![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 12, 2021, 6:58 PM IST
ತುಮಕೂರು :’ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಮುಖ್ಯಮಂತ್ರಿಗಳು ಆದೇಶ ಕೊಟ್ಟಿದ್ದಾರೆ,ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು,’ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳಲ್ಲ, ಯಾರೂ ಅದರಲ್ಲಿ ಭಾಗಿಯಾಗಿದ್ದಾರೋ ಅವರ ಮೇಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ಇದು ಬಂದಿದೆ,ಖಂಡಿತ ಇದು ಬಹಳ ಪ್ರಮುಖವಾದ ವಿಚಾರ. ಸೂಕ್ತ ಕ್ರಮ ಕೈಗೊಳ್ಳುತ್ತಾರೆ’ ಎಂದರು.
ಬದಲಾವಣೆ ಮಾತೇ ಇಲ್ಲ
ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಈಗ ತಾನೇ ನಾನು ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೆನೆ. ಅವರು ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ,ಬೊಮ್ಮಾಯಿ ಒಳ್ಳೆ ಕೆಲಸ ಮಾಡುತಿದ್ದಾರೆ. ಆವರೇ ಮುಂದುವರಿಯುತ್ತಾರೆ, ಅವರೇ ಅವಧಿ ಪೂರ್ಣ ಮಾಡುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಯಾವುದೇ ಸುದ್ದಿಗಳು ಇಲ್ಲ’ ಎಂದರು.
You seem to have an Ad Blocker on.
To continue reading, please turn it off or whitelist Udayavani.