ಮಹಿಷಿ ವರದಿ ಜಾರಿಗಾಗಿ ಉರುಳು ಸೇವೆ
Team Udayavani, Nov 12, 2021, 10:51 AM IST
ಸೇಡಂ: ಸ್ಥಳೀಯ ಸಿಮೆಂಟ್ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡದೇ, ಹೊರ ರಾಜ್ಯದವನ್ನು ಪರಿಗಣಿಸಿ ನೌಕರಿ ನೀಡುತ್ತಿರುವುದನ್ನು ಖಂಡಿಸಿ, ಸರೋಜಿನಿ ಮಹಿಷಿ ವರದಿ ಪ್ರಕಾರ ಶೇ.80 ಕನ್ನಡಿಗರಿಗೆ ನೌಕರಿ ನೀಡುವಂತೆ ಆಗ್ರಹಿಸಿ ಕರವೇ (ಶೆಟ್ಟಿ) ಅಧ್ಯಕ್ಷ ರಾಮಚಂದ್ರ ಗುತ್ತೇದಾರ ಅಧಿಕಾರಿಗಳೆದುರು ಉರುಳು ಸೇವೆ ಮಾಡಿದ್ದಾರೆ.
ತಾಲೂಕಿನ ಕೋಡ್ಲಾ- ಬೆನಕನಹಳ್ಳಿಯ ಶ್ರೀ ಸಿಮೆಂಟ್ ಎದುರು ಕನ್ನಡಿಗರಿಗಾದ ಅನ್ಯಾಯ ಖಂಡಿಸಿ ಕರವೇ ಕೈಗೊಂಡ ಉಪವಾಸ ಸತ್ಯಾಗ್ರಹದ ವೇಳೆ ಉರುಳು ಸೇವೆ ಮಾಡಿ, ಕಾರ್ಖಾನೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಬಿಹಾರ, ರಾಜಸ್ಥಾನ, ತೆಲಂಗಾಣದವರಿಗೆ ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಮೊದಲ ಆದ್ಯತೆ ನೀಡಿ, ಸ್ಥಳೀಯ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಇದರಿಂದ ಉದ್ಯೋಗವಿಲ್ಲದೆ ಸ್ಥಳೀಯ ಯುವಕರು ಬದುಕು ನಡೆಸುವುದು ದುಸ್ತರವಾಗಿದೆ. ವಾರದೊಳಗೆ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಕಾರ್ಖಾನೆಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಕರವೇ ತಾಲೂಕು ಅಧ್ಯಕ್ಷ ರಾಮಚಂದ್ರ ಗುತ್ತೇದಾರ, ಮಹೇಶ ಪಾಟೀಲ, ಶ್ರೀನಿವಾಸರೆಡ್ಡಿ ಮದನಾ, ದೇವು ನಾಟಿಕಾರ ಕಾಚವಾರ, ಸಂಜಪ್ಪ ನೀಲಿ, ಪ್ರವೀಣ ಕೋಡ್ಲಾ, ಸುರೇಶರೆಡ್ಡಿ ಮದನಾ, ಮಲ್ಲಿಕಾರ್ಜುನ ಕಾಕಲವಾರ, ವಿಠuಲರಾವ್, ಚಂದ್ರಶೇಖರ ಪೂಜಾರಿ, ರವಿಸಿಂಗ ಇಮಡಾಪೂರ, ಚನ್ನಬಸಪ್ಪ ಬೆನಕನಹಳ್ಳಿ, ಗುಂಡಪ್ಪ ಪೂಜಾರಿ, ಆಶಪ್ಪ ತಳವಾರ, ಭಿಮಾಶಂಕರ ನಾಟೀಕಾರ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.