ಬೆಸೆಂಟ್ ಜಂಕ್ಷನ್- ಕಲಾಕುಂಜ ಕಾಂಕ್ರೀಟ್ ಕಾಮಗಾರಿ ಆರಂಭ: ದಿನ ವಾಹನ ಸಂಚಾರ ನಿರ್ಬಂಧ
Team Udayavani, Nov 13, 2021, 4:20 AM IST
ಎಂ.ಜಿ. ರಸ್ತೆ: ಇಲ್ಲಿಯ ಬೆಸೆಂಟ್ ಜಂಕ್ಷನ್ನಿಂದ ಕಲಾಕುಂಜಕ್ಕೆ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್ ಹಾಕುವ ಕಾಮಗಾರಿ ಆರಂಭಿಸಲಾಗಿದೆ.
ಹಲವು ದಿನಗಳ ಹಿಂದೆಯೇ ಒಳಚರಂಡಿ ಕಾಮಗಾರಿ ನಡೆಸಲಾಗಿತ್ತು. ಹೀಗಾಗಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಮಾರ್ಪಾಡಿಸಲಾಗಿತ್ತು. ಆ ಬಳಿಕ ಲಘುವಾಹನಗಳು ಸಂಚರಿಸುತ್ತಿದ್ದವು. ಈಗ ಕಾಮಗಾರಿ ಕಾರಣ ದಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಒಂದು ಭಾಗದ ಕಾಮಗಾರಿ ಮುಗಿ ದಿದ್ದು, ಮತ್ತೂಂದು ಭಾಗದ ಕೆಲಸ ನಡೆಯುತ್ತಿದೆ. ಒಂದು ವಾರದೊಳಗೆ ಕಾಂಕ್ರೀಟ್ ಹಾಕಲಿದ್ದು, ಬಳಿಕ ಕ್ಯೂರಿಂಗ್ಗೆ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಕ್ಯೂರಿಂಗ್ ಕಾರ್ಯ ಬೇಗ ಮುಗಿದರೆ ನಿಗದಿತ ಅವಧಿಗಿಂತ (21) ಮೊದಲೇ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು.
ಜೈಲ್ ರಸ್ತೆ ಕಾಮಗಾರಿ:
ಇಲ್ಲಿನ ಕಾಮಗಾರಿ ಮುಗಿದ ಬಳಿಕ ಬೆಸೆಂಟ್ ಜಂಕ್ಷನ್ನಿಂದ ಜೈಲ್ ರೋಡ್ ಸಂಪರ್ಕಿಸುವ ರಸ್ತೆಗೆ ಕಾಂಕ್ರೀಟ್ ಹಾಕಲಾಗುವುದು. ಸದ್ಯ ಇಲ್ಲಿ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ.
ನವಭಾರತ್ ಸರ್ಕಲ್ನಿಂದ ಶಾರದಾ ಕಾಲೇಜು ಮುಂಭಾಗದ ರಸ್ತೆ ಕಾಂಕ್ರೀಟ್ ಕಾಮಗಾರಿ ಇತ್ತೀಚೆಗೆ ಮುಕ್ತಾಯವಾಗಿದ್ದು, ಫುಟ್ಪಾತ್ ಕಾಮಗಾರಿ ಕೊನೆ ಹಂತದಲ್ಲಿದೆ. ವಿದ್ಯುತ್ ಕಂಬಗಳ ಬದಲಾವಣೆ ಪ್ರಕ್ರಿಯೆ ಕೆಲವು ದಿನದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.