ಜನಧನ್ ಖಾತೆಗಳಿಂದ ತಲಾ 2 ರೂ.ನಂತೆ 6,000 ಕೋಟಿ ರೂ. ಅಕ್ರಮ : ಹೆಚ್ ಡಿಕೆ ಅನುಮಾನ
ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ? ಜಾಮೀನು ಖಾತರಿ ಕೊಟ್ಟವರು ಯಾರು?
Team Udayavani, Nov 11, 2021, 6:48 PM IST
ಬೆಂಗಳೂರು: ಜನಧನ್ ಖಾತೆಗಳಿಂದ ತಲಾ 2 ರೂಪಾಯಿ ಲೆಕ್ಕದಲ್ಲಿ ಸುಮಾರು 6,000 ಕೋಟಿ ರೂಪಾಯಿಯಷ್ಟು ಹಣವನ್ನು ಅಕ್ರವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರ ‘ ಜನತಾ ಸಂಗಮದ ನಾಲ್ಕನೇ ದಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇಷ್ಟು ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರು ಇದ್ದಾರೆ ಎನ್ನುವ ಮಾಹಿತಿ ಜನರಿಗೆ ಗೊತ್ತಾಗಬೇಕಿದೆ ಎಂದರು.
ಬಹುಶಃ ಈ ಎಲ್ಲ ಮಾಹಿತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಚೆನ್ನಾಗಿ ಗೊತ್ತಾಗಿದೆ. ಅವರ ಬಳಿ ಎಲ್ಲ ಮಾಹಿತಿ ಇದ್ದು, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದ್ದು ಹೇಗೆ?
ಬಿಟ್ ಕಾಯಿನ್ ಹಗರಣದ ಮುಖ್ಯ ಆರೋಪಿಗೆ ಜಾಮೀನು ಸಿಕ್ಕಿದ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿಗಳು, ಆರೋಪಿಗೆ ಜಾಮೀನು ಕೊಡಲು ಖಾತರಿ ಕೊಟ್ಟಿದ್ದು ಯಾರು? ಆತನ ಪರ ವಾದ ಮಂಡಿಸಿದ ವಕೀಲರು ಯಾರು? ಎಂದು ಪ್ರಶ್ನಿಸಿದರು.
ಆರೋಪಿ ಜೈಲಿನಿಂದ ಹೊರಬಂದ ನಂತರ ಮಾಧ್ಯಮದವರ ಮುಂದೆ ಕಾಣಿಸಿಕೊಂಡಿದ್ದಾನೆ. ಮಾಧ್ಯದವರ ಜತೆ ಆ ವ್ಯಕ್ತಿ ಮಾತನಾಡುತ್ತಾನೆ, ನಂತರ ಆಟೋ ಹತ್ತಿ ಹೋಗುತ್ತಾನೆ. ಇದೆಲ್ಲ ನೋಡಿದರೆ ಅದರ ಹಿಂದೆ ಯಾರೋ ಇರುವುದು ಸ್ಪಷ್ಟ ಎಂದರು.
ಬಿಟ್ ಕಾಯಿನ್ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂಬ ಅನುಮಾನ ದಟ್ಟವಾಗಿದೆ. ಸರ್ಕಾರದ ಪರ ವಕೀಲರು ಎಷ್ಟರ ಮಟ್ಟಿಗೆ ವಾದ ಮಂಡಿಸಿದ್ದಾರೆ ಎನ್ನುವುದೂ ಮುಖ್ಯ. ಇಲ್ಲಿ ಯಾರಿಂದ ಯಾರ ರಕ್ಷಣೆ ಆಗಿದೆ? ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದರು.
ಹಗರಣ ತನಿಖೆಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು; ಸೂಕ್ತ ತನಿಖೆ ಆಗಲಿ ಅಂತ ಅವರು ಪತ್ರ ಬರೆದಿರಬಹುದು. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಒಳಗೊಂಡಿದ್ದಾರೆ ಎನ್ನುವ ಮಾತೂ ಇದೆ. ಪದೇ ಪದೆ ಹೀಗಾದರೆ ಜನ ಯಾರನ್ನು ನಂಬಬೇಕು. ಒಬ್ಬರಿಂದ ಜನರು ಎಲ್ಲಾ ರಾಜಕಾರಣಿಗಳ ಕಡೆ ಕೈ ತೋರಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಭಾರತದ ಮಾನ ಹರಾಜು ಆಗಬಾರದು ಅಂತ ಒಂದಿಷ್ಟು ಜನರ ಮಾಹಿತಿಯನ್ನು ಹೊರಬಿಟ್ಟಿಲ್ಲ ಅಂತ ಕಾಣುತ್ತೆ. ಆದಷ್ಟು ಬೇಗ ಜನತೆಗೆ ಸತ್ಯ ತಿಳಿಯಲಿ. ಪ್ರಧಾನ ಮಂತ್ರಿಯವರು ಅಮೆರಿಕಕ್ಕೆ ಭೇಟಿ ನೀಡಿದ್ದಾಗ ಈ ಬಗ್ಗೆ ಮಾಹಿತಿ ಸಿಕ್ಕಿದೆ. ಅವರಿಗೆ ಮುಜುಗರ ಅಗಿರುವ ಕಾರಣಕ್ಕೆ ಇಡೀ ಪ್ರಕರಣವನ್ನು ಅವರು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಗಾಜಿನ ಮನೆಯಲ್ಲಿ ಕೂತು ಕಾಂಗ್ರೆಸ್ ಕಲ್ಲು ಹೊಡೆಯುತ್ತಿದೆ!!
ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುತ್ತಿದೆ. ಆ ಕಲ್ಲು ಯಾರಿಗೆ ಬೀಳುತ್ತದೆ? ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಸಂಬಂಧಿಸಿದ ಕೆಲ ಹೆಸರುಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಆದರೆ, ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅವರು ಮಾರ್ಮಿಕವಾಗಿ ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಾಕ್ಷಿ ಸಮೇತ ಹೋರಾಟ ಮಾಡಿದ್ದು ಜೆಡಿಎಸ್ ಮಾತ್ರ. ನಮ್ಮ ಹೋರಾಟದ ಫಲವಾಗಿ ಯಾರೆಲ್ಲ ಜೈಲಿಗೆ ಹೋದರು ಎನ್ನುವುದು ಜನತೆಗೆ ಗೊತ್ತಿದೆ ಎಂದು ಅವರು ತಿಳಿಸಿದರು.
ಸರಕಾರ ಏನು ಮಾಡುತ್ತಿದೆ?
ರಾಜ್ಯದಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ರೈತರು, ಸಾಮಾನ್ಯ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಂತ್ರಿಗಳು, ಅಧಿಕಾರಿಗಳು ಏನು ಮಾಡುತ್ತಿದ್ದರೋ ಗೊತ್ತಿಲ್ಲ. ಅವರಿಗೆಲ್ಲ ಯಾರು ಕೆಲಸ ಹೇಳುತ್ತಿದ್ದರೋ ತಿಳಿಯುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತ ಪರಿಸ್ಥಿತಿ ಇದೆ. ಯಾರೂ ಜನರ ಸಮಸ್ಯೆ ಆಲಿಸುತ್ತಿಲ್ಲ. ಆಡಳಿತ ಯಂತ್ರ ಕುಸಿಯುವ ಹಂತಕ್ಕೆ ಹೋಗುವುದರೊಳಗೆ ಅತ್ತ ಸರಕಾರ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಬಿಬಿಎಂಪಿ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ವ್ಯಕ್ತ ಮಾಡಿರುವ ಅಭಿಪ್ರಾಯವನ್ನು ಎಲ್ಲರೂ ಗಮನಿಸಬೇಕು. ಮುಖ್ಯ ಆಯುಕ್ತರನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನ್ಯಾಯಾಲಯ ಸರಕಾರಕ್ಕೆ ನೀಡಿದೆ. ಇದೆಲ್ಲವನ್ನು ಸರಕಾರ ಕೂಡಲೇ ಸರಿ ಮಾಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಪರಿಷತ್ ಚುನಾವಣೆ; ಅಭ್ಯರ್ಥಿಗಳ ಆಯ್ಕೆ ಇನ್ನೂ ಆಗಿಲ್ಲ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ‘ಗೆ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಇನ್ನು ಅಂತಿಮಗೊಳಿಸಿಲ್ಲ ಎಂದರು.
ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧೆ ಪ್ರಸ್ತಾವನೆ ಪಕ್ಷದ ಕಚೇರಿಗೆ ಬಂದಿಲ್ಲ. ಹಾಸನ ಜಿಲ್ಲೆಯಲ್ಲಿ ಆರು ಶಾಸಕರು ಹಾಗೂ ಮುಖಂಡರು ಇದ್ದಾರೆ. ಅವರು ಯಾವ ಅಭ್ಯರ್ಥಿಯನ್ನು ಅಂತಿಮ ಮಾಡುತ್ತರೋ ನೋಡಬೇಕು. ಸೂಕ್ತ ಅಭ್ಯರ್ಥಿ ಹೆಸರನ್ನು ಸೂಚಿಸಿದ ನಂತರ ಮಾತನಾಡುತ್ತೇನೆ ಎಂದರು ಅವರು.
ಉಳಿದಂತೆ ಎಲ್ಲೆಲ್ಲಿ ನಮ್ಮ ಅಭ್ಯರ್ಥಿಗಳನ್ನು ಹಾಕಬೇಕೋ ಅಲ್ಲೆಲ್ಲಾ ಈಗಾಗಲೇ ಚರ್ಚೆ, ಸಮಾಲೋಚನೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ ಗೌಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.