ಸುಳ್ಳು ಜಾತಿ ಪತ್ರ: ಮೂವರ ವಿರುದ್ಧ ಪ್ರಕರಣ
Team Udayavani, Nov 12, 2021, 3:36 PM IST
ಸಾಗರ: ಇಲ್ಲಿನ ನಗರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಗಣಾಧೀಶ್ ಅವರಿಗೆ ಸುಳ್ಳು ಜಾತಿ ದೃಢೀಕರಣ ಪತ್ರ ವಿತರಿಸಿದ ಸಂಬಂಧ ಮೂವರ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಹಿಂದೆ ಇಲ್ಲಿ ತಹಶೀಲ್ದಾರ್ ಆಗಿದ್ದ ಶಾಂತಿ ನಾಯ್ಕ್, ರಾಜಸ್ವ ನಿರೀಕ್ಷಕ ದಾನಪ್ಪ, ಗ್ರಾಮ ಲೆಕ್ಕಾಧಿಕಾರಿ ರೇಣುಕಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಣಾಧೀಶ್ ಅವರು ಆದಿ ಕರ್ನಾಟಕ ಜಾತಿಗೆ ಸೇರಿದವರು ಎಂದು ಜಾತಿ ದೃಢೀಕರಣ ಪತ್ರ ನೀಡಲಾಗಿತ್ತು. ಆದರೆ ಅವರು ಅರುಂಧತಿ ಜಾತಿಗೆ ಸೇರಿದವರು ಎಂದು ಬೆಂಗಳೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಾಗಿತ್ತು.
ಇದನ್ನೂ ಓದಿ:ಪರಿಷತ್ ಚುನಾವಣೆಯಲ್ಲಾದರೂ ಬ್ರಾಹ್ಮಣರಿಗೆ ಬಿಜೆಪಿ ಟಿಕೆಟ್ ಕೊಡಿ; ಮಸನ ಎಚ್ಚರಿಕೆ
ಬೆಂಗಳೂರಿನ ಜಾರಿ ನಿರ್ದೇಶನಾಲಯ ಈ ಬಗ್ಗೆ ತನಿಖೆ ನಡೆಸುವಂತೆ ದಾವಣಗೆರೆಯ ನಿರ್ದೇಶನಾಲಯದ ಕಚೇರಿಗೆ ಸೂಚನೆ ನೀಡಿತ್ತು. ದಾವಣಗೆರೆಯ ಕಚೇರಿಯ ಕೋರಿಕೆಯಂತೆ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ಗಣಾಧೀಶ್ ಅವರ ಜಾತಿ ಕುರಿತು ವಿಚಾರಣೆ ನಡೆಸಿ ಅವರಿಗೆ ನೀಡಿದ್ದ ಆದಿ ಕರ್ನಾಟಕ ಜಾತಿ ಧೃಢೀಕರಣ ಪತ್ರವನ್ನು ರದ್ದುಗೊಳಿಸುವಂತೆ ಸಾಗರದ ತಹಶೀಲ್ದಾರ್‌ರಿಗೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.