು ಜನರನ್ನು ಜಾಗೃತಗೊಳಿಸಬೇಕಾಗಿದೆ ಎಂದರು.
ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ನೇತ್ರದಾನ ಅಭಿಯಾನ ಹಮ್ಮಿಕೊಳ್ಳುವ ಉದ್ದೇಶದಿಂದ ಎಲ್ಲಾ ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಸಮಿತಿ ರಚಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಕಲಚೇತನರ ಇಲಾಖೆಯ ವರದಿಯನ್ವಯ ಜಿಲ್ಲೆಯಲ್ಲಿ 3500 ಮಂದಿ ಅಂಧರಿದ್ದಾರೆ. ಜಿಲ್ಲೆಯಲ್ಲಿ ಎಷ್ಟು ಮಂದಿ ಅಂಧರಿದ್ದಾರೆ ಎಂಬುದನ್ನು ಸರ್ವೇ ಕಾರ್ಯ ಆರಂಭಿಸುವ ಅಗತ್ಯವಿದೆ. ಇದಕ್ಕಾಗಿ ವ್ಯವಸ್ಥಿತವಾದ ಗುರಿ ನಿಗದಿಪಡಿಸಿಕೊಳ್ಳಬೇಕು. ಜಿಲ್ಲಾಡಳಿತ ಭವನದಲ್ಲಿಯೂ ಸಹ ಒಂದು ದಿನದ ಶಿಬಿರವನ್ನು ಆಯೋಜಿಸಲಾಗುವುದು. ನೇತ್ರದಾನ ಶಿಬಿರದಲ್ಲಿ ದೃಷ್ಠಿದಾನಕ್ಕಾಗಿ ನೋಂದಾಯಿತರಾದವರಿಗೆ ನೀಡಲು ಅರ್ಜಿ ನಮೂನೆ, ಪ್ರಮಾಣಪತ್ರ ಹಾಗೂ ಗುರುತಿನ ಚೀಟಿಯನ್ನು ಸಿದ್ದಪಡಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಜಿಲ್ಲೆಯಲ್ಲಿ ಕಣ್ಣಿನ ಆಸ್ಪತ್ರೆಯ ಅವಶ್ಯವಿದ್ದು, ಈಗಾಗಲೇ ಜಾಗ ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಾಗ ಲಭ್ಯವಿಲ್ಲದಿದ್ದರೆ ಸರ್ಕಾರದಿಂದಲೇ ಸ್ಥಳ ನೀಡಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಿರುವ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ನಿಧಿ ಕೇಂದ್ರ (ಐ ಬ್ಯಾಂಕ್) ವನ್ನು ಸ್ಥಾಪಿಸಲಾಗುವುದು ಜಿಲ್ಲೆಯಲ್ಲಿ ನಿರ್ಮಾಣ ಮಾಡುವ ಕಣ್ಣಿನ ಆಸ್ಪತ್ರೆಗೆ ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನೇ ಇಡೆಉವ ಮೂಲಕ ಜಿಲ್ಲಾಡಳಿತ ಗೌರವ ಸಲ್ಲಿಸಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಸಂಜೀವ್, ಜಿಲ್ಲಾಸ್ಪತ್ರೆಯ ನೋಡೆಲ್ ಅಧಿಕಾರಿ, ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಡಾ. ಮಹೇಶ್, ಜಿಲ್ಲಾ ಸರ್ವೇಲೆನ್‌ಸ್ ಘಟಕದ ಅಧಿಕಾರಿ ಡಾ. ನಾಗರಾಜು ಇತರರು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.