ಯುವಕರಲ್ಲಿ ಕುತೂಹಲ ಹೆಚ್ಚಿಸಿದ ಸುಲಭ ಕೃಷಿ

ನಾಲ್ಕು ದಿನಗಳ ಕೃಷಿ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಭೇಟಿ

Team Udayavani, Nov 13, 2021, 9:33 AM IST

ಯುವಕರಲ್ಲಿ ಕುತೂಹಲ ಹೆಚ್ಚಿಸಿದ ಸುಲಭ ಕೃಷಿ

ಬೆಂಗಳೂರು: ಕೊರೊನಾ ನಂತರದ ಕಾಲಘಟ್ಟದಲ್ಲಿ ನಗರ ಜೀವನಕ್ಕೆ ಗುಡ್‌ ಬೈ ಹೇಳಿ ಹಳ್ಳಿಗಳತ್ತ ಸಾಗಿರುವ ಯುವಕರು, ಕೃಷಿಯತ್ತ ಒಲವು ತೋರಿದ್ದಾರೆ. ಸುಲಭವಾಗಿ ಕೃಷಿ ಮಾಡಲು ಸಿಗಬಹುದಾದ ಯಂತ್ರೋ ಪಕರಣ ಗಳಿಗೆ ಹುಡುಕಾಟದಲ್ಲಿ ನಿರತರಾಗಿದ್ದರು. ಜಿಕೆವಿಕೆಯಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಕೃಷಿ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಭೇಟಿ ನೀಡುತ್ತಿದ್ದು, ಆಧುನಿಕ ಕೃಷಿ ಯಂತ್ರೋಪಕರಣ ಗಳು, ನೂತನ ಕೃಷಿ ಪದ್ಧತಿ, ಉತ್ತಮ ಇಳುವರಿ ನೀಡ ಬಹುದಾದ ಬೆಳೆಗಳು, ವಾಣಿಜ್ಯ ಬೆಳೆಗಳು ಮತ್ತು ಸಣ್ಣ ರೈತರಾಗಿ ಒಂದೆರಡು ಎಕರೆ ಪ್ರದೇಶಗಳಲ್ಲಿ ಬೆಳೆಯ ಬಹುದಾದ ಮತ್ತು ಉತ್ತಮ ಆದಾಯ ಬರುವಂತಹ ಬೆಳೆಗಳತ್ತ ಯುವಕರು ನೋಟ ಹರಿಸಿದ್ದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಸಂಖ್ಯೆ ಇಳಿಮುಖವಾಗು¤ತಿದೆ. ಅದರ ಜೊತೆಗೆ ಕೃಷಿ ಕಾರ್ಮಿಕರ ಕೂಲಿ ಕೂಡ ಹೆಚ್ಚಳವಾಗುತ್ತಿದೆ. ಇದರಿಂದ ಸಣ್ಣ ರೈತರು, ವ್ಯವಸಾಯಕ್ಕೆ ಹೂಡಿರುವ ಹಣದ ಜೊತೆಗೆ ಲಾಭ ಕಡಿಮೆಯಾಗುತ್ತಿದೆ. ಹೀಗಾಗಿ, ಕೃಷಿ ಯಂತ್ರೋಪಕರಣಗಳನ್ನು ಬಳಸಿ ಸುಲಭವಾಗಿ ಕೃಷಿ ಮಾಡಬಹುದಾದ ಯಂತ್ರಗಳ ಮಾಹಿತಿಯನ್ನು ಯುವಕರು ಕೇಳಿ ಪಡೆಯುತ್ತಿದ್ದರು.

ಯಾವ ಬೆಳೆಗಳಿಗೆ ಆದ್ಯತೆ?: ತೋಟಗಾರಿಕಾ ಬೆಳೆಗಳಾದ ಟೊಮ್ಯಾಟೋ, ದಪ್ಪ ಮೆಣಸಿನಕಾಯಿ, ಹಸಿರು ಮೆಣಸಿನಕಾಯಿ, ಹುರುಳಿಕಾಯಿ, ಬದನೆಕಾಯಿ, ಕ್ಯಾರೇಟ್‌, ಆಹಾರ ಬೆಳೆಗಳಾದ ರಾಗಿ, ಭತ್ತ, ಕಡಿಮೆ ನೀರಿನಲ್ಲಿ ಮತ್ತು ಖುಷ್ಕಿ ಜಮೀನುಗಳಲ್ಲಿ ಬೆಳೆಯ ಬಹುದಾದ ಸಿರಿಧಾನ್ಯಗಳಾದ ಸಾಮೆ, ಆರ್ಕ, ನವಣೆ, ಬರಗು, ಎಣ್ಣೆಕಾಳುಗಳು ಮತ್ತು ಫಾಸ್ಟ್‌ ಫ‌ುಡ್‌ ಗಳಿಗೆ ಬಳಸಬಹುದಾದ ವಿದೇಶಿ ತರಕಾರಿಗಳನ್ನು ಬೆಳೆಯಲು ಯುವ ರೈತರು ಆಸಕ್ತಿ ತೋರುತ್ತಿದ್ದಾರೆ.

