ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ತಾತ್ಕಾಲಿಕ ಮುಂದೂಡಿಕೆ
Team Udayavani, Nov 11, 2021, 3:30 PM IST
ಬೆಂಗಳೂರು: ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹವನ್ನು ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಸಹಕಾರಿ ಸಪ್ತಾಹವನ್ನು ಯಶಸ್ವಿವಾಗಿ ಆಚರಿಸಲು ಪ್ರತಿ ವರ್ಷ ನವೆಂಬರ್ 14ರಂದು ಹಮ್ಮಿಕೊಳ್ಳಲಾಗುತ್ತಿತ್ತು. ರಾಜ್ಯದ ನಾನಾ ಜಿಲ್ಲೆಗಳಲ್ಲಿ 7 ದಿನ ಸಹಕಾರ ಸಪ್ತಾಹ ಹಮ್ಮಿಕೊಳ್ಳುವುದರ ಜೊತೆಗೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಮುಖ್ಯಮಂತ್ರಿಗಳು ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದರು. ಈ ವರ್ಷ ಕೂಡ ನವೆಂಬರ್ 14ರ ಭಾನುವಾರ ಬೆಂಗಳೂರಿನಲ್ಲಿ, ನಂತರ ನಾನಾ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು.
ಆದರೆ 20 ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸ್ಥಾನಗಳಿಗೆ ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯುವುದರಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ ನವೆಂಬರ್ 14ರಿಂದ ನಡೆಯಬೇಕಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.