ಕಾಯಿನ್‌ ಕುತೂಹಲ


Team Udayavani, Nov 13, 2021, 7:20 AM IST

ಕಾಯಿನ್‌ ಕುತೂಹಲ

ಬೆಂಗಳೂರು: ರಾಜ್ಯದಲ್ಲಿ “ಬಿಟ್‌ ಕಾಯಿನ್‌ ವಿವಾದ’ ಬಿರು ಗಾಳಿ ಎಬ್ಬಿಸಿದ್ದು, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿಯಿಂದ ವಾಪಸಾಗುತ್ತಲೇ ಮಾಜಿ ಮುಖ್ಯ ಮಂತ್ರಿ ಜಗದೀಶ್‌ ಶೆಟ್ಟರ್‌ ದಿಢೀರ್‌ ದಿಲ್ಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ದಿಲ್ಲಿಗೆ ತೆರಳಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಬಂದ ಮರುದಿನವೇ ಶೆಟ್ಟರ್‌ ದಿಲ್ಲಿಯತ್ತ ಹೋಗಿರುವುದು ನಾನಾ ಊಹಾಪೋಹಗಳನ್ನು ಹುಟ್ಟುಹಾಕಿದೆ. ಶೆಟ್ಟರ್‌ ರವಿವಾರದವರೆಗೂ ದಿಲ್ಲಿಯಲ್ಲೇ ಇರಲಿದ್ದಾರೆ. ಇದರ ನಡುವೆ ಗೋವಿಂದ ಕಾರಜೋಳ, ಮುರುಗೇಶ್‌ ನಿರಾಣಿ ಸೇರಿ ಇನ್ನೂ ಕೆಲವು ನಾಯಕರು ದಿಲ್ಲಿಗೆ ಹೋಗುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.

ವೈಯಕ್ತಿಕ ಕೆಲಸಕ್ಕಾಗಿ ದಿಲ್ಲಿಗೆ ಬಂದಿದ್ದೇನೆ, ರಾಜಕೀಯ ನಾಯಕರ ಭೇಟಿ ಅಥವಾ ಪಕ್ಷದ ವರಿಷ್ಠರ ಭೇಟಿ ಕಾರ್ಯಕ್ರಮವಿಲ್ಲ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದರೂ ಪ್ರಸ್ತುತ ಸಂದರ್ಭದಲ್ಲಿನ ಭೇಟಿ ಮಹತ್ವ ಪಡೆದುಕೊಂಡಿದೆ.

ಶೆಟ್ಟರ್‌ ಅವರನ್ನು ಪಕ್ಷದ ವರಿಷ್ಠರೇ ಕರೆಸಿಕೊಂಡಿದ್ದಾರೆ. ಪಕ್ಷದ ನಾಯಕರ ಜತೆ ಎರಡು ಮೂರು ಹಂತದ ಚರ್ಚೆ, ಸಮಾಲೋಚನೆ ನಡೆ ಯುವ ಸಾಧ್ಯತೆಯಿದೆ. ಇದಾದ ಅನಂತರ ಮತ್ತಷ್ಟು ನಾಯಕರನ್ನು ಕರೆಸಿಕೊಳ್ಳಲಿದ್ದಾರೆ ಎಂಬೆಲ್ಲ ಮಾತುಗಳು ಕೇಳಿಬರುತ್ತಿವೆ. ಶೆಟ್ಟರ್‌ರನ್ನು ವರಿಷ್ಠರೇ ಕರೆಸಿಕೊಂಡಿದ್ದು ನಿಜವಾಗಿದ್ದರೆ ಇನ್ನೆರಡು ಮೂರು ದಿನಗಳಲ್ಲಿ ರಾಜಕೀಯ ವಲಯದಲ್ಲಿ ಹೊಸ ಚಟುವಟಿಕೆಗಳು ಗರಿ ಗೆದರುವ ಸಾಧ್ಯತೆಗಳಿವೆ.