ಇದಕ್ಕಾಗಿ ಕಳೆ ತೆಗೆಯುವುದು, ಬದು ನಿರ್ಮಾಣ, ಗುಳಿ ತೋಡುವುದು, ಉಳುಮೆ ಮಾಡುವುದು, ಕೀಟನಾಶಕ ಸಿಂಪಡಣೆ ಮತ್ತು ಕೊಯ್ಲು ಕೆಲಸವನ್ನು ಸುಲಭಗೊಳಿಸುವ ಯಂತ್ರಗಳಿಗೆ ಹೆಚ್ಚಿನ ಜನರು ಆಸಕ್ತಿಯಿಂದ ನೋಡುತ್ತಿದ್ದರು. ಈ ಕುರಿತು ಮಾತನಾಡಿದ ಮೈಸೂರಿನ ರೈತ ಮಹದೇವಪ್ಪ, ಇಸ್ರೇಲ್‌ ಮಾದರಿ ಕೃಷಿಯಿಂದ ನೀರಿನ ಬಳಕೆ ಮತ್ತು ಕೃಷಿ ಕಾರ್ಮಿಕರ ಬಳಕೆ ಎರಡೂ ಕೂಡ ಕಡಿಮೆಯಾಗುತ್ತದೆ.

ಯಂತ್ರೋಪಕರಣಗಳನ್ನು ಬಳಸಿಕೊಳ್ಳುವ ಜೊತೆಗೆ ಆಧುನಿಕ ತಂತ್ರಜ್ಞಾನ ಗಳನ್ನು ಅಳವಡಿಸಿಕೊಂಡರೆ, ಹೆಚ್ಚಿನ ಪ್ರಮಾಣದಲ್ಲಿ ಇಳುವರಿ ತೆಗೆಯಲು ಸಾಧ್ಯವಾಗುತ್ತದೆ. ಅದಕ್ಕಾಗಿ ಬೇಕಾಗುವ ಸಲಕರಣೆಗಳನ್ನು ನೋಡುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಮಾನ್ಯವಾಗಿ ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ದೇಸಿ ಬೆಳೆಗಳಾದ ಕಬ್ಬು, ಭತ್ತ, ರಾಗಿಯನ್ನೇ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದಾರೆ.

ಇದನ್ನೂ ಓದಿ:- ಪ್ರಧಾನಿ ಮೋದಿ 4 ಗಂಟೆಯ ಕಾರ್ಯಕ್ರಮಕ್ಕೆ 23 ಕೋಟಿ ರೂ ಖರ್ಚು ಮಾಡುತ್ತಿದೆ ಮ.ಪ್ರದೇಶ ಸರ್ಕಾರ!

ಇದರ ಬದಲಾಗಿ ರೈತರಿಗೆ ಆದಾಯವನ್ನು ತರುವಂತಹ ಬೆಳೆಗಳನ್ನು ಬೆಳೆಯಲು ಆಸಕ್ತನಾಗಿದ್ದೇನೆ. ಹೀಗಾಗಿ, ಕೃಷಿ ಮೇಳದಲ್ಲಿ ಏನಾದರೂ ಅನುಕೂಲವಾಗಬಹುದು ಎಂಬ ಉದ್ದೇಶದಿಂದ ಬಂದಿದ್ದೇನೆ ಎಂದು ತಿಳಿಸಿದರು. ಕೋಲಾರದಿಂದ ಬಂದಿದ್ದ ಸತೀಶ್‌ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ತರಕಾರಿ- ಹೂಗಳನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ ನೀರಿನ ಅಭಾವ ಇರುವುದರಿಂದ ಕಡಿಮೆ ನೀರು ಬಳಸಿಕೊಂಡು ಬೆಳೆಯಬಹುದಾದ ಆಧುನಿಕ ತಂತ್ರಜ್ಞಾನಗಳನ್ನು ತಿಳಿದುಕೊಳ್ಳಲು ಬಂದಿದ್ದೇನೆ ಎಂದು ಹೇಳಿದರು.

“ಸಿಲಿಕಾನ್‌ ಸಿಟಿಯಲ್ಲಿ ಫಾಸ್ಟ್‌ ಫ‌ುಡ್‌ ಗಳಿಗೆ ತುಂಬಾನೇ ಬೇಡಿಕೆ ಇದೆ. ಪಿಜ್ಜಾ, ಬರ್ಗರ್‌ ಸೇರಿದಂತೆ ಇನ್ನಿತರ ಫಾಸ್ಟ್‌ ಫ‌ುಡ್‌ಗಳಿಗೆ ಬೇಕಾಗುವ ಸೊಪ್ಪು-ತರಕಾರಿ ಬೆಳೆಯಲು ಕೃಷಿ ಇಲಾಖೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು.” ಸಿದ್ಧಲಿಂಗಪ್ಪ, ತುಮಕೂರು.

“ಸಿರಿಧಾನ್ಯಗಳನ್ನು ಒಕ್ಕಣೆ ಮಾಡಲು ಮತ್ತು ಸ್ವತ್ಛಗೊಳಿಸಲು ಬೇಕಾಗುವ ಸಲಕರಣೆಗಳನ್ನು ಒದಗಿಸುವ ಬಗ್ಗೆ ಸರ್ಕಾರ ಮತ್ತಷ್ಟು ಕಾಳಜಿ ವಹಿಸಬೇಕು. ನಗರದ ಜನತೆ ಸಿರಿಧಾನ್ಯಗಳನ್ನು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿದ್ದಾರೆ. ಬೇಡಿಕೆ ಕಡಿಮೆ ಇರುವುದರಿಂದ ಸಿರಿಧಾನ್ಯಗಳಿಗೆ ಹೆಚ್ಚಿನ ಬೆಲೆ ಇದೆ. ದೊಡ್ಡ ಮಟ್ಟದಲ್ಲಿ ಬೆಳೆದರೆ, ಎಲ್ಲರೂ ಸಿರಿಧಾನ್ಯ ಬಳಸಲು ಸಹಕಾರಿಯಾಗಲಿದೆ.” ತಿಪ್ಪೇಸ್ವಾಮಿ, ಚಿತ್ರದುರ್ಗ

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.