ಎನ್‌ಇಪಿ: ಓದದೇ ವಿರೋಧ ಸಲ್ಲ

ರಾಜ್ಯಮಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿದ ಸಚಿವ ಬಿ.ಸಿ.ನಾಗೇಶ್‌

Team Udayavani, Nov 11, 2021, 10:00 AM IST

Minister of State for Education BC Nagesh inaugurated the State Level Educational Conference

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಓದದೇ ಅನೇಕ ಮಂದಿ ವಿರೋಧ ಮಾಡುತ್ತಿದ್ದಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಬುಧವಾರ ಜಯನಗರದ ಆರ್‌.ವಿ.ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಶಿಕ್ಷಣ ನೀತಿ-2020′ ಕುರಿತ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಮಾನಾಡಿದರು.

ನಮ್ಮಲ್ಲಿ ಮೂರು ರೀತಿಯವರಿದ್ದಾರೆ. ಒಬ್ಬರು ಹೊಸ ಶಿಕ್ಷಣ ನೀತಿ ಓದದೆ ಉತ್ತಮವಾಗಿದೆ ಅನ್ನುವವರು. ಇನ್ನೂಬ್ಬರು ಶಿಕ್ಷಣ ನೀತಿ ಬಗ್ಗೆ ಓದದೆ ವಿರೋಧಿಸುವವರು. ಮತ್ತೂಬ್ಬರು ನೂತನ ಶಿಕ್ಷಣ ನೀತಿಯನ್ನು ಓದಿ ಅರಿತುಕೊಂಡರು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಓದದೇ ಅನೇಕ ಜನರು ವಿರೋಧ ಮಾಡುತ್ತಿದ್ದಾರೆ ಇದಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲದಿಲ್ಲ ಎಂದರು.

ಈ ಹಿಂದೆ ಕೇಂದ್ರ ಸರ್ಕಾರ ಕೋವಿಡ್‌ ಲಸಿಕೆಯನ್ನು ನೀಡಲು ಹೊರಟಾಗಲೂ ವಿರೋಧಿಸಿದ್ದರು. ಹೀಗಾಗಿ ವಿರೋಧ ಮಾಡೋ ಜನರು ನಮ್ಮ ಮಧ್ಯೆ ಇದ್ದಾರೆ. ಆ ಹಿನ್ನೆಲೆಯಲ್ಲಿ ವಿರೋಧಿಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಈಗಿರುವ ಶಿಕ್ಷಣ ಪದ್ಧತಿ ಕುಟುಂಬಗಳನ್ನು ವಿಭಾಗ ಮಾಡುವ ವ್ಯವಸ್ಥೆಯನ್ನು ಹುಟ್ಟು ಹಾಕುತ್ತಿದೆ. ಇಂತಹ ವ್ಯವಸ್ಥೆಯ ಶಿಕ್ಷಣ ಬದಲಾವಣೆ ಆಗಬೇಕು.

ಇದನ್ನೂ ಓದಿ:- ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

75 ವರ್ಷಗಳ ಶಿಕ್ಷಣ ಸ್ವಾರ್ಥದ ಬದುಕು ಕಲಿಸಿಕೊಟ್ಟಿದೆ. ಶ್ಯಾಂ ಪ್ರಸಾದ್‌ ಮುಖರ್ಜಿ ಅವರು ಶಿಕ್ಷಣ ವ್ಯವಸ್ಥೆ ಬಗ್ಗೆ ಅಂದೇ ಧ್ವನಿ ಎತ್ತಿದ್ದರು. ಪಂಚಶೀಲ ಶಿಕ್ಷಣ ನೀತಿ ಬರಬೇಕು ಎಂದು ಮುಖರ್ಜಿ ಅವರು ಪ್ರತಿಪಾದನೆ ಮಾಡಿದ್ದರು. ಜತೆಗೆ ಮೆಕ್ಯಾಲೆ ಶಿಕ್ಷಣ ವ್ಯವಸ್ಥೆಯನ್ನು ಕೂಡ ವಿರೋಧಿಸಿದ್ದರು ಎಂದು ಹೇಳಿದರು. ಶಿಕ್ಷಣ ತಜ್ಞ ಡಾ.ಗುರುರಾಜ್‌ ಕರ್ಜಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಪಿಯುಸಿ ಬೋರ್ಡ್‌ ನಿರ್ದೇಶಕಿ ಸ್ನೇಹಲ್‌ ಸೇರಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

 ಈ ನೀತಿ ಏಕಾಏಕಿ ಬಂದಿಲ್ಲ

ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಎಂ.ಕೆ. ಶ್ರೀಧರ್‌, ಹೊಸ ಶಿಕ್ಷಣ ನೀತಿ ಏಕಾಏಕಿ ಬಂದಿದ್ದಲ್ಲ. 2015ರಲ್ಲಿ ಉನ್ನತ ಶಿಕ್ಷಣ ಇಲಾಖೆಗೆ 20 ಮತ್ತು ಶಾಲಾ ಶಿಕ್ಷಣಕ್ಕೆ 13 ಪ್ರಶ್ನಾವಳಿಯನ್ನು ನೀಡಲಾಗಿತ್ತು. ಅವುಗಳನ್ನು ಎಲ್ಲಾ ಹಂತಗಳಲ್ಲಿ ಚರ್ಚೆ ಮಾಡಿ, ಸಲಹೆ ಪಡೆಯಲಾಗಿತ್ತು. 2016ರಲ್ಲಿ ಟಿ.ಎಸ್‌.ಆರ್‌. ಸುಬ್ರಹ್ಮಣ್ಯ ಸಮಿತಿ ವರದಿ ನೀಡಿತ್ತು. ಬಳಿಕ 2017ರಲ್ಲಿ ಕಸ್ತೂರಿ ರಂಗನ್‌ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಅದರ ಆಧಾರದ ಮೇಲೆ ಏಳೆಂಟು ತಿಂಗಳು ಚರ್ಚೆ ನಡೆದು 2 ಲಕ್ಷಕ್ಕೂ ಹೆಚ್ಚು ಅಭಿಪ್ರಾಯ ಕ್ರೋಢೀಕರಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಟಿಸಲಾಗಿದೆ ಎಂದರು.

ಟಾಪ್ ನ್ಯೂಸ್

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.