ಬೊಮ್ಮಾಯಿ ಸಿಎಂ ಆದ ಬಳಿಕ ಶೆಟ್ಟರ್‌ ಸಚಿವ ಸಂಪುಟ ಸೇರುವುದಿಲ್ಲ ಎಂದಿದ್ದರು. ಬಳಿಕ ಎರಡು ಬಾರಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಶೆಟ್ಟರ್‌ ಗುರುವಾರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬಂದು ಅನಂತರ ದಿಲ್ಲಿಗೆ ತೆರಳಲಿ ದ್ದಾರೆ ಎನ್ನಲಾಗಿತ್ತು. ಆದರೆ ಹುಬ್ಬಳ್ಳಿಯಿಂದಲೇ ದಿಲ್ಲಿಗೆ ಬರುವಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ಅಲ್ಲಿಂದಲೇ ತೆರಳಿದರು ಎನ್ನಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನವರು ದಾಖಲೆ ಇಲ್ಲದೆ ಮಾತನಾಡುತ್ತಿದ್ದಾರೆ. ತಮ್ಮ ದಿಲ್ಲಿ ಪ್ರವಾಸ ವೈಯಕ್ತಿಕ ಎಂದು ಶೆಟ್ಟರ್‌ ಅವರೇ ಹೇಳಿದ್ದಾರೆ ಎಂದು ತುಮಕೂರಿನಲ್ಲಿ  ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯಿಸಿದ್ದಾರೆ.

ಮುಂದುವರಿದ ವಾಗ್ಧಾಳಿ:

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌,  ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌  ಬಿಜೆಪಿ ಸರಕಾರದ ವಿರುದ್ಧ ವಾಗ್ಧಾಳಿ ಮುಂದುವರಿ ಸಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಅಧಿಕಾರಿಗಳ ನಡುವಿನ ಸಂಭಾಷಣೆ ಆಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದ್ದು, ಇದನ್ನು ಕಾಂಗ್ರೆಸ್‌  ಪ್ರಸ್ತಾವಿಸಿದೆ.

ಬಿಟ್‌ ಕಾಯಿನ್‌ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ತತ್‌ಕ್ಷಣ ತನಿಖೆ ನಡೆಸಿ ಆರೋಪ ಸುಳ್ಳೆಂದು ಸಾಬೀತುಪಡಿಸಿ ಎಂದು ಸೂಚಿಸಬೇಕಾಗಿದ್ದ ಪ್ರಧಾನಿ ಮೋದಿಯವರೇ “ಆರೋಪ ನಿರ್ಲಕ್ಷಿಸಿ’ ಎಂದು ಹೇಳುವುದು ಸರಿಯೇ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್‌ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ, ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ನಾಯಕರ ಹೆಸರು ಇದೆ ಎಂದು ನಮ್ಮ ಬಾಯಿ ಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಹಾಗೂ ರಾಜ್ಯದಲ್ಲಿ ನಿಮ್ಮದೇ ಸರಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆ ಎಳೆಯಿರಿ ಎಂದು ಸವಾಲು ಹಾಕಿದ್ದಾರೆ.

ಮತ್ತೂಂದೆಡೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿ ಸರಕಾರದಲ್ಲಿ ಮೂರನೇ ಮುಖ್ಯಮಂತ್ರಿ ಯಾಗುವ ತಮ್ಮ ಮಾತಿಗೆ ಈಗಲೂ ಬದ್ಧ. ಮುಂದೆ ಕಾದುನೋಡಿ ಎಂದು ಹೇಳಿದ್ದಾರೆ. ಜತೆಗೆ ಶ್ರೀಕಿ ಹಾಗೂ ಆತನ ಸ್ನೇಹಿತ ನಡೆಸಿರುವ ಬಿಟ್‌ ಕಾಯಿನ್‌ ವ್ಯವಹಾರಗಳ ಕುರಿತ ಕೆಲವು ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ. ಸರಕಾರಕ್ಕೆ ಕೆಲವು ಪ್ರಶ್ನೆಗಳನ್ನೂ ಹಾಕಿದ್ದಾರೆ.

ಆಡಿಯೋ ಬಿಡುಗಡೆ :

ರಾಜಕೀಯ ವಾಗ್ಯುದ್ಧ ಮುಂದುವರಿದಿರುವಂತೆಯೇ ಬಿಟ್‌ಕಾಯಿನ್‌ ಹಗರಣದ ಸಂಬಂಧ ಹಿರಿಯ (ಐಪಿಎಸ್‌?) ಅಧಿಕಾರಿ ಮತ್ತು ಕಿರಿಯ ಅಧಿಕಾರಿ (ಸಿಸಿಬಿ ಇನ್‌ಸ್ಪೆಕ್ಟರ್‌?) ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದರಿಂದಾಗಿ ಪ್ರಕರಣದಲ್ಲಿ ರಾಜಕಾರಣಿಗಳು ಮತ್ತು ಪೊಲೀಸ್‌ ಅಧಿಕಾರಿಗಳೂ ಭಾಗಿಯಾಗಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಆಡಿಯೋ ದಲ್ಲಿ, ರಾಜಕಾರಣಿಗಳು ಮತ್ತು ಪೊಲೀಸ್‌ ಅಧಿಕಾರಿಗಳು ಅಕ್ರಮ ನಡೆಸಿರುವ ಬಗ್ಗೆ ಇಬ್ಬರು ಮಾತುಕತೆ ನಡೆಸಿದ್ದಾರೆ. ಬಿಟ್‌ ಕಾಯಿನ್‌ ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಅಕೌಂಟ್‌ನಿಂದ ಅನೇಕ ಮಂದಿಗೆ ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿಯನ್ನು ಆಡಿಯೊ ಮೂಲಕ ಇನ್‌ಸ್ಪೆಕ್ಟರ್‌ ಬಿಚ್ಚಿಟ್ಟಿ ದ್ದಾರೆ. ಮಂತ್ರಿಗಳಿಗೆ ಬಿಟ್‌ ಕಾಯಿನ್‌ ವರ್ಗಾವಣೆ ಯಾಗಿದೆ ಎಂದೂ ಅವರು ಹೇಳಿಕೊಂಡಿದ್ದಾರೆ.

ಡಿಕೆಶಿ ಬಾಂಬ್‌ :

ಬಿಟ್‌ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿ ನಮಗೆ ದಾಖಲೆ ಒದಗಿಸುತ್ತಿರುವುದೇ ಬಿಜೆಪಿ ಸಚಿವರು ಹಾಗೂ ಸರಕಾರದ ಅಧಿಕಾರಿ ಗಳು. ಶತ ಪ್ರತಿಶತದಷ್ಟು ದಾಖಲೆ ಸಂಗ್ರಹಿಸ ಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ “ಬಾಂಬ್‌’ ಸಿಡಿಸಿದ್ದಾರೆ. ಇದರಿಂದ ರಾಜಕೀಯ ವಲಯದಲ್ಲಿ ಗುಸು ಗುಸು ಪ್ರಾರಂಭವಾಗಿದೆ. ಪ್ರಧಾನಿಗೆ ಬರೆಯಲಾಗಿರುವ ಪತ್ರದ ಬಗ್ಗೆ ಯಾರೂ ಯಾಕೆ ಮಾತನಾಡುತ್ತಿಲ್ಲ ಎಂದೂ ಡಿ.ಕೆ. ಶಿವಕುಮಾರ್‌ ಅವರು ಪ್ರಶ್ನಿಸಿದ್ದಾರೆ.

ಆಧಾರರಹಿತ ಆರೋಪಗಳಿಗೆ ಉತ್ತರಿಸಲಾಗದು: ಸಿಎಂ :

ಬಿಟ್‌ಕಾಯಿನ್‌ ವಿಚಾರವಾಗಿ ಎಲ್ಲವೂ ಆಧಾರರಹಿತ ಆರೋಪ ಗಳು. ರಾಜ್ಯ ಸರಕಾರ ಈಗಾಗಲೇ ಇಡಿ ತನಿಖೆಗೆ ವಹಿಸಿದೆ. ಪ್ರತಿದಿನ ಇಂತಹ ಆಧಾರರಹಿತ ಆರೋಪಗಳಿಗೆ ಉತ್ತರಿಸಲು ಆಗುವುದಿಲ್ಲ. ಯಾವ ಆಧಾರದಲ್ಲಿ ಈ ಆರೋಪಗಳನ್ನು ಮಾಡುತ್ತಿದ್ದಾರೆ? ಒಬ್ಬೊಬ್ಬರು ಎರಡು ಸಾವಿರ, ಮೂರು ಸಾವಿರ ಅಂತ ಒಂದೊಂದು ಸಂಖ್ಯೆ ಹೇಳುತ್ತಿದ್ದಾರೆ. ವಿಪಕ್ಷಗಳು ರಾಜಕೀಯ ಪ್ರೇರಿತ ಆರೋಪ ಮಾಡುತ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